CrimeNEWSನಮ್ಮಜಿಲ್ಲೆ

ಉದ್ಯಮಿ ಶ್ರೀಧರ್ ಕೊಲೆ ಪ್ರಕರಣ: ಗುಂಡು ಹಾರಿಸಿ ಪ್ರಮುಖ ಆರೋಪಿ ಬಂಧಿಸಿದ ಖಾಕಿಪಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಕೊಲೆ ಪ್ರಕರಣ ಸಂಬಂಧ ಹೆಣ್ಣೂರು ಠಾಣೆಯ ಪೊಲೀಸರು ಗುಂಡು ಹಾರಿಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ರೌಡಿ ಶೀಟರ್ ರಘು (30) ಬಂಧಿತ ಆರೋಪಿ. ಮಂಗಳವಾರ ಸ್ಥಳ ಮಹಜರ್‌ಗೆ ಕರೆದುಕೊಂಡು ಹೋಗಿದ್ದ ವೇಳೆ ಹೆಣ್ಣೂರು ಪೊಲೀಸ್ ಠಾಣೆಯ ಪಿಎಸ್ಸೈ ನಿಂಗರಾಜ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಆರೋಪಿ ರಘು ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಇನ್‌ಸ್ಪೆಕ್ಟರ್ ವಸಂತ್ ಕುಮಾರ್ ಅವರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದರು. ಆರೋಪಿಯ ಬಲಗಾಲಿಗೆ ಗುಂಡು ತಾಕಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಾಗವಾರ ರಿಂಗ್ ರಸ್ತೆಯ ಸರ್ವಿಸ್ ರೋಡ್ ನಲ್ಲಿ ನವೆಂಬರ್ 14ರಂದು ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಎಂಬವರ ಹತ್ಯೆ ನಡೆದಿತ್ತು. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರ ಜಪ್ತಿ ಮಾಡಲು ಪೊಲೀಸರು ತೆರಳಿದ್ದರು.

ಈ ವೇಳೆ ಪಿಎಸ್ಐ ಮೇಲೆ ಹಲ್ಲೆ ನಡೆಸಿ ಆರೋಪಿ ರಘು ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಅಲರ್ಟ್ ಆದ ಇನ್ಸ್ ಪೆಕ್ಟರ್ ವಸಂತ್ ಕುಮಾರ್, ಆತ್ಮ ರಕ್ಷಣೆಗಾಗಿ ಆರೋಪಿ ರಘು ಮೇಲೆ ಗುಂಡು ಹಾರಿಸಿದ್ದಾರೆ. ರಾಮಮೂರ್ತಿನಗರದ ಹೆಣ್ಣೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ, ಶ್ರೀಧರ್ ಕೊಲೆ ಪ್ರಕರಣದ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ಕೃತ್ಯಕ್ಕೆ ಬಳಸಿದ್ದ ಆಯುಧ ಜಪ್ತಿ ಮಾಡಲು ಆರೋಪಿಯನ್ನು ಸ್ಥಳಕ್ಕೆ ಕರೆತರಲಾಗಿತ್ತು. ಈ ವೇಳೆ ಆರೋಪಿ ರಘು ಕೃತ್ಯಕ್ಕೆ ಬಳಸಿದ್ದ ಆಯುಧದಿಂದ ಪಿಎಸ್ಐ ಲಿಂಗರಾಜ್ ಮೇಲೆ ಹಲ್ಲೆ ಮಾಡಿದ್ದಾನೆ.

ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ವಸಂತ್ ಕುಮಾರ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಆದರೂ ಸಹ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಈ ಹಿನ್ನೆಲೆ ಇನ್ಸ್ ಪೆಕ್ಟರ್ ವಸಂತ್ ಕುಮಾರ್ ಆರೋಪಿ ರಘು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ವಿವರಿಸಿದರು.

ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಕೊಲೆ ಪ್ರಕರಣದಲ್ಲಿ ಒಟ್ಟು 6 ಮಂದಿ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಹೇಶ್, ಹರೀಶ್, ಸುಜೀತ್ ನಾಯರ್, ಪ್ರಭು, ನೆಲ್ಸನ್ ರಘು ಬಂಧಿತ ಆರೋಪಿಗಳಾಗಿದ್ದಾರೆ. ಹಳೆ ಹಾಗೂ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಉದ್ಯಮಿ ಶ್ರೀಧರ್ ಅವರನ್ನು ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ