NEWSನಮ್ಮಜಿಲ್ಲೆನಮ್ಮರಾಜ್ಯ

ಕೊರೊನಾತಂಕ: ಮೈಸೂರು ದಸರಾ ಸರಳ ಆಚರಣೆಗೆ ಸರ್ಕಾರ ನಿರ್ಧಾರ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಆತಂಕ ಹಿನ್ನೆಲೆ ಈ ಬಾರಿಯೂ ಸರಳ, ಸಾಂಪ್ರದಾಯಿಕ ಮೈಸೂರು ದಸರಾ ಆಚರಣೆಗೆ ಸರ್ಕಾರ ತೀರ್ಮಾನಿಸಿದೆ.

ನಾಡಹಬ್ಬ ಮೈಸೂರು ದಸರಾ ಆಚರಣೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕಳೆದ ಬಾರಿ ಸಾಂಪ್ರದಾಯಿಕ, ಸರಳವಾಗಿ ದಸರಾ ಆಚರಣೆ ಮಾಡಲಾಗಿತ್ತು. ಈ ಬಾರಿ ಕೂಡ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ.

ದಸರಾ ಆಚರಣೆ ವೇಳೆ ಆರ್ಥಿಕ ಚಟುವಟಿಕೆಗಳು ಆಗುತ್ತಿದ್ದವು. ಆದರೆ ಕೋವಿಡ್​ನಿಂದಾಗಿ ಅಲ್ಲಿ ಸಮಸ್ಯೆ ಆಗಿದೆ. ಹೀಗಾಗಿ ಆರ್ಥಿಕ ಚಟುವಟಿಕೆಗೆ ಅವಕಾಶ ಸಂಬಂಧ ಆಲೋಚನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಅಕ್ಟೋಬರ್‌ 7ರಂದು ಮೈಸೂರು ದಸರಾ ಉದ್ಘಾಟನೆ ಆಗಲಿದೆ. ಅಕ್ಟೋಬರ್ 15 ರಂದು ಮಧ್ಯಾಹ್ನ ಜಂಬೂ ಸವಾರಿ ನಡೆಯಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಅರಮನೆ ಆವರಣದ ಒಳಗಡೆ ಜಂಬೂ ಸವಾರಿ ನಡೆಯಲಿದೆ ಎಂದು ಸಿಎಂ ಹೇಳಿದರು.

ಮೈಸೂರು ದಸರಾಗೆ ಈ ಬಾರಿ ಆರು ಕೋಟಿ ರೂ. ನಿಗದಿ ಮಾಡಲಾಗಿದೆ. ಕೊಟ್ಟಿರುವ ಹಣದಲ್ಲೇ ಅವರು ಖರ್ಚು ಮಾಡಬೇಕು. ಅದಕ್ಕಿಂತ ಜಾಸ್ತಿ ಆಗಬಾರದು ಎಂದು ತೀರ್ಮಾನಿಸಿರುವುದಾಗಿದೆ ವಿವರಿಸಿದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ