NEWSನಮ್ಮಜಿಲ್ಲೆಶಿಕ್ಷಣ-

ಬಿಇಒ ಅಮಾನತಿಗೆ ಒತ್ತಾಯಿಸಿ ದಸಂಸ, ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಶಿಕ್ಷಣ ಸಂಸ್ಥೆಗೆ ಮೀಸಲಿದ್ದ ಆಸ್ತಿಯನ್ನು ರಕ್ಷಿಸಬೇಕಾದ ಬಿಇಒ ವೈ.ಕೆ.ತಿಮ್ಮೇಗೌಡ ಅವರೇ ಪ್ರಾಥಮಿಕ ಶಾಲೆಯ ಜಾವಗನ್ನು ಖಾಸಗಿ ಸಹಕಾರ ಸಂಘಕ್ಕೆ ಅಕ್ರಮವಾಗಿ ಮಾರಾಟ ಮಾಡುವ ಹುನ್ನರಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದಸಂಸ ಹಾಗೂ ಪ್ರಗತಿಪರ ಸಂಘಟನೆಯ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ಬಿಇಒ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ತಾಲೂಕು ನಾಯಕರ ಸಂಘದ ಅಧ್ಯಕ್ಷ ಪಿ.ಪಿ.ಪುಟ್ಟಯ್ಯ ಮಾತನಾಡಿ, ಪಟ್ಟಣದ ಬಿ.ಎಂ.ರಸ್ತೆಯ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೇರಿದ ಜಾಗವನ್ನು ಬಿಇಒರವರು ಕೆಲವು ಪಟ್ಟಭದ್ರ ಹಿತಾಸಕ್ತಿಗಳೊಡನೆ ಸೇರಿಕೊಂಡು ಖಾಸಗಿ ಸಹಕಾರ ಸಂಘಕ್ಕೆ ಖಾತೆ ಮಾಡಿ ಮಾರಾಟ ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ದೂರಿದರು.

ಪಟ್ಟಣದ ಸರ್ವೆ ನಂ.107 ರಲ್ಲಿ ವಿದ್ಯಾಸಂಸ್ಥೆಯ 2.17 ಗುಂಟೆ ಜಾಗವಿದೆ. ಅದರಲ್ಲಿ ಶಾಲೆ ಹಾಗೂ ಶಿಕ್ಷಕರ ಸಭಾಂಗಣವಿದೆ. ಹೀಗಿದ್ದರೂ ಖಾಸಗಿ ಸಹಕಾರ ಸಂಘಕ್ಕೆ ಅಕ್ರಮವಾಗಿ ಪರಭಾರೆ ನಡೆಸಲು ಹುನ್ನಾರ ನಡೆಸಿ ಸರ್ಕಾರಿ ಜಾಗವನ್ನು ಕಬಳಿಸಲು ಮುಂದಾಗಿದ್ದಾರೆ.

ಈ ವಿಷಯವಾಗಿ ಈಗಾಗಲೇ ಜಿಲ್ಲಾಧಿಕಾರಿಗಳು ಬಿಇಒಗೆ ನೋಟಿಸ್‌ ನೀಡಿದ್ದು, ಈ ಪ್ರಕರಣವು ಜಿಲ್ಲಾಧಿಕಾರಿಗಳು ಮತ್ತು ಪ್ರಾದೇಶಿಕ ಆಯುಕ್ತರ ಸಮ್ಮುಖದಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಿದ್ದರೂ ಬಿಇಒ ತಿಮ್ಮೇಗೌಡ ಪದೇಪದೆ ಜಾಗವನ್ನು ಖಾಸಗಿಯವರಿಗೆ ಖಾತೆ ಮಾಡಿಕೊಡಲು ಪತ್ರ ವ್ಯವಹಾರ ನಡೆಸುತ್ತಿದ್ದಾರೆ.

ಸರ್ಕಾರಿ ಜಾಗವನ್ನು ಪರಭಾರೆ ಮಾಡುವ ಅಧಿಕಾರವನ್ನು ಇವರಿಗೆ ಕೊಟ್ಟವರು ಯಾರು? ಆಗಾದರೆ ನಮ್ಮಲ್ಲೂ ಹತ್ತಾರರು ಸಹಕಾರ ಸಂಘಗಳಿವೆ ನಮಗೂ ಜಾಗವನ್ನು ಹಸ್ತಾರಂತರ ಮಾಡಲಿ ಎಂದು ಕಿಡಿಕಾರಿದರು.

ದಸಂಸ ಮುಖಂಡ ಈರಾಜ್ ಬಹುಜನ್ ಮಾತನಾಡಿ, ಪಟ್ಟಣದಲ್ಲಿ ನಿರ್ಮಿಸಲು ಹೊರಟಿರುವ ಗುರುಭವನ ನಿರ್ಮಾಣ ನಿರ್ವಹಣಾ ಸಮಿತಿಯ ಹೆಸರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಸಭಾಂಗಣ ಎಂಬುದಾಗಿ ಬೋರ್ಡ್ ಹಾಕುವ ಮೂಲಕ ಶಿಕ್ಷಕರಲ್ಲಿ ವರ್ಗ ಸಂಘರ್ಷವನ್ನು ಉಂಟು ಮಾಡುತ್ತಿದ್ದಾರೆ ಎಂದರು.

ಇನ್ನು ಮಾಹಿತಿ ಹಕ್ಕು ಅಧಿನಿಯಮದಡಿಯಲ್ಲಿ ಈ ವರೆಗಿನ ಲೆಕ್ಕಪತ್ರವನ್ನು ಕೇಳಿದರೆ ಮಾಹಿತಿ ನೀಡಲು ನಿರಾಕರಿಸುತ್ತಿದ್ದಾರೆ. ಅಮಾಯಕ ಶಿಕ್ಷಕರಿಗೆ ವೇತನ ಬಡ್ತಿಯನ್ನು ನೀಡುವುದಾಗಿ ಹೇಳಿ ನಿಯಮ ಬಾಹಿರವಾಗಿ ಬಲವಂತವಾಗಿ ಛಾಪಾ ಕಾಗದವನ್ನು ಪಡೆಯಲು ಸಂಘದ ಕೆಲವು ಪದಾಧಿಕಾರಿಗಳನ್ನು ಮುಂದಿಟ್ಟುಕೊಂಡು ಶಿಕ್ಷಕರಿಂದ ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ ತಮಗಿರುವ ಪರಮಾಧಿಕಾರ ಬಳಸಿಕೊಂಡು ತಮಗೆ ಬೇಕಾದವರನ್ನು ಹಾಗೂ ಯಾರೂ ಹಣ ನೀಡುತ್ತಾರೋ ಅವರನ್ನು ಆಯಾಕಟ್ಟಿನ ಸ್ಥಳಗಳಿಗೆ ನಿಯೋಜನೆ ಮಾಡುತ್ತಿದ್ದಾರೆ ಎಂದು ದೂರಿದರು.

ಮುಖಂಡ ಕೋಗಿಲವಾಡಿ ರಾಮಚಂದ್ರ ಮಾತನಾಡಿ, ಪಿರಿಯಾಪಟ್ಟಣ ತಾಲೂಕು ಹೊರತುಪಡಿಸಿ ಈಗಾಗಲೇ ಮೈಸೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಶಿಕ್ಷಕರ ವೇತನ ಬಡ್ತಿ ಮಾಡಲಾಗಿದೆ. ಆದರೆ, ಪಿರಿಯಾಪಟ್ಟಣದಲ್ಲಿ ಮಾಡಲಾಗಿಲ್ಲ.

ಇನ್ನು ಕಾನೂನು ಬಾಹಿರವಾಗಿ ಸರ್ಕಾರಿ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿರುವ ಬಿಇಒ ಅವರನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದಿದ್ದರೆ ಶಿಕ್ಷಣ ಇಲಾಖೆಯ ಉಪ ನಿರ್ದೆಶಕರ ಕಚೇರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂಸು ಎಚ್ಚರಿಕೆ ನೀಡಿದರು.

ಶಿರಸ್ತೇದಾರ್ ವಿನಯ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ವಕೀಲ ನಂದಿಪುರ ಲೋಕೇಶ್, ಬೀಮ್ ಆರ್ಮಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಕ್ರಮ್ ಪಾಷಾ, ಪ್ರಗತಿಪರ ಸಂಘಟನೆಯ ಮುಖಂಡರಾದ ವಾಜೀದ್ ಪಾಷಾ, ಎನ್.ಡಿ.ಬಸವರಾಜು, ತಮ್ಮಡಹಳ್ಳಿ ರವಿ, ಕಲ್ಕೆರೆ ಪ್ರಕಾಶ್, ಆಯಿತನಹಳ್ಳಿ ಶ್ರೀನಿವಾಸ್, ಬೂದಿತಿಟ್ಟು ಗಣೇಶ್, ಆಲನಹಳ್ಳಿ ಶ್ರೀನಿವಾಸ್, ಕಂಪಲಾಪುರ ಅನಿಲ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ