Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆ

ಗ್ರಾಮಸ್ಥರ ಸ್ಪಷ್ಟ ಮಾಹಿತಿಯಿಂದ ಕೊರೊನಾ ನಿಗ್ರಹ: ಸಹಾಯಕ ಕೃಷಿ ನಿರ್ದೇಶಕ ಜಯರಾಮಯ್ಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಮಾನಸಿಕ ಬಹಿಷ್ಕಾರದ ಭಯ ಹಾಗೂ ಕೀಳರಿಮೆ ಭಾವನೆಯನ್ನು ಬಿಟ್ಟು ಮನೆ ಮನೆ ಸಮೀಕ್ಷೆ ವೇಳೆ ಹಳ್ಳಿಗಾಡಿನ ಜನರು ತಮ್ಮ ಕುಟುಂಬದ ಆರೋಗ್ಯ ಮಾಹಿತಿಯನ್ನು ಸ್ಪಷ್ಟವಾಗಿ ನೀಡಿದರೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ರೋಗವನ್ನು ನಿಗ್ರಹಿಸಬಹುದು ಎಂದು ಸೋಸಲೆ ಗ್ರಾಪಂ ಉಸ್ತುವಾರಿ ಅಧಿಕಾರಿಯಾದ ಸಹಾಯಕ ಕೃಷಿ ನಿರ್ದೇಶಕ ಜಯರಾಮಯ್ಯ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತಾಲೂಕಿನ ವ್ಯಾಸರಾಜಪುರ ಗ್ರಾಮದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಂಗಳವಾರ ನಡೆದ ಕೊರೊನಾ ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗವಾಗಿದ್ದರೂ ಭಯಪಡದೆ ವೈದ್ಯಕೀಯ ಚಿಕಿತ್ಸೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಗುಣಮುಖರಾಗಬಹುದು. ಮತ್ತೊಬ್ಬರಿಗೆ ಹರಡುವುದನ್ನೂ ತಪ್ಪಿಸಬಹುದು ಎಂದು ಸಲಹೆ ನೀಡಿದರು.

ಮನುಷ್ಯನ ಜೀವಕೋಶಕ್ಕೆ ಹಲವು ಶಿಲೀಂಧ್ರಗಳು ಉಪಯುಕ್ತವಾಗಿದ್ದರೂ ಕೊರೊನಾ ಸೊಂಕಿನಿಂತ ಚೇತರಿಸಿಕೊಂಡವರಲ್ಲಿ ಕಾಣಿಸಿಕೊಳ್ಳುತ್ತಿರುವ ವಿವಿಧ ಬಣ್ಣದ ಫಂಗಸ್ (ಶಿಲೀಂಧ್ರ) ಕಾಯಿಲೆ ಸಂಕಷ್ಟದಿಂದ ಪಾರಾದವರನ್ನ ಮತ್ತೆ ಸಾವಿನ ದವಡೆಗೆ ತಳ್ಳುತ್ತಿದೆ. ಆದ್ದರಿಂದ ಚಿಕಿತ್ಸೆ ಪಡೆಯುವಾಗ ವೈದ್ಯರ ಸಲಹೆ ಸೂಚನೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಆರೋಗ್ಯ ಪರಿಸ್ಥಿತಿಯ ವಸ್ತುಸ್ಥಿತಿಯ ಬಗ್ಗೆ ಮನೆ ಮನೆ ಸಮೀಕ್ಷೆ ತಿಳಿಸಬೇಕು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಪುಟ್ಟಸ್ವಾಮಿ ಮಾತನಾಡಿ, ಸೋಂಕಿತ ವ್ಯಕ್ತಿಗಳು ಸಾರ್ವಜನಿಕ ಸಂಪರ್ಕದಿಂದ ದೂರ ಉಳಿಯುವ ಸ್ವಯಂ ಪ್ರೇರಿತರಾಗಿ ಕಡಿವಾಣ ಹಾಕಿಕೊಳ್ಳಬೇಕು. ಅನಗತ್ಯ ಓಡಾಟಕ್ಕೆ ಅರೋಗ್ಯವಂತರು ಬ್ರೇಕ್ ಹಾಕಿಕೊಂಡರೆ ಕೊರೊನಾ ಸೋಂಕಿನಿಂದ ದೂರವಿರಬಹುದು. ವ್ಯಾಸರಾಜಪುರ ಗ್ರಾಮದಲ್ಲಿ ಕೊರೊನಾ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಕೊರೊನಾ ನಿಯಂತ್ರಣಕ್ಕೆ ಗ್ರಾಮ ಸಮಿತಿ ರಚನೆ
ವ್ಯಾಸರಾಜಪುರ ಗ್ರಾಮವೊಂದರಲ್ಲೇ ಕೊರೊನಾ ಸೋಂಕಿತರ ಸಂಖ್ಯೆ 20 ಆಗಿರುವುದರಿಂದ ನಿಯಂತ್ರಣಕ್ಕೆ ಮುಂದಾಗಿರುವ ಗ್ರಾಮಸ್ಥರು ಸಭೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಸಮುದಾಯಗಳ ಯಜಮಾನರ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿಕೊಂಡರು.

ಲಾಕ್ ಡೌನ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಅಗತ್ಯವೆನಿಸಿದರೆ ಸ್ವಯಂ ಲಾಕ್ ಡೌನ್ ಮಾಡಿಕೊಳ್ಳುವುದು. ಗ್ರಾಮಸ್ಥರಲ್ಲಿ ಜ್ವರ ಕಾಣಿಸಿಕೊಂಡ ಕೂಡಲೇ ತಪಾಸಣೆಗೊಳಪಡಿಸಿ, ಚಿಕಿತ್ಸೆ ಕೊಡಿಸುವುದು. ಕೊರೊನಾ ನಿಗ್ರಹಕ್ಕೆ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲು ಸಮಿತಿಯ ರೂಪುರೇಷೆಗಳ ಬಗ್ಗೆ ತೀರ್ಮಾನಿಸಲಾಯಿತು.

ಸೋಸಲೆ ಗ್ರಾ.ಪಂ ಅಧ್ಯಕ್ಷ ಎಸ್.ಪುಟ್ಟಸ್ವಾಮಿ, ಶಿಕ್ಷಕ ಪ್ರಸನ್ನ, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಸಮುದಾಯಗಳ ಯಜಮಾನರು ಇತರರಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ