NEWSನಮ್ಮಜಿಲ್ಲೆ

ಬಿಎಂಟಿಸಿ ಬಸ್‌ ಪ್ರಯಾಣಿಕರಿಗೆ ಸಿಹಿ ಸುದ್ದಿ: ಏಪ್ರಿಲ್‌ ಬಸ್‌ ಪಾಸ್‌ ಜುಲೈ 8ರವರೆಗೆ ಮಾನ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರದ ಆದೇಶದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಜೂನ್ 21‌ ರಿಂದ ಸಾರ್ವಜನಿಕ ಪ್ರಯಾಣಿಕರಿಗೆ ಸಾರಿಗೆ ಸೇವೆಗಳನ್ನು ಪ್ರಾರಂಭಿಸುತ್ತಿದ್ದು, ಏಪ್ರಿಲ್‌ನಲ್ಲಿ ಬಸ್‌ ಪಾಸ್‌ ಪಡೆದುಕೊಂಡಿದ್ದರೂ ಬಸ್‌ ಸೌಲಭ್ಯವಿಲ್ಲದ್ದರಿಂದ ಆ ಏಪ್ರಿಲ್‌ ತಿಂಗಳ ಬಸ್‌ಪಾಸ್‌ನಲ್ಲೇ 8ರವರೆಗೆ ಬಸ್‌ಗಳಲ್ಲಿ ಪ್ರಯಾಣಿಸಲು ಅನುವು ಮಾಡಿಕೊಡಲಾಗಿದೆ ಎಂದು ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ಸಾರಿಗೆ ಸೇವೆಗಳ ಲಭ್ಯತೆ
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಏಪ್ರಿಲ್‌ 21ರ ಸಾಮಾನ್ಯ ಮಾಸಿಕ ಪಾಸ್‌ಗಳ ಅವಧಿಯನ್ನುಜುಲೈ 8 ರವರೆಗೆ ವಿಸ್ತರಿಸಲಾಗಿದೆ. ಡಿಜಿಟಲ್ ಟಿಕೇಟಿಂಗ್ ವ್ಯವಸ್ಥೆಯನ್ನು ಎಲ್ಲಾ ಬಸ್‌ಗಳಲ್ಲಿ ಒದಗಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಸಾರಿಗೆ ಸೇವೆಗಳನ್ನು ಹೆಚ್ಚಿಸಲಾಗುವುದು ಎಂದು ವಿವರಿಸಿದ್ದಾರೆ.

ಇನ್ನು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪ್ರಯಾಣಿಕರ ದಟ್ಟಣೆ ಇರುವಂತಹ ಪ್ರಮುಖ ಮಾರ್ಗಗಳಲ್ಲಿ 2000 ಸಾರಿಗೆಗಳನ್ನು ಕಾರ್ಯಾಚರಿಸಲಾಗುವುದು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಎಲೆಕ್ಟ್ರಾನಿಕ್ ಸಿಟಿಗೆ ಒಟ್ಟು 17 ವಾಯು ವಜ್ರ ಬಸ್‌ಗಳಿಂದ 117 ಸರತಿಗಳಲ್ಲಿ ಸಾರಿಗೆ ಸೇವೆಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಸ್‌ಗಳು ಬೆಳಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಸಾರಿಗೆ ಸೇವೆಗಳ ನೀಡಲಿದ್ದು ಕೋವಿಡ್‌ ನಿಯಮಗಳನ್ನು ಪಾಲಿಸಿಕೊಂಡೆ ನಾಗರಿಕರು ಪ್ರಯಾಣಿಸಬೇಕು ಎಂದಿದ್ದಾರೆ.

ಚಾಲನಾ ಸಿಬ್ಬಂದಿ ನಿಯೋಜನೆ ಮತ್ತು ಹೊಣೆಗಾರಿಕೆ
ಎಲ್ಲಾ ಸಿಬ್ಬಂದಿ ಕೋವಿಡ್ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಚಾಲನಾ ಸಿಬ್ಬಂದಿ ಮುಖಗವಸನ್ನು ಕಡ್ಡಾಯವಾಗಿ ಧರಿಸುವುದು. ಚಾಲನಾ ಸಿಬ್ಬಂದಿ ಆಗಿಂದಾಗ್ಗೆ ಸ್ಯಾನಿಟೈಸ್‌ ಬಳಸಿ, ಶುಚಿತ್ವವನ್ನು ಕಾಪಾಡುವುದು.

ಬಸ್‌ಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ.50 ರಷ್ಟು ಪ್ರಯಾಣಿಕರನ್ನು ಮಾತ್ರ ಪ್ರಯಾಣಿಸಲು ಅನುಮತಿಸುವುದು. ಪ್ರಯಾಣಿಕರನ್ನು ಬಸ್‌ನಲ್ಲಿ ಆಸನಗಳು ಖಾಲಿಯಿದ್ದಾಗ ಮಾತ್ರ ಪ್ರಯಾಣಿಸಲು ಅನುಮತಿಸುವುದು. ನಿಗದಿತ ನಿಲುಗಡೆಗಳಲ್ಲಿ ಪ್ರಯಾಣಿಕರನ್ನು ಹತ್ತಿಸುವುದು, ಇಳಿಸುವುದು.

ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ 
ಪ್ರಯಾಣಿಕರು ಮೂಗು ಮತ್ತು ಬಾಯಿ ಮುಚ್ಚಿಕೊಳ್ಳುವಂತೆ ಕಡ್ಡಾಯವಾಗಿ ಮುಖಗವಸು (ಮಾಸ್ಕ್‌) ಧರಿಸುವುದು. ಮಾಸ್ಕ್‌ ಧರಿಸದ ಪ್ರಯಾಣಿಕರನ್ನು ಬಸ್‌ನಲ್ಲಿ ಪ್ರಯಾಣಿಸಲು ಯಾವುದೇ ಕಾರಣಕ್ಕೂ ಅವಕಾಶ ಕಲ್ಪಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರತಿ ಸಾಲಿನಲ್ಲಿ ಬಸ್‌ಗಳನ್ನು ಹತ್ತುವುದು, ಇಳಿಯುವುದು. ನಿಗದಿಪಡಿಸಿದ ಪ್ರಯಾಣಿಕರ ಆಸನಗಳು ಭರ್ತಿಯಾಗಿದ್ದಲ್ಲಿ, ಬಸ್‌ ಹತ್ತಬಾರದು. ಮುಂದಿನ ಬಸ್‌ಗಾಗಿ ಕಾಯುವುದು. ಜ್ವರ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿರುವ ಪ್ರಯಾಣಿಕರು ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸಬಾರದು ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ