ವಿಜಯಪಥ ಸಮಗ್ರ ಸುದ್ದಿ
ಚನ್ನಪಟ್ಟಣ: ಮಾಜಿ ನಗರಸಭಾ ಸದಸ್ಯ ಜೆಡಿಎಸ್ ಮುಖಂಡರಾದ ಉಮಾಶಂಕರ್ ಕೊರೊನಾಕ್ಕೆ ಬಲಿಯಗಿದ್ದಾರೆ.
ಅವರ ನಿಧನ ತೀವ್ರ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಉಮಾಶಂಕರ್ ಸಾವಿನಿಂದ ಪಕ್ಷದ ನಿಷ್ಠಾವಂತ ಮುಖಂಡರೊಬ್ಬರನ್ನು ಕಳೆದುಕೊಂಡಂತಾಗಿದೆ. ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು, ಕುಟುಂಬದ ಸದಸ್ಯರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಹೇಳಿದ್ದಾರೆ.
ಉಮಾಶಂಕರ್ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.