Breaking NewsNEWSನಮ್ಮಜಿಲ್ಲೆರಾಜಕೀಯ

ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಮನೆಗೆ ಬಿಎಸ್‌ವೈ ಭೇಟಿ: 10 ಲಕ್ಷ ರೂ. ಆರ್ಥಿಕ ನೆರವು

ವಿಜಯಪಥ ಸಮಗ್ರ ಸುದ್ದಿ
  • ಅಭಿಮಾನ ಅತಿರೇಕಕ್ಕೆ ಹೋಗಿ ಜೀವ ಕಳೆದುಕೊಂಡು, ತಮ್ಮನ್ನೇ ನಂಬಿರುವ ಕುಟುಂಬದವರಿಗೆ ಶಾಶ್ವತ ಶೋಕ ನೀಡಿರುವ ದುರ್ಘಟನೆ ವೈಯಕ್ತಿಕವಾಗಿ ನನಗೆ ಅತ್ಯಂತ ನೋವನ್ನು ತಂದಿದೆ. ಇಂದು ಗುಂಡ್ಲುಪೇಟೆಯ ಬೊಮ್ಮಲಾಪುರದಲ್ಲಿ, ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಅವರ ಮನೆಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಲಾಯಿತು  -ಬಿಎಸ್‌ವೈ ಮಾಜಿ ಸಿಎಂ

ಚಾಮರಾಜನಗರ: ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ನೊಂದು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ಯುವಕ ಅಭಿಮಾನಿ ರವಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಸಾಂತ್ವನ ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ರವಿಯವರ ತಾಯಿಯನ್ನು ಭೇಟಿ ಮಾಡಿ ಅವರ ಕಾಲಿಗೆ ನಮಸ್ಕರಿಸಿ ಸಾಂತ್ವನ ಹೇಳಿದ ಯಡಿಯೂರಪ್ಪನವರು ಸ್ಥಳದಲ್ಲಿ 5 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿ ಇನ್ನೂ 5 ಲಕ್ಷ ರೂಪಾಯಿ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈ ವೇಳೆ ಮೃತ ರವಿಯ ತಾಯಿ ಯಡಿಯೂರಪ್ಪನವರ ಕಾಲಿಗೆ ಪ್ರತಿಯಾಗಿ ನಮಸ್ಕರಿಸಿದರು.

ನನ್ನ ಅಭಿಮಾನಿಯಾಗಿದ್ದ ರವಿ ನಾನು ರಾಜೀನಾಮೆ ನೀಡಿದ್ದೇನೆಂದು ಆತ್ಮಹತ್ಯೆ ಮಾಡಿಕೊಂಡಿರುವುದು ಕೇಳಿ ಮನಸ್ಸಿಗೆ ತುಂಬಾ ಬೇಸರವಾಗಿದೆ. ಈಗ ನಾವು ರವಿ ಕುಟುಂಬಕ್ಕೆ ಆಸರೆಯಾಗಬೇಕು. ಮೃತ ರವಿ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೀಡಿದ್ದೇನೆ. ಇನ್ನೂ 5 ಲಕ್ಷ ರೂಪಾಯಿ ಬ್ಯಾಂಕ್ ಖಾತೆಗೆ ಹಾಕುತ್ತೇವೆ ಎಂದರು.

ಅದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಪಕ್ಷವನ್ನು ಬಲಪಡಿಸಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ 130ರಿಂದ 135 ಸೀಟುಗಳನ್ನು ಗೆಲ್ಲಿಸುವುದು ನನ್ನ ಉದ್ದೇಶವಾಗಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ನಡ್ಡಾರಿಗೆ ಇದು ನಾನು ಭರವಸೆ ನೀಡಿದ್ದೇನೆ ಎಂದರು.

ಬರುವ ಗೌರಿ- ಗಣೇಶ ಹಬ್ಬದ ಬಳಿಕ ಪ್ರತಿ ವಾರ ಒಂದೊಂದು ಜಿಲ್ಲೆಗೆ ತೆರಳಿ ಅಲ್ಲಿನ ಕಾರ್ಯಕರ್ತರ ಸಭೆಗಳನ್ನು ನಡೆಸಿ ಸಂಘಟನೆ ಬಲಪಡಿಸುವ ತೀರ್ಮಾನ ಮಾಡಿದ್ದೇನೆ. ನನಗೆ ಇಂದು ಅಧಿಕಾರ ಇಲ್ಲದಿದ್ದರೂ ಜನ ಪ್ರೀತಿ, ವಿಶ್ವಾಸ ತೋರಿಸುತ್ತಿದ್ದಾರೆ ಎಂದರು.

ಅಧಿಕಾರ ಶಾಶ್ವತವಲ್ಲ, ನನ್ನ ಕಣ್ಣ ಮುಂದೆಯೇ ಯೋಗ್ಯ ವ್ಯಕ್ತಿಯನ್ನು ಪಕ್ಷದಲ್ಲಿ ಪ್ರಬಲ ನಾಯಕನಾಗಿ ಬೆಳೆಸಬೇಕೆಂದು ಸಂಕಲ್ಪ ಮಾಡಿದ್ದೇನೆ. ಬಸವರಾಜ ಬೊಮ್ಮಾಯಿಯವರಂತಹ ಯೋಗ್ಯ ವ್ಯಕ್ತಿ ಈ ನಾಡಿನ ಮುಖ್ಯಮಂತ್ರಿಯಾಗಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದು ಸಂತಸದ ವಿಚಾರ. ಅವರ ನೇತೃತ್ವದಲ್ಲಿ ಒಳ್ಳೆಯ ಕೆಲಸ ಆಗುತ್ತದೆಂಬ ವಿಶ್ವಾಸ ನನಗಿದೆ ಎಂದರು.

ಇನ್ನು ಸಿದ್ದರಾಮಯ್ಯನವರು ಇತ್ತೀಚೆಗೆ ಸಂಯಮ ಕಳೆದುಕೊಂಡು ಹಗುರವಾಗಿ ಮಾತನಾಡುವುದನ್ನು ಅಭ್ಯಾಸ ಮಾಡುತ್ತಿದ್ದಾರೆ. ವಿಪಕ್ಷದ ನಾಯಕರಾಗಿ ಇಂತಹ ಹೇಳಿಕೆಗಳನ್ನು ನೀಡುವುದು ಶೋಭೆ ತರುವಂಥದಲ್ಲ ಎಂದು ಸಿದ್ದುಗೆ ಮಾತಿನ ಪೆಟ್ಟುಕೊಟ್ಟರು.

ಸಿಎಂ ಬೊಮ್ಮಾಯಿಯವರು ದೆಹಲಿಯಿಂದ ಬಂದ ನಂತರ ಸಟಿವ ಸಂಪುಟ ರಚನೆ ಬಗ್ಗೆ ದೆಹಲಿ ವರಿಷ್ಠರ ತೀರ್ಮಾನ ಮತ್ತು ಒಪ್ಪಿಗೆ ಪಡೆದು ಶೀಘ್ರವೇ ರಚನೆ ಮಾಡುತ್ತಾರೆ, ವಲಸಿಗ ಶಾಸಕರನ್ನು ಸಂಪುಟಕ್ಕೆ ಸೇರ್ಪಡೆ ಮಾಡುವ ಕುರಿತು ಸಹ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಸಚಿವ ಸಂಪುಟ ರಚನೆಯಲ್ಲಿ ನಾನು ಮಧ್ಯೆ ಪ್ರವೇಶಿಸುವುದಿಲ್ಲ. ಉತ್ತಮ ಆಡಳಿತ ನಿರ್ವಹಿಸುವ ಬಗ್ಗೆ ಸಲಹೆ ಕೊಡುತ್ತೇನಷ್ಟೆ ಹೊರತು ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಮಾಜಿ ಸಿಎಂ ಎಸ್‌.ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್‌ ಸೇರ್ಪಡೆ

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...