NEWSನಮ್ಮಜಿಲ್ಲೆರಾಜಕೀಯ

ಚಾಮರಾಜನಗರ: ಯತ್ನಾಳ್‌ ಸುತ್ತುವರಿದು ಧಿಕ್ಕಾರ ಕೂಗಿದ ವೀರಶೈವ-ಲಿಂಗಾಯತ ಸಂಘಟನೆ ಮುಖಂಡರು

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ವೀರಶೈವ ಸಮಾಜದ ಮಠಾಧೀಶರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದೀರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಚಾಮರಾಜನಗರದಲ್ಲಿ ಘೇರಾವ್ ಹಾಕಲಾಯಿತು.

ಇಲ್ಲಿನ ವರ್ತಕರ ಭವನದಲ್ಲಿ ಏರ್ಪಡಿಸಿದ್ದ ಗೌಡಲಿಂಗಾಯತ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಹರಳಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಹೋಗಿದ್ದಾಗ ಯತ್ನಾಳ್ ಅವರಿಗೆ ಸಮಾಜದ ಜಿಲ್ಲಾಅಧ್ಯಕ್ಷ ಮೂಡ್ಲುಪುರ ನಂದೀಶ್ ನೇತೃತ್ವದಲ್ಲಿ ಘೇರಾವ್‌ ಹಾಕಿ ಧಿಕ್ಕಾರ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಕೆಲವು ಮಠಾಧೀಶರು ದಕ್ಷಿಣೆಕಾಸಿಗೆ ಆಸೆ ಬಿದ್ದು ಯಡಿಯೂರಪ್ಪ ಪರ ಮಾತನಾಡುತ್ತಿದ್ದಾರೆ ಎಂದು ಯತ್ನಾಳ್ ಹೇಳಿರುವುದನ್ನು ಖಂಡಿಸಿದರು. ಈ ಹೇಳಿಕೆ ವಾಪಸ್ ಪಡೆಯಿರಿ ಎಂದು ವೀರಶೈವ-ಲಿಂಗಾಯತ ಸಂಘಟನೆ ಮುಖಂಡರು, ಕಾರ್ಯ ಕರ್ತರು ಧಿಕ್ಕಾರ ಕೂಗಿ, ನಗರ ಬಿಟ್ಟು ತೊಲಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಾಜದ ಅಗ್ರನಾಯಕ ಯಡಿಯೂರಪ್ಪ ಅವರ ಬಗ್ಗೆ ಮಾತನಾಡಲು ನಿಮಗೆ ಏನು ನೈತಿಕತೆ ಇದೆ ಎಂದು ಪ್ರತಿಭಟನಾಕಾರರು ಮುಗಿಬಿದ್ದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಯತ್ನಾಳ್ ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಕಳಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?