NEWSನಮ್ಮಜಿಲ್ಲೆ

ತಿ.ನರಸೀಪುರ: ಆರೋಗ್ಯ, ಶಿಕ್ಷಣ ಕ್ಷೇತ್ರಗಳ ರಾಷ್ಟ್ರೀಕರಣಕ್ಕೆ ಭಾಪಸಂ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ಅಭಿವೃದ್ಧಿಶೀಲ ರಾಷ್ಟ್ರವಾದ ಭಾರತ ಆರೋಗ್ಯ ತುರ್ತುಪರಿಸ್ಥಿತಿ ಹಾಗೂ ಆರ್ಥಿಕ ಹಿನ್ನಡೆಯನ್ನು ಅನುಭವಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಕೂಡಲೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ರಾಷ್ಟ್ರೀಕರಣ ಗೊಳಿಸಬೇಕೆಂದು ಭಾರತೀಯ ಪರಿವರ್ತನಾ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಆಗ್ರಹಿಸಿದರು.

ಪಟ್ಟಣದ ತ್ರಿವೇಣಿ ನಗರದಲ್ಲಿರುವ ನಳಂದ ಬುದ್ಧ ವಿಹಾರದ ಮುಂಭಾಗ ಬುಧವಾರ ಬುದ್ಧ ಪೂರ್ಣಿಮೆ ಪ್ರಯುಕ್ತ ನೆರೆದಿದ್ದ ಸಂಘ ಪದಾಧಿಕಾರಿಗಳು ದೇಶದಾದ್ಯಂತ ಅನಾರೋಗ್ಯ ಸಮಸ್ಯೆ ಹಾಗೂ ಆರ್ಥಿಕ ಬಿಕ್ಕಟ್ಟು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಆಡಳಿತರೂಢ ಸರ್ಕಾರ ಪರಿಸ್ಥಿತಿ ಮತ್ತಷ್ಟು ಭೀಕರ ಗೊಳ್ಳುವುದನ್ನು ತಪ್ಪಿಸಲು ಈ ಎರಡೂ ಕ್ಷೇತ್ರಗಳನ್ನು ರಾಷ್ಟ್ರೀಕರಣಗೊಳಿಸಬೇಕು ಎಂದು ಒತ್ತಾಯಿಸಿ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಿಚಾರವಾದಿ ಕೆ.ಎನ್.ಪ್ರಭುಸ್ವಾಮಿ ಮಾತನಾಡಿ, ಕಳೆದೆರಡು ವರ್ಷಗಳಿಂದ ದೇಶವೇ ಮಾರಕ ವೈರಾಣು ರೋಗ ಕೊರೊನಾ ಸೋಂಕಿನಿಂದ ಆರೋಗ್ಯ ಸಂಕಷ್ಟಕ್ಕೆ ಸಿಲುಕಿದ್ದು, ಬಡವರು ಹಾಗೂ ಮಧ್ಯಮ ವರ್ಗದ ಜನರು ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ಸಿಗದೇ ಸಾವನ್ನಪ್ಪುತ್ತಿದ್ದಾರೆ.

ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಖಾಸಗಿ ಆಸ್ಪತ್ರೆಗಳು ಬಡವರನ್ನು ಸುಲಿಗೆ ಮಾಡುತ್ತಿವೆ. ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಉನ್ನತ ಶಿಕ್ಷಣವನ್ನು ಕೂಡ ಪ್ರತಿಯೊಬ್ಬ ಪ್ರಜೆಗೆ ಉದಾರವಾಗಿ ನೀಡಬೇಕಿರುವ ಹಿನ್ನೆಲೆಯಲ್ಲಿ ಶಿಕ್ಷಣ ಹಾಗೂ ಆರೋಗ್ಯ ಎರಡೂ ಕ್ಷೇತ್ರಗಳು ಸಂಪೂರ್ಣವಾಗಿ ರಾಷ್ಟ್ರೀಕರಣಗೊಳಿಸಬೇಕು. ಒಕ್ಕೂಟದ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪರಮೋಚ್ಚ ಅಧಿಕಾರ ಇರಬೇಕು ಈ ಬಗ್ಗೆ ಗಮನಹರಿಸಬೇಕೆಂದು ಮನವಿ ಮಾಡಿದರು.

ವೈಶಾಖ ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ಘೋಷಣಾ ಫಲಕಗಳು ಪ್ರದರ್ಶನಕ್ಕೂ ಮೊದಲು ಬುದ್ಧ ವಿಹಾರದಲ್ಲಿ ಗೌತಮ ಬುದ್ಧನಿಗೆ ಪುಷ್ಪಾರ್ಚನೆ ಮಾಡಿ, ವಂದನೆ ಸಲ್ಲಿಸಲಾಯಿತು. ಹೊರಳಹಳ್ಳಿ ಮಧು, ಹೊಸಪುರ ಸಿದ್ದು, ಸಂಕೇಶ್, ಮೂಗೂರು ನಾರಾಯಣಸ್ವಾಮಿ, ಸೋಸ್ಲೆ ಪರಶಿವಮೂರ್ತಿ ಇದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?