NEWSನಮ್ಮಜಿಲ್ಲೆ

ಸಮುದಾಯ ಭವನಗಳ  ಗ್ರಂಥಾಲಯಗಳಾಗಿ ಮಾರ್ಪಡಿಸಿ : ಇಒ ಕೃಷ್ಣಕುಮಾರ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನಾದ್ಯಂತ ಇರುವ ಡಿ.ದೇವರಾಜ ಅರಸು ಭವನ, ಡಾ.ಅಂಬೇಡ್ಕರ್ ಭವನ, ಬಾಬು ಜಗಜೀವನ್ ರಾಂ, ವಾಲ್ಮೀಕಿ  ಭವನಗಳನ್ನು ಗ್ರಂಥಾಲಯ ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಬಸಳಸಲು ಮಾರ್ಪಡು ಮಾಡುವ ಬಗ್ಗೆ ತಾಪಂ ಕಾರ್ಯನಿರ್ವಣಾಧಿಕಾರಿ ಕೆ.ಆರ್.ಕೃಷ್ಣಕುಮಾರ್ ತಿಳಿಸಿದ್ದಾರೆ.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಪಂ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್  ಅಧ್ಯಕ್ಷತೆಯಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಾದ್ಯಂತ ಪ್ರತಿ ಗ್ರಾಮಗಳಲ್ಲೂ ಡಿ.ದೇವರಾಜ ಅರಸು ಭವನ, ಡಾ.ಅಂಬೇಡ್ಕರ್ ಭವನ, ಬಾಬು ಜಗಜೀವನ್ ರಾಂ, ವಾಲ್ಮೀಕಿ ಭವನ ಸೇರಿದಂತೆ ಇನ್ನಿತರ ಭವನಗಳನ್ನು ನಿರ್ಮಿಸಿ ವರ್ಷಗಳೇ ಕಳೆದರೂ ಅವುಗಳನ್ನು ಮೂಲ ಉದ್ದೇಶಗಳಿಗೆ ಬಳಸುತ್ತಿಲ್ಲ ಹಾಗೂ ಕೆಲವು ಭವನಗಳು ಅನೈತಿಕ ಚಟುವಟಿಕೆಯ ತಾಣಗಳಾಗಿ ಮಾರ್ಪಟ್ಟರೆ ಕೆಲವು ಭವನಗಳು ಶಿಥೀಲಾವಸ್ಥೆಯಲ್ಲಿವೆ.

ಈ  ಕಾರಣ ಅವುಗಳ ಮೂಲ ಉದ್ದೇಶಕ್ಕೆ ಧಕ್ಕೆಯಾಗುತ್ತಿರುವುದರಿಂದ ಅವುಗಳನ್ನು ಪಟ್ಟಣ ವ್ಯಾಪ್ತಿಯಲ್ಲಿ ಪುರಸಭಾ ಮುಖ್ಯಾಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒ ನೇತೃತ್ವದಲ್ಲಿ ಪನಶ್ಚೇತನಗೊಳಿಸಿ.

ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಸ್ಥರು ಹಾಗೂ ಪಿಡಿಒಗಳನ್ನೊಳಗೊಂಡ ಸಮಿತಿಯನ್ನು ರಸಚಿಸಿ ಅವುಗಳನ್ನು ಗ್ರಂಥಾಲಯ ಮತ್ತು ಸಾರ್ವಜನಿಕ ಉದ್ದೇಶಗಳಿಗೆ ಬಸಳಸಲು ಮಾರ್ಪಾಡು ಮಾಡಿದರೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ. ಅಲ್ಲದೆ ಭವನಗಳ ನಿರ್ಮಾಣ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ.ಈ ಬಗ್ಗೆ ಕೂಡಲೇ ತೀರ್ಮಾನ ಕೈಗೊಳಲ್ಲಾಗುವುದು ಎಂದರು.

ಆಡಳಿತಾಧಿಕಾರಿ ಪ್ರಶಾಂತ್ ಮಾತನಾಡಿ, ಕೋವಿಡ್ ಮಹಾಮಾರಿಯಂತ ವಿಷಮ ಪರಿಸ್ಥತಿಯಲ್ಲಿ ಜನತೆಗೆ ಉದ್ಯೋಗ ಹಾಗೂ ಬಡತನದ ಸಮಸ್ಯೆ ಎದುರಾಗಿದ್ದು, ಪಂಚಾಯಿತಿ ಮಟ್ಟದಲ್ಲಿ ಅವರಿಗೆ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು. ಅರಣ್ಯ ಇಲಾಖೆ, ಸೆಸ್ಕ್, ಪಶುಪಾಲನಾ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸರ್ಕಾರದ ಮಾರ್ಗಸೂಚಿಯಂತೆ ಕ್ರಿಯಾ ಯೋಜನೆಗಳನ್ನು ರೂಪಿಸಿ ಕಾರ್ಯ ನಿರ್ವಹಿಸಬೇಕು ಎಂದರು.

ಬಿಇಒ ತಮ್ಮೇಗೌಡ, ಸಮಾಜ ಕಲ್ಯಾಣಾಧಿಕಾರಿ ಸಿದ್ದೇಗೌಡ,  ಪಶುಪಾಲನಾ ಇಲಾಕೆ ಸಹಾಯಕ ನಿರ್ದೆಶಕ ಸೋಮಯ್ಯ, ಸಿಡಿಪಿಒ ಕುಮಾರ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಭಾರತಿ, ಕೃಷಿ ಇಲಾಖೆ ಸಹಾಯಕ ಅಧಿಕಾರಿ ದಿವಾಕರ್, ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಶ್ರೀನಿವಾಸ್, ವಿವಿಧ ಇಲಾಖೆ ಅಧಿಕಾರಿಗಳಾದ ಮಂಜುನಾಥ್, ಜಿ.ಸಿ.ಮಹದೇವ್,  ಶಿವಕುಮಾರ್, ಅನಿಲ್, ಸಿದ್ದರಾಜು, ಶಿವರಂಜನ್  ಮತ್ತಿತರರು ಹಾಜರಿದ್ದರು.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...