NEWSನಮ್ಮಜಿಲ್ಲೆನಮ್ಮರಾಜ್ಯ

ಎಎಪಿ ಕಚೇರಿ ಕಟ್ಟಡ ಮಾಲೀಕರಿಗೆ ಬಿಜೆಪಿ ಶಾಸಕ ಲಿಂಬಾವಳಿ ಬೆದರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಯು ಭ್ರಷ್ಟ ರಾಜಕಾರಣಿಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದು, ನಮಗೆ ಕಚೇರಿ ತೆರೆಯಲು ಅವಕಾಶ ನೀಡಿದ ಕಟ್ಟಡದ ಮಾಲೀಕರಿಗೆ ಬಿಜೆಪಿ ಶಾಸಕ ಅರವಿಂದ್‌ ಲಿಂಬಾವಳಿ ಬೆದರಿಕೆ ಹಾಕಿರುವುದೇ ಇದಕ್ಕೆ ಸಾಕ್ಷಿ ಎಂದು ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್‌ ದಾಸರಿ, “ಮಹದೇವಪುರ ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ಅಶೋಕ್‌ ಮೃತ್ಯುಂಜಯ ಅವರು ಕಸವನಹಳ್ಳಿ ವೃತ್ತದಲ್ಲಿ ಕಟ್ಟಡವೊಂದನ್ನು ಲೀಸ್‌ಗೆ ಪಡೆದು, ಅಲ್ಲಿ ಬೆಳ್ಳಂದೂರು ವಾರ್ಡ್‌ ಕಚೇರಿಯನ್ನು ಭಾನುವಾರ ಆರಂಭಿಸಿದ್ದರು. ವಿಷಯ ತಿಳಿದ ಬಿಜೆಪಿ ಶಾಸಕ ಅರವಿಂದ್‌ ಲಿಂಬಾವಳಿಯವರು ಕಚೇರಿಗೆ ಕಟ್ಟಡವನ್ನು ಬಾಡಿಗೆ ನೀಡಿದ ಮಾಲೀಕರಿಗೆ ಬೆದರಿಕೆ ಹಾಕಿದ್ದಾರೆ ಎಂದರು ತಿಳಿಸಿದರು.

ಇನ್ನು ಕಚೇರಿಯನ್ನು ಖಾಲಿ ಮಾಡಿಸದಿದ್ದರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಷ್ಟ್ರೀಯ ಪಕ್ಷವೊಂದು ಕಚೇರಿ ತೆರೆಯುವುದನ್ನೂ ಸಹಿಸಲಾರದಷ್ಟು ಅರವಿಂದ್‌ ಲಿಂಬಾವಳಿ ಹತಾಶರಾಗಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದರು.

ಜನರ ಕಲ್ಯಾಣವೊಂದೇ ಆಮ್‌ ಆದ್ಮಿ ಪಾರ್ಟಿಯ ಆಶಯವಾಗಿದೆ. ದ್ವೇಷ ರಾಜಕಾರಣದಲ್ಲಿ ನಾವು ಆಸಕ್ತಿ ಹೊಂದಿಲ್ಲ. ನಮ್ಮ ಸಹನೆಯನ್ನು ದೌರ್ಬಲ್ಯವೆಂದು ಬಿಜೆಪಿಯವರು ಭಾವಿಸಬಾರದು ಎಂದು ಎಚ್ಚರಿಕೆ ನೀಡಿದರು.

ಇನ್ನು ಗೂಂಡಾಗಿರಿಯು ಬಿಜೆಪಿಯ ಸಂಸ್ಕೃತಿಯಾಗಿದ್ದು, ಶಾಸಕರು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ನಮಗೆ ಕಿರುಕುಳ ನೀಡುತ್ತಿದ್ದಾರೆ. ಲಿಂಬಾವಳಿಯವರ ಪ್ರಜಾಪ್ರಭುತ್ವ ವಿರೋಧಿ ನಡೆಗೆ ಪ್ರಜಾಪ್ರಭುತ್ವದ ಮಾರ್ಗದಲ್ಲಿಯೇ ತಕ್ಕ ಪಾಠ ಕಲಿಸುವುದು ನಮಗೆ ತಿಳಿದಿದೆ ಎಂದು ಮೋಹನ್‌ ದಾಸರಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಮಾತನಾಡಿ, “ಕ್ಷೇತ್ರದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಕೆರೆ ಒತ್ತುವರಿ ವಿರುದ್ಧ ಎಎಪಿ ದನಿ ಎತ್ತಿತ್ತು. ಇದರಿಂದ ಕಂಗೆಟ್ಟಿರುವ ಶಾಸಕ ಲಿಂಬಾವಳಿಯವರು ತಮ್ಮ ಇನ್ನಷ್ಟು ಅಕ್ರಮ ಬಯಲಾಗಬಹುದು ಎಂಬ ಭಯದಿಂದ ಬೆದರಿಕೆ ಹಾಕಿದ್ದಾರೆ.

ಅವರ ಗೂಂಡಾಗಿರಿ ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು. ಕಚೇರಿ ಆರಂಭಿಸುವುದು ಪ್ರಜಾಪ್ರಭುತ್ವ ನಮಗೆ ನೀಡಿರುವ ಹಕ್ಕಾಗಿದ್ದು, ಈ ಹಕ್ಕನ್ನು ಕಿತ್ತುಕೊಳ್ಳುವ ದುಸ್ಸಾಹಸದಿಂದ ಲಿಂಬಾವಳಿಯವರು ಹಿಂದೆ ಸರಿಯಬೇಕು ಎಂದು ತಾಕೀತು ಮಾಡಿದರು.

ಶಾಸಕ ಅರವಿಂದ ಲಿಂಬಾವಳಿಯವರು ತಮ್ಮ ಕ್ಷೇತ್ರವನ್ನು ರಿಪಬ್ಲಿಕ್‌ ಆಫ್‌ ಮಹದೇವಪುರ ಮಾಡಲು ಹೊರಟಿದ್ದಾರೆ. ಅಧಿಕಾರದ ಮದದಿಂದ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಬೇರೆ ಪಕ್ಷಗಳ ಏಳಿಗೆಯನ್ನು ಹತ್ತಿಕ್ಕಲು ಯಾವ ಮಟ್ಟಕ್ಕಾದರೂ ಇಳಿಯುವ ಹಂತ ತಲುಪಿದ್ದಾರೆ. ಎಎಪಿಯ ಕಚೇರಿಯ ಆರಂಭಕ್ಕೆ ಅಡ್ಡಗಾಲು ಹಾಕುವ ಬದಲು, ತಾಕತ್ತಿದ್ದರೆ ಮುಂಬರುವ ಚುನಾವಣೆಗಳಲ್ಲಿ ನಮ್ಮನ್ನು ಎದುರಿಸಲಿ ಎಂದು ಜಗದೀಶ್‌ ವಿ. ಸದಂ ಸವಾಲು ಹಾಕಿದರು.

Leave a Reply

error: Content is protected !!
LATEST
NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ