NEWSನಮ್ಮಜಿಲ್ಲೆರಾಜಕೀಯ

ಎಎಪಿಯಿಂದ ಬೆಂಗಳೂರು ರಸ್ತೆ ಗುಂಡಿ ಬಿದ್ದಿರುವುದನ್ನು ಖಂಡಿಸಿ 10 ದಿನಗಳ ಜನಜಾಗೃತಿ, ಸಹಿ ಸಂಗ್ರಹ

ಡಿಸೆಂಬರ್ 4ರಿಂದ ಹತ್ತು ದಿನಗಳ ಕಾಲ ಬೃಹತ್‌ ಜನಜಾಗೃತಿ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಸ್ತೆ ಗುಂಡಿಗಳಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಡಿಸೆಂಬರ್ 4ರಿಂದ ಹತ್ತು ದಿನಗಳ ಕಾಲ ಬೆಂಗಳೂರಿನಾದ್ಯಂತ ಬೃಹತ್‌ ಜನಜಾಗೃತಿ ಅಭಿಯಾನ ಹಾಗೂ ಸಹಿ ಸಂಗ್ರಹಣಾ ಚಳವಳಿ ಹಮ್ಮಿಕೊಂಡಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ನಗರ ಎಎಪಿ ಉಪಾಧ್ಯಕ್ಷ ಬಿ.ಟಿ.ನಾಗಣ್ಣ, “ರಸ್ತೆಗುಂಡಿ ಮುಕ್ತ ಬೆಂಗಳೂರು ನಿರ್ಮಾಣವು ಆಮ್‌ ಆದ್ಮಿ ಪಾರ್ಟಿಯ ಗುರಿ. ಇದಕ್ಕಾಗಿ ಡಿ. 4ರ ಶನಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದ ಹತ್ತಿರವಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನವನ್ನು ಆರಂಭಿಸುತ್ತೇವೆ ಎಂದರು.

ತೆರೆದ ವಾಹನದ ಮೂಲಕ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರವನ್ನು ಬೆಂಗಳೂರಿನ ಮೂಲೆಮೂಲೆಗೆ ತಲುಪಿಸುತ್ತೇವೆ. ಹತ್ತು ದಿನಗಳಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜನಜಾಗೃತಿ ಮಾಡಿ, ಲಕ್ಷಾಂತರ ಬೆಂಗಳೂರಿಗರ ಸಹಿ ಸಂಗ್ರಹ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ ಎಂದು ತಿಳಿಸಿದರು.

ವಾಹನಗಳ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು ರಸ್ತೆಯ ಗುಣಮಟ್ಟವನ್ನು ನಿರ್ಧರಿಸಬೇಕು. ಆದರೆ ಇಲಾಖೆಗಳು ಈ ನಿಯಮವನ್ನು ಅನುಸರಿಸುತ್ತಿಲ್ಲ. ರಸ್ತೆಯ ಎಲ್ಲ ಪದರಗಳನ್ನು ಗುಣಮಟ್ಟದ ಸಾಮಗ್ರಿ ಬಳಸಿ ನಿರ್ಮಿಸಬೇಕು. ಆದರೆ ಗುಣಮಟ್ಟದ ಸಾಮಗ್ರಿಗೆ ಖರ್ಚಾಗಬೇಕಾದ ಹಣವನ್ನು ಗುತ್ತಿಗೆದಾರರು ಲಪಟಾಯಿಸುತ್ತಿದ್ದಾರೆ. ಅದರಲ್ಲಿ ಇಂಜಿನಿಯರ್‌ಗಳು, ಕಾರ್ಪೊರೇಟರ್‌ ಹಾಗೂ ಶಾಸಕರಿಗೆ ಪಾಲು ಸಿಗುತ್ತಿದೆ ಎಂದರು.

ತಮಿಳುನಾಡು ಹಾಗೂ ಆಂಧ್ರದ ರಸ್ತೆಗಳು ಕರ್ನಾಟಕದ ರಸ್ತೆಗಳಿಗಿಂತಲೂ ಚೆನ್ನಾಗಿರಲು ಕಾರಣವೇನೆಂದು ನಾವು ಯೋಚಿಸಬೇಕು. ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ಎಂದೂ ಅಲ್ಲಿ ಆಡಳಿತ ಮಾಡಿಲ್ಲದಿರುವುದೇ ಇದಕ್ಕೆ ಕಾರಣ ಎಂದು ಬಿ.ಟಿ.ನಾಗಣ್ಣ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಉಪಾಧ್ಯಕ್ಷರಾದ ಸುರೇಶ್‌ ರಾಥೋಡ್‌ ಮಾತನಾಡಿ, ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ 20,000 ಕೋಟಿ ರೂಪಾಯಿ ಎಲ್ಲಿ ಮತ್ತು ಹೇಗೆ ಖರ್ಚಾಗಿದೆ ಎಂಬ ವಿವರವನ್ನು ಸರ್ಕಾರ ಬಹಿರಂಗಪಡಿಸಬೇಕು. ಆ ಹಣವನ್ನು ನುಂಗಿದವರಿಗೆ ಜೈಲು ಶಿಕ್ಷೆ ಆಗಬೇಕು. ರಸ್ತೆಯನ್ನು ಸರಿಪಡಿಸಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಮೂರು ಬೇಡಿಕೆಗಳಾಗಿವೆ ಎಂದರು.

ರಸ್ತೆ ಗುಂಡಿಗಳಿಗೆ ಸಂಬಂಧಿಸಿ ನಾವು ಈ ಹಿಂದೆ ಮಾಡಿದ್ದ ಪ್ರತಿಭಟನೆಗಳು, ರಸ್ತೆಗುಂಡಿ ಹಬ್ಬ ಎಂಬ ವಿನೂತನ ಅಭಿಯಾನ, ಸೋಶಿಯಲ್‌ ಮೀಡಿಯಾ ಚಳವಳಿಗೆ ಉತ್ತಮ ಜನಬೆಂಬಲ ವ್ಯಕ್ತವಾಗಿದೆ. ಗುಂಡಿಗಳಿಗೆ ಕಾರಣರಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ 70ಕ್ಕೂ ಹೆಚ್ಚು ದೂರುಗಳನ್ನು ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ್ದೇವೆ, ಈ ಚಳವಳಿಗೆ ಕೂಡ ಹೆಚ್ಚಿನ ಬೆಂಬಲ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ