NEWSನಮ್ಮಜಿಲ್ಲೆ

ದಕ್ಷಿಣ ಕನ್ನಡದಲ್ಲಿ ಇಂದಿನಿಂದ ಬಸ್‌ ಸಂಚಾರ ಆರಂಭ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಭಾಗಶಃ ಅನ್‌ಲಾಕ್ ಆಗಿದ್ದು ಮಾಲ್, ಸಿನಿಮಾ ಥಿಯೇಟರ್, ಧಾರ್ಮಿಕ ಕ್ಷೇತ್ರಗಳನ್ನು ಹೊರತುಪಡಿಸಿ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೂ ಎಲ್ಲಾ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪಾಸಿಟಿವಿಟಿ ರೇಟ್ ಹಾಗೂ ಸಾವಿನ ಸಂಖ್ಯೆ ಕಡಿಮೆಯಾಗದಿದ್ರೂ ಅನ್‌ಲಾಕ್ ಮಾಡಲಾಗಿದ್ದು ಬಸ್ ಸಂಚಾರಕ್ಕೂ ಅನುಮತಿಸಲಾಗಿದೆ. ಬಸ್ ಗಳಲ್ಲಿ ಶೇ.50 ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಇರೋದ್ರಿಂದ ಕೆಎಸ್ ಆರ್ ಟಿಸಿ ಬಸ್‌ಗಳು ಮಾತ್ರ ಸದ್ಯ ರಸ್ತೆಗಿಳಿಯಲಿದ್ದು, ಖಾಸಗಿ ಬಸ್‌ಗಳು ಈ ತಿಂಗಳ ಅಂತ್ಯದವರೆಗೂ ಸೇವೆ ಆರಂಭಿಸೋದಿಲ್ಲ.

ರಾಜ್ಯದ ಇತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಇಳಿಕೆಯಾಗಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸೋಂಕಿನ ಪ್ರಯಾಣ ಏರಿಕೆ ಆಗುತ್ತಾನೆ ಇದೆ. ಜಿಲ್ಲೆಯಲ್ಲಿ ನಿನ್ನೆ 374 ಪಾಸಿಟಿವ್ ಕೇಸ್ ದಾಖಲಾಗಿದ್ದು, 15 ಮಂದಿ ಬಲಿಯಾಗಿದ್ದರು. ಸದ್ಯ ಜಿಲ್ಲೆಯಲ್ಲಿ ಈಗ ಪಾಸಿಟಿವಿಟಿ ರೇಟ್ ಶೇ. 5.68 ಇದೆ. ಒಟ್ಟು 6,820 ಆಕ್ಟೀವ್ ಕೇಸ್‍ಗಳಿವೆ. ಈವರೆಗೂ 1,080 ಮಂದಿ ಕೊರೊನಾ ಹೆಮ್ಮಾರಿಗೆ ಬಲಿಯಾಗಿದ್ದಾರೆ.

ಕೆಲ ದಿನಗಳಿಂದ ಜಿಲ್ಲೆಯಲ್ಲಿ ಪಾಸಿಟಿವಿಟಿ ಏರುತ್ತಲೇ ಇದೆ. ಇದಕ್ಕೆ ಕಾರಣ ಟೆಸ್ಟಿಂಗ್ ಪ್ರಕ್ರಿಯೆ. ಹೌದು, ಈ ಹಿಂದೆ ಜಿಲ್ಲೆಯಲ್ಲಿ ಸಾಮಾನ್ಯವಾಗಿ 2 ರಿಂದ 3 ಸಾವಿರ ಸ್ಯಾಂಪಲ್‍ಗಳನ್ನು RTPCR ಟೆಸ್ಟ್‌ಗೆ ಒಳಪಡಿಸಲಾಗುತಿತ್ತು. ಆದರೆ ಇದೀಗ ಜಿಲ್ಲಾಡಳಿತದ ಸೂಚನೆಯಂತೆ ದಿನವೊಂದಕ್ಕೆ 8 ರಿಂದ 9 ಸಾವಿರ ಟೆಸ್ಟಿಂಗ್ ನಡಿಯುತ್ತಿದೆ. ಗ್ರಾಮಗಳಲ್ಲಿ ಕೊರೊನಾ ಟೆಸ್ಟಿಂಗ್ ಹೆಚ್ಚಾಗಿ ನಡೀತಿದ್ದು ಪಾಸಿಟಿವ್ ಕೇಸ್‍ಗಳು ದಾಖಲಾಗುತ್ತಿವೆ ಎಂದು ಹೇಳಲಾಗಿದೆ.

Leave a Reply

error: Content is protected !!
LATEST
KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ