NEWSನಮ್ಮಜಿಲ್ಲೆರಾಜಕೀಯ

ಜನರ ಜೀವದೊಂದಿಗೂ ಬಿಜೆಪಿ ರಾಜಕೀಯ ಮಾಡುತ್ತಿದೆ: ಮೋಹನ್ ದಾಸರಿ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಿಜೆಪಿ ನಾಯಕರಿಗೆ ಜನರ ಜೀವವನ್ನು ಉಳಿಸುವ ಕಿಂಚಿತ್ತೂ ಉದ್ದೇಶವಿಲ್ಲ. ಹೀಗಾಗಿ ಜನತೆಗೆ ನೀಡಬೇಕಾದ ಲಸಿಕೆಯಲ್ಲಿಯೂ ರಾಜಕಾರಣ ಮಾಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲಸಿಕೆಯನ್ನು ಮತವಾಗಿ ಪರಿವರ್ತನೆ ಮಾಡಿಕೊಳ್ಳಲು ಮುಂದಾಗುತ್ತಿದೆ.ಹೀಗೆ ಒಂದು ಲಸಿಕೆಗೆ ಒಂದು ವೋಟು ಎಂಬಂತೆ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಸಿ.ವಿ.ರಾಮನ್ ನಗರ ಕ್ಷೇತ್ರದ ಶಾಸಕ ರಘು ಭುವನೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ಲಸಿಕಾ ಕಾರ್ಯಕ್ರಮವನ್ನು ರದ್ದುಗೊಳಿಸಿ, ಸಮೀಪದ ಕಲ್ಯಾಣ ಮಂಟಪವೊಂದರಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಅವರ ಸಂಬಂಧಿಕರಿಗೆ ಲಸಿಕೆ ಹಾಕಿದ್ದಾರೆ. ಇದಕ್ಕಿಂತ ಲಜ್ಜೆಗೆಟ್ಟ ನಡೆ ಬೇರೇನಿದೆ? ಜನರ ಹೊಟ್ಟೆಗೆ ಹೊಡೆದು ಬಿಜೆಪಿ ರಾಜಕೀಯ ಮಾಡುತ್ತಿದ್ದೆ ಎಂದು ಆರೋಪಿಸಿದರು.

ಭುವನೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಹೆಸರು ನೋಂದಾಯಿಸಿಕೊಂಡು ಬಂದವರನ್ನು ಲಸಿಕೆ ಇಲ್ಲ ಎಂದು ವಾಪಸ್ ಕಳಿಸಲಾಗಿದೆ. ಡಿ.ಆರ್.ಡಿ.ಒ ಉದ್ಯೋಗಿಗಳಿಗೆ ಕೂಡ ಲಸಿಕೆ ಸಿಕ್ಕಿಲ್ಲ. ಸ್ವತಃ ಶಾಸಕರ ಒಡೆತನದ ತಿಪ್ಪಸಂದ್ರದ ಓಂ ಶಕ್ತಿ ಕಲ್ಯಾಣ ಮಂಟಪದಲ್ಲಿ ಉಚಿತ ಲಸಿಕೆ ನೀಡುತ್ತೇವೆ ಎಂದು ಜನತೆಯನ್ನು ನಂಬಿಸಿ ಅವರನ್ನು ವಾಪಸ್ ಕಳಿಸಲಾಗಿದೆ ಎಂದು ಕಿಡಿಕಾರಿದರು.

ಲಸಿಕೆ ಹಾಕಿಸಿಕೊಳ್ಳಲು ಬಂದವರನ್ನು ಬಿಜೆಪಿ ಕಾರ್ಯಕರ್ತರು ತಡೆದು ವಿಚಾರಿಸಿ ಪ್ರಶ್ನಿಸಿ ತಮ್ಮವರಿಗೆ ಮಾತ್ರ ಲಸಿಕೆ ನೀಡುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಆಪ್ತರಿಗೆ, ಸಂಬಂಧಿಗಳಿಗೆ ಕರೆದು ಕರೆದು ಲಸಿಕೆ ನೀಡುತ್ತಿದ್ದಾರೆ. ಉಚಿತ ಲಸಿಕೆ ನೀಡುತ್ತಿದ್ದೇವೆ ಎಂದು ಪ್ರಚಾರ ಮಾಡುತ್ತಿದ್ದಾರೆ. ಆದರೆ ಜನತೆ ಲಸಿಕೆ ಸಿಗದೆ ವಾಪಸ್ ಹೋಗುತ್ತಿದ್ದಾರೆ ಎಂದು ಇದು ಎಂಥ ಲಜ್ಜೆಗೆಟ್ಟ ಸರ್ಕಾರ ಎಂದನ್ನು ನೀವೆ ಊಹಿಸಿಕೊಳ್ಳಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯವರಿಗೆ ಲಸಿಕೆ ಎಂದರೆ ವೋಟು. ಅವರಿಗೆ ಜನತೆಯ ಪ್ರಾಣ ಕಾಣಿಸುತ್ತಿಲ್ಲ. ಜನತೆಯ ಜೀವ ಉಳಿಸುವ ಉದ್ದೇಶವಿಲ್ಲ. ನಿರ್ದಯವಾಗಿ ಲಸಿಕೆಯನ್ನು ಮಾರಾಟ ಮಾಡುತ್ತಿದ್ದಾರೆ. ತಮ್ಮವರಿಗೆ ಮಾತ್ರ ಲಸಿಕೆ ನೀಡುತ್ತಿದ್ದಾರೆ. ವೋಟಿಗಾಗಿ ಲಸಿಕೆ ಮಾರಾಟ ಮಾಡುವುದನ್ನು ನಿಲ್ಲಿಸಿ. ಪ್ರತಿಯೊಬ್ಬರಿಗೂ ಲಸಿಕೆ ಲಭ್ಯವಾಗುವ ಹಾಗೆ ಮಾಡಿ. ಈ ಮೂಲಕ ಜನತೆಯ ಜೀವವನ್ನು ಉಳಿಸಿ ಎಂದು ಮೋಹನ್ ದಾಸರಿ ಆಗ್ರಹಿಸಿದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್