NEWSನಮ್ಮಜಿಲ್ಲೆಸಂಸ್ಕೃತಿ

ಮೈಸೂರು: ದಸರಾ ಆಚರಣೆ ನಿಲ್ಲಿಸುವುದಿಲ್ಲ: ಸಚಿವ ಸೋಮಶೇಖರ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೋವಿಡ್‌ ಪ್ರಕರಣಗಳ ಹೆಚ್ಚಳ ಹಾಗೂ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

ಎಚ್.ಡಿ.ಕೋಟೆ ತಾಲೂಕಿನ ಬಾವಲಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯಂತೆಯೇ ಈ ಸಲವೂ ಸರಳ ದಸರ ಆಚರಿಸಲಾಗುವುದು. ಈ ಸಂಬಂಧ ಮೈಸೂರು ಜಿಲ್ಲಾಡಳಿತ ಸಿದ್ಧಪಡಿಸುವ ರೂಪರೇಷೆಗಳನ್ನು ಮುಖ್ಯಮಂತ್ರಿಗಳ ಅವಗಾಹನೆಗೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈಗಾಗಲೇ ಸರಳ ದಸರಾ ಆಚರಣೆಗೆ ರೂಪರೇಷೆಗಳನ್ನು ಸಿದ್ದಪಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದ ಅವರು, ಕಳೆದ ವರ್ಷ ದಸರಾ ಆಚರಣೆಗೆ 10 ಕೋಟಿ ರೂ. ಮಂಜೂರು ಮಾಡಲಾಗಿತ್ತು. ಆ ಪೈಕಿ 7.50 ಕೋಟಿ ಅನುದಾನ ಉಳಿದಿದೆ ಎಂದು ತಿಳಿಸಿದರು.

ಇನ್ನು ಈ ವರ್ಷದ ದಸರಾ ಆಚರಣೆಗೆ ಸರ್ಕಾರದ ಅನುಮೋದನೆ ಪಡೆದು ಆ ಉಳಿಕೆ ಅನುದಾನ ಬಳಸಿಕೊಳ್ಳಲಾಗುವುದು. ಮೈಸೂರು ದಸರಾ ಮಹೋತ್ಸವವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ವರ್ಷವೂ ದಸರಾ ಆಚರಣೆ ಮಾಡಲಾಗುತ್ತದೆ ಎಂದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ