NEWSನಮ್ಮಜಿಲ್ಲೆರಾಜಕೀಯ

ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಮಂಗಳವಾರ ಜರುಗಿತು.

ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಕರ್ನಾಟಕ ಸಹ ಉಸ್ತುವಾರಿ ಡಿ.ಕೆ.ಅರುಣಾ ಅವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಪ್ರತಿಯೊಬ್ಬ ಕಾರ್ಯಕರ್ತರು ಬೆಳೆಸಲು ಕರೆ ನೀಡಿದರು.

ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರದ ಸಾಧನೆಯನ್ನು ದೇಶದ ಪ್ರತಿಯೊಬ್ಬ ನಾಗರಿಕರಿಗೆ ತಲುಪಿಸುವ ಕೆಲಸ ಮಾಡುವಂತೆ ಸಲಹೆ ನೀಡಿದರು.

ಅದೇ ರೀತಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ ಪಕ್ಷದ ವರ್ಚಸ್ಸು ಹೆಚ್ಚಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎನ್ಇಕೆಆರ್ಟಿಸಿ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ, ಶಾಸಕರಾದ ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮೂಡ, ಅವಿನಾಶ ಜಾಧವ, ಸುನೀಲ ವಲ್ಲಾಪುರೆ, ಮಾಜಿ ಶಾಸಕರಾದ ಮಾಲೀಕಯ್ಯಾ ಗುತ್ತೇದಾರ, ದೊಡ್ಡಪ್ಪಗೌಡ ಪಾಟೀಲ, ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ನಿಂಗರಾಜ ಬಿರಾದಾರ, ಸಿದ್ದಾಜಿ ಪಾಟೀಲ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕಾರ್ಯಕರ್ತರು, ನಗರ ಜಿಲ್ಲಾ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?