CrimeNEWSನಮ್ಮಜಿಲ್ಲೆ

ತಮ್ಮ ಒಂದೂವರೆ ವರ್ಷದ ಮಗುವನೇ ಕೊಂದರ ಅಪ್ಪ-ಅಮ್ಮ: ಹೂತಿದ್ದ ಶವ ಹೊರತೆಗೆದ ಪೊಲೀಸರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾಸನ: ಒಂದೂವರೆ ವರ್ಷದ ಮಗುವನ್ನುತಂದೆ ಹಾಗೂ ತಾಯಿ ಸೇರಿಕೊಂಡು ಕೊಂದು ಕಾಫಿತೋಟದಲ್ಲಿ ಹೂತುಹಾಕಿದ್ದಾರೆ ಎಂಬ ಅನುಮಾನದ ಮೇರೆಗೆ ಮಗುವಿನ ಮೃತದೇಹವನ್ನು ಹೊರತೆಗೆದು ಅಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಈ ಘಟನೆ ಜಿಲ್ಲೆಯ ಆಲೂರು ತಾಲೂಕಿನ, ಕೆ.ಹೊಸಕೋಟೆ ಹೋಬಳಿಯ ಕಾಡ್ಲೂರು ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ತಾಲೂಕಿನ ಕೆ.ಹೊಸಕೋಟೆ ಹೋಬಳಿಗೆ ಆಗಮಿಸಿದ್ದ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಕೆಲ ದಿನಗಳ ಹಿಂದೆ ಪತಿ, ಪತ್ನಿ ನಡುವೆ ಕೌಟುಂಬಿಕ ಕಾರಣಕ್ಕೆ ಜಗಳ ನಡೆದಿದೆ. ಈ ವೇಳೆ ಮಗುವನ್ನು ಹೊಡೆದಿದ್ದು ಆ ಹೊಡೆದ ಬಿರುಸಿಗೆ ಮಗು ಅಸುನೀಗಿದೆ. ಬಳಿಕ ಆ ಮಗುವನ್ನು ಹೂತು ಹಾಕಲಾಗಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಆದರೆ ಮಗು ಅನಾರೋಗ್ಯದಿಂದಾಗಿ ಮೃತಪಟ್ಟಿದೆ ಎಂದು ಪಾಲಕರು ಹೇಳುತ್ತಿದ್ದಾರೆ.

ಈ ಕುರಿತು ಸ್ಥಳೀಯರೊಬ್ಬರು ಕೊಟ್ಟಿರುವ ದೂರಿನ ಮೇರೆಗೆ ಆ ಮಗುವಿನ ಮೃತದೇಹ ಹೊರತೆಗೆದು ಪರಿಶೀಲನೆ ನಡೆಸಲಾಗುತ್ತಿದೆ. ಉಪವಿಭಾಗಾಧಿಕಾರಿ ಮಾರ್ಗದರ್ಶನದಲ್ಲಿ ಸ್ಥಳಕ್ಕೆ ಭೇಟಿ ನೀಡಿರುವ ತಹಸೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳ ತಂಡ ಶವವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ