NEWSನಮ್ಮಜಿಲ್ಲೆ

ಬಿಎಂಟಿಸಿ ನೌಕರರ ಜುಲೈ ವೇತನಕ್ಕಾಗಿ 49.31 ಕೋಟಿ ರೂ. (ಶೇ.50) ಅನುದಾನ ಬಿಡುಗಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ ಸಿಬ್ಬಂದಿಯ ಜುಲೈ ತಿಂಗಳ ವೇತನಕ್ಕಾಗಿ ಶೇ.50ರಷ್ಟು ಅನುದಾನವನ್ನು ಸೋಮವಾರ ಸರ್ಕಾರ ಬಿಡುಗಡೆ ಮಾಡಿ ಆದೇಶಿಸಿದೆ.

ಬಿಎಂಟಿಸಿ ಅಧಿಕಾರಿ, ಸಿಬ್ಬಂದಿಗಳ ಜುಲೈ 2021ರ ಮಾಹೆಯ ವೇತನ ವೆಚ್ಚಕ್ಕಾಗಿ ಮೂಲ ವೇತನ/ತುಟ್ಟಿ ಭತ್ಯೆಯ ಶೇ.50ರಷ್ಟನ್ನು 2021 -22 ನೇ ಸಾಲಿನ ಆಯವ್ಯಯದ ಸಹಾಯಧನದಡಿ ಒದಗಿಸಿರುವ ಅನುದಾನದಡಿ 49.31 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ ಆದೇಶಿಸಿದೆ.

ಇನ್ನು ಇಂದು ಬಿಡುಗಡೆ ಮಾಡಲಾದ ಅನುದಾನವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಬೆಂಗಳೂರು ಇವರಿಂದ ಪೇಯೀಸ್‌ ರಶೀದಿ ಮೇಲು ರುಜು ಪಡೆದು ರಾಜ್ಯ ಹುಜೂರು ಖಜಾನೆಯಿಂದ ಡ್ರಾ ಮಾಡಲು ಅನುಮತಿ ನೀಡಿದೆ.

ಕೊರೊನಾ ವೈರಸ್ ರೋಗದ ಎರಡನೇ ತೀವ್ರತೆಯ ಹಿನ್ನೆಲೆಯಲ್ಲಿ ಬಿಎಂಟಿಸಿ ನೌಕರರಿಗೆ ಜುಲೈ 2021ರ ವೇತನ ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡುವಂತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಪತ್ರ ಬರೆದಿದ್ದರು.

ಸಿಬ್ಬಂದಿ, ಅಧಿಕಾರಿಗಳ ಜುಲೈ 2021 ರಿಂದ ಸೆಪ್ಟೆಂಬರ್ 2021 ರವರೆಗಿನ ವೇತನ ಪಾವತಿ ಮಾಡಲು ಅವಶ್ಯವಿರುವ ಅನುದಾನದ ಮೊತ್ತ ಕ್ರಮವಾಗಿ 284.14 ಕೋಟಿ ರೂ. ಗಳ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಸಂಸ್ಥೆ ಎಂಡಿ ಪ್ರಸ್ತಾವನೆ ಸಲ್ಲಿಸಿದ್ದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕರ ಪ್ರಸ್ತಾವನೆಯನ್ನು ಸರಕಾರವು ಪರಿಶೀಲಿಸಿ ಶೇ.50ರಷ್ಟು ವೇತನ ವೆಚ್ಚಕ್ಕಾಗಿ 49.31 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.

ಬಿಎಂಟಿಸಿ ಹೊರತುಪಡಿಸಿ ಮೂರು ಸಾರಿಗೆ ಸಂಸ್ಥೆಗಳಿಗೆ ಜುಲೈ ತಿಂಗಳ ವೇತನಕ್ಕಾಗಿ 60.82 ಕೋಟಿ ರೂ.(ಶೇ.25) ಅನುದಾನ ಬಿಡುಗಡೆ

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ