NEWSನಮ್ಮಜಿಲ್ಲೆ

ಕೊರೊನಾ ಅನ್‌ಲಾಕ್‌: ಜೂ.21ರಿಂದ ರಸ್ತೆಗಿಳಿಯಲಿವೆ 2 ಸಾವಿರ ಬಿಎಂಟಿಸಿ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟಲು ಲಾಕ್​ಡೌನ್​ ಜಾರಿಯಾಗಿತ್ತು. ಸೋಂಕು ನಿಯಂತ್ರಕ್ಕೆ ಬರುತ್ತಿದ್ದಂತೆ ಹಂತ ಹಂತವಾಗಿ ಅನ್ಲಾಕ್ ಪ್ರಕ್ರಿಯೆ ಶುರುವಾಗಿದೆ. ಈ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ 2000 ಬಸ್‌ಗಳು ರಸ್ತೆಗಿಳಿಯಲಿವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ತಿಳಿಸಿದ್ದಾರೆ.

ಬಿಎಂಟಿಸಿಯಲ್ಲಿ 6,400 ಬಸ್‌ಗಳಿದ್ದು, ಮೊದಲ ಹಂತದಲ್ಲಿ 1,500 ರಿಂದ 2,000 ಸಾವಿರ ಬಸ್‌ಗಳು ಓಡಾಟ ನಡೆಸಲಿವೆ. ಕೊರೊನಾ ಭೀತಿ ಹಿನ್ನೆಲೆ ಬಿಎಂಟಿಸಿ ಎಸಿ ವೋಲ್ವೋ ಬಸ್‌ಗಳು ಸಂಚಾರ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.

ಜೂನ್‌ 21ರಿಂದ ಬಸ್‌ಗಳು ರಸ್ತೆಗಿಳಿಯಬೇಕಿರುವುದರಿಂದ ಕಳೆದ ಏಪ್ರಿಲ್‌ 7ರಿಂದ ಏ.21ರವರೆಗೆ ನಡೆದ ಸಾರಿಗೆ ನೌಕರರ ಮುಷ್ಕರ ಮತ್ತು ಏ.27ರಿಂದ ಜೂನ್‌ 20ರವರೆಗೂ ಕೊರೊನಾ ಲಾಕ್‌ಡೌನ್‌ನಿಂದಾಗಿ ಡಿಪೋಗಳಲ್ಲೇ ನಿಂತಿದ್ದ ಬಸ್‌ಗಳು ಸದ್ಯ ಧೂಳು ತುಂಬಿಕೊಂಡಿದ್ದು, ಅವುಗಳ ಸ್ವಚ್ಛತಾ ಕಾರ್ಯ ಇಂದಿನಿಂದಲೇ (ಜೂ.19) ನಡೆಯುತ್ತಿದೆ.

ಎಲ್ಲಾ ಬಸ್‌ಗಳನ್ನು ಸ್ವಚ್ಛಗೊಳಿಸುತ್ತಿದ್ದು, ಬಸ್‌ ಸೀಟ್‌ಗಳಿಗೆ ಸ್ಯಾನಿಟೈಸ್‌ ಕೂಡ ಮಾಡಲಾಗುತ್ತಿದೆ. ಇನ್ನು ಬಿಎಂಟಿಸಿ ಚಾಲನಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಕಡ್ಡಾಯವಾಗಿ ಮೊದಲನೇ ಕೊರೊನಾ ಲಸಿಕೆ ಪಡೆದಿರಬೇಕು ಜತೆಗೆ RTPCR ಟೆಸ್ಟ್‌ ಮಾಡಿಸಿಕೊಂಡಿರುವ ವರದಿ ತರಬೇಕು ಎಂದು ಎಂಡಿ ಶಿಖಾ ತಿಳಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?