CrimeNEWSನಮ್ಮಜಿಲ್ಲೆ

ರಸ್ತೆ ಗುಂಡಿಗೆ ಬಿದ್ದ ಬೈಕ್‌ ಸವಾರ ಬಿಜೆಪಿ ಮುಖಂಡ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಸ್ತೆ ಕಾಮಗಾರಿಗೆಂದು ತೋಡಿದ್ದ ಗುಂಡಿಯಲ್ಲಿ ಬೈಕ್ ಸಹಿತ ಬಿದ್ದ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟಿದ್ದಾರೆ.

ಆನೇಕಲ್‌ನ ಹೊಸೂರುಮುಖ್ಯ ರಸ್ತೆಯಲ್ಲಿ ಇಂದು (ಸೆ.29) ಈ ಅವಘಡ ಸಂಭವಿಸಿದ್ದು, ಸಬ್‌ಮಂಗಲ ನಿವಾಸಿ ಮಾದೇಶ್ (50) ಮೃತಪಟ್ಟಿದ್ದಾರೆ.

ಗುತ್ತಿಗೆದಾರ ರಸ್ತೆ ಕಾಮಗಾರಿಗೆ ಹೊಂಡ ತೋಡಿದ್ದರು. ಆದರೆ ಕೆಲಸ ಪೂರ್ಣಗೊಳಿಸದೆ ಗುಂಡಿಯನ್ನು ಹಾಗೆಯೇಬಿಟ್ಟು ಹೋಗಿದ್ದರು ಎನ್ನಲಾಗಿದೆ. ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದ್ದಾರೆ. ಅಲ್ಲದೇ ಗುತ್ತಿಗೆದಾರರು ಸ್ಥಳಕ್ಕೆ ಆಗಮಿಸಬೇಕೆಂದು ಧರಣಿ ನಿರತರು ಆಗ್ರಹಿಸಿದ್ದಾರೆ.

ಸ್ಥಳಕ್ಕೆ ತಹಸೀಲ್ದಾರ್ ದಿನೇಶ್ ಭೇಟಿ ನೀಡಿ ಧರಣಿ ನಡೆಸುತ್ತಿದ್ದವರ ಮನವೊಲಿಕೆಗೆ ಯತ್ನಿಸಿದ್ದಾರೆ. ಗುಂಡಿ ಸರಿಮಾಡಿ ಎಂದುದೂರು ನೀಡಿದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನು ಬೆಂಗಳೂರಿನಲ್ಲೂ ಸಹ ಇದೇ ರೀತಿಯ ಘಟನೆಗಳು ಸಂಭವಿಸಿದ ಉದಾಹರಣೆಗಳು ಸಾಕಷ್ಟಿವೆ. ಬೆಂಗಳೂರು ನಗರ ರಸ್ತೆಗಳಲ್ಲಿ ಗುಂಡಿಗಳು ಇದ್ದು ಅವುಗಳನ್ನ ಮುಚ್ಚು ವಂತೆ ಎಷ್ಟೇ ಅಭಿಯಾನಮಾಡಿದ್ರೂ ಪ್ರಯೋಜನವಾಗಿಲ್ಲ.

ಅಲ್ಲದೇಕೋರ್ಟ್ ಸಹ ಗುಂಡಿ ಬಗ್ಗೆ ಬಿಬಿಎಂಪಿಗೆ ಸಾಕಷ್ಟು ಬಾರಿ ಛೀಮಾರಿಹಾಕಿದೆ. ಎಷ್ಟು ಗುಂಡಿ ಮುಚ್ಚಿ ದ್ದೀ ರಿ ಎಂದು ಲೆಕ್ಕೆ ಸಹ ಕೇಳಿದುಂಟು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ