NEWSನಮ್ಮಜಿಲ್ಲೆರಾಜಕೀಯ

ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳ ಭಸ್ಮಗೊಳಿಸಿದ ದುಷ್ಕರ್ಮಿಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಭಸ್ಮಗೊಳಿಸಿದ ಘಟನೆ ಗುರುವಾರ ನಸುಕಿನ ಜಾವ ನಡೆದಿದ್ದು, ಮೈಕೋ ಲೇ ಔಟ್ ಎಸಿಪಿ ನೇತೃತ್ವದಲ್ಲಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಆರೋಪಿಗಳ ಪತ್ತೆಗಾಗಿ ವ್ಯಾಪಕ ಜಾಲ ಬೀಸಿರುವ ಪೊಲೀಸರು ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸದಲ್ಲಿದ್ದಾರೆ.

ಇಂದು ನಸುಕಿನ ಜಾವ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಈ ಕೃತ್ಯ ನಡೆಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮಧ್ಯರಾತ್ರಿ 1:23ರ ಸುಮಾರಿಗೆ ಬಂದ ಇಬ್ಬರು ದುಷ್ಕರ್ಮಿಗಳು ಒಂದು ಲೀಟರ್ ಬಾಟಲ್ ಪೆಟ್ರೋಲ್ ತಂದು ಕಾರಿಗೆ ಬೆಂಕಿ ಹಚ್ಚಿ ಕೆಲವೇ ಹೊತ್ತಿನಲ್ಲಿ ಕೆಲಸ ಮುಗಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಬೊಮ್ಮನಹಳ್ಳಿ ಪೊಲೀಸರಿಂದ ಆರೋಪಿಗಳಿಗಾಗಿ ತಲಾಶ್ ನಡೆಸುತ್ತಿದ್ದಾರೆ. 3 ಪ್ರತ್ಯೇಕ ತಂಡಗಳಾಗಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯಲಿದೆ. ಸುದ್ದಗುಂಟೆಪಾಳ್ಯ, ಬೊಮ್ಮನಹಳ್ಳಿ, ತಿಲಕ್‌ನಗರ ಠಾಣೆ ಸೇರಿ ಮೂರು ಠಾಣೆಗಳ ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ಶಾಸಕ ಸತೀಶ್ ರೆಡ್ಡಿ ಪ್ರತಿಕ್ರಿಯೆ: ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ವಿಡಿಯೋ ದಾಖಲಾಗಿದೆ. ಮಧ್ಯರಾತ್ರಿ 1.30ರ ಸುಮಾರಿಗೆ ಎರಡು ಕಾರುಗಳು ಬಹುತೇಕ ಸುಟ್ಟುಹೋಗಿವೆ. ಕಾರಿನಿಂದ ಸ್ಫೋಟದ ಸದ್ದು ಕೇಳಿಬಂದಾಗ ನಮಗೆ ಎಚ್ಚರವಾಯಿತು. ಹೋಗಿ ನೋಡುವಾಗ ಕಾರುಗಳು ಹೊತ್ತಿ ಉರಿಯುತ್ತಿದ್ದವು. ನಂತರ ನಂದಿಸುವ ಕಾರ್ಯ ಮಾಡಿದೆವು.

ಈ ದುಷ್ಕೃತ್ಯವನ್ನು ಯಾರು ಮಾಡಿದರು, ಯಾಕೆ ಮಾಡಿದರು ಎಂದು ಗೊತ್ತಾಗುತ್ತಿಲ್ಲ, ನಾನಿಲ್ಲಿ ಯಾವ ಪಕ್ಷದವರ ಮೇಲೆ ಕೂಡ ಆರೋಪ ಹೊರಿಸುತ್ತಿಲ್ಲ, ರಾಜಕೀಯದಲ್ಲಿ ನನಗೆ ಯಾರೂ ಶತ್ರುಗಳಿಲ್ಲ, ಶಿವನ ಮೂರ್ತಿ ಪ್ರತಿಷ್ಠಾಪನೆ ವಿಚಾರ ಕೂಡ ಆಗಿರಲೂಬಹುದು, ಪೊಲೀಸರು ಹಲವು ಆಯಾಮಗಳಿಂದ ತನಿಖೆ ನಡೆಸುತ್ತಿದ್ದು ಆರೋಪಿಗಳು ಸಿಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?