NEWSನಮ್ಮಜಿಲ್ಲೆ

ಸಾರಿಗೆ ಸಂಚಾರ ಸುಗಮ: ರಸ್ತೆಗಿಳಿದ ಬಿಎಂಟಿಸಿಯ 3154 ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಅನ್ ಲಾಕ್ ಆರಂಭವಾದ ಬೆನ್ನಲೆ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಸೋಮವಾರ ಬೆಳಗ್ಗೆಯಿಂದ ಆರಂಭವಾಗಿದ್ದು, ಸ್ವಲ್ಪಪಟ್ಟಿಗೆ ಗೊಂದವಾಗಿ ಪ್ರಯಾಣಿಕರು ಪರದಾಡುವಂತಾಗಿತ್ತು. ಆದರೆ, ಇಂದು ಆ ರೀತಿಯ ಸಮಸ್ಯೆ ಇಲ್ಲದೆ ಸಂಚಾರ ಸುಗಮವಾಗಿದ್ದು ನಡೆಯುತ್ತಿದೆ.

ಬಿಎಂಟಿಸಿಯು ಸೋಮವಾರ ಮಧ್ಯಾಹ್ನದ ವೇಳೆಗೆ 3154 ಬಸ್‌ಗಳು ಸಂಚರಿಸಿದವು. ಮಂಗಳವಾರ ಬೆಳಗ್ಗೆಯಿಂದ ಅಷ್ಟೇ ಪ್ರಮಾಣದ ಬಸ್‌ಗಳು ರಸ್ತೆಗಿಳಿದಿವೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಿ ಶೇ. 50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸೇವೆಗೆ ಅವಕಾಶ ಮಾಡಿಕೊಟ್ಟಿದೆ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.ಕರ್ತವ್ಯಕ್ಕೆ ಹಾಜರಾದ ಸಾರಿಗೆ ಸಿಬ್ಬಂದಿಗೆ ಕಡ್ಡಾಯವಾಗಿ ಕೋವಿಡ್‌ ನೆಗೆಟಿವ್‌ ವರದಿ ಹೊಂದಿರಬೇಕು ಹಾಗೂ ಕೋವಿಡ್ ಲಕ್ಷಣಗಳನ್ನು ಹೊಂದಿರಬಾರದು ಎಂದು ಈಗಾಗಲೇ ನಿರ್ದೇಶನ ನೀಡಲಾಗಿದೆ.

ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕೆಎಸ್ಆರ್‌ಟಿಸಿಯ 3ಸಾವಿರಕ್ಕೂ ಹೆಚ್ಚು ಬಸ್‌ ಸಂಚರಿಸುತ್ತಿವೆ. ಆದರೆ, ಮೈಸೂರಿನಲ್ಲಿ ನಿರ್ಬಂಧ ಸಡಿಲಿಕೆ ಇಲ್ಲದ ಕಾರಣ ಬಸ್ ಸಂಚಾರ ಆರಂಭವಾಗಿಲ್ಲ‌. ಕೆಎಸ್ಆರ್‌ಟಿಸಿಯು ಅಂತರ ಜಿಲ್ಲಾ ಬಸ್ ಸಂಚಾರ ಆರಂಭಿಸಿದೆ.

ಇನ್ನು ಎನ್‌ಇಕೆಆರ್‌ಟಿಸಿ ಮತ್ತು ಎಸ್‌ಡಬ್ಲ್ಯುಕೆಆರ್‌ಟಿಸಿ ಎರಡೂ ನಿಗಮಗಳಿಂದ 2500 ಹೆಚ್ಚು ಬಸ್‌ಗಳು ಸಂಚರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದರು.

ಜಿಲ್ಲೆಗಳಲ್ಲಿ ಪ್ರಯಾಣಿಕರ ಜನದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಸ್ಥಳೀಯ ಮತ್ತು ದೂರ ಮಾರ್ಗದ ಅಂತರ ಜಿಲ್ಲಾ ಸಾರಿಗೆಗಳ ಕಾರ್ಯಾಚರಣೆಯನ್ನು ಪಾರಂಭಿಸಲಾಗಿದೆ. ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕೋಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೋರಲಾಗಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್