NEWSನಮ್ಮಜಿಲ್ಲೆನಮ್ಮರಾಜ್ಯ

ಸಜ್ಜನ, ಕ್ರಿಯಾಶೀಲ ರಾಜಕಾರಣಿ ಶಾಸಕ ಸಿ.ಎಂ. ಉದಾಸಿ ಇನ್ನಿಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಅನಾರೋಗ್ಯಕ್ಕೆ ಒಳಗಾಗಿದ್ದ ಹಾನಗಲ್ ಶಾಸಕ ಸಿ.ಎಂ. ಉದಾಸಿ ಮಂಗಳವಾರ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ನಾರಾಯಣ ಹೆಲ್ತ್​ ಸಿಟಿಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಬಾರದ ಕುರಿತು ಕೆಲವು ದಿನಗಳ ಹಿಂದೆ ಅವರ ಮಗ ಶಿವಕುಮಾರ್ ಉದಾಸಿ ಕೂಡ ತಿಳಿಸಿದ್ದರು.

ಆರು ಬಾರಿ ಹಾನಗಾಲ್​ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು, ಬಿಜೆಪಿ-ಜೆಡಿಎಸ್​ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಹಲವು ರೈತ ಪರ ಹೋರಾಟಗಳಲ್ಲಿ ಭಾಗಿಯಾಗಿದ್ದ ಸಜ್ಜನ ವ್ಯಕ್ತಿಯಾಗಿ ಅವರು ಗುರುತಿಸಿಕೊಂಡಿದ್ದರು.

ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ.ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ.

ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ

ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರು ಕೂಡ ಉದಾಸಿ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಮಾಜಿ ಸಚಿವರು ಹಾಗೂ ಶಾಸಕರಾದ ಸಿ.ಎಂ. ಉದಾಸಿ ಅವರ ಅಗಲಿಕೆಯ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಯಿತು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ, ಹಿತೈಷಿಗಳು ಹಾಗೂ ಅಪಾರ ಬೆಂಬಲಿಗರಿಗೆ ಈ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಟ್ವೀಟ್​ ಮೂಲಕ ದುಃಖ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ, ಬಿಜೆಪಿ ಹಿರಿಯ ಶಾಸಕ ಸಿ.ಎಂ. ಉದಾಸಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ‘ಉದಾಸಿ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಅವರೊಬ್ಬ ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಮಿತಭಾಷಿ ಹಾಗೂ ಸಾತ್ವಿಕ ಮನೋಭಾವದವರು.1983 ರಲ್ಲಿ ಶಾಸನಸಭೆ ಪ್ರವೇಶಿಸಿದ ಅವರು ಆರು ಬಾರಿ ಶಾಸಕರಾಗಿದ್ದರು. ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಜನಸೇವೆಗೆ ಸದಾ ತುಡಿಯುತ್ತಿದ್ದ ಅವರು ಕಿರಿಯರಿಗೆ ಮಾರ್ಗದರ್ಶಕರು, ಮಾದರಿಯೂ ಆಗಿದ್ದರು.

ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬಂಧು-ಬಳಗವರು, ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಮಾಜಿ ಸಚಿವರು, ಹಾನಗಲ್ ಹಾಲಿ ಶಾಸಕರು ಹಾಗೂ ಜನತಾಪರಿವಾರ ಮೂಲದ ಸಿ. ಎಮ್. ಉದಾಸಿಯವರು ಇಂದು ನಮ್ಮನ್ನೆಲ್ಲ ಅಗಲಿದ ಸುದ್ದಿ ತೀವ್ರ ನೋವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ, ಹಾಗೂ ಅಭಿಮಾನಿ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ