NEWSನಮ್ಮಜಿಲ್ಲೆರಾಜಕೀಯ

ಅಭಿವೃದ್ಧಿ ಯೋಜನೆಗಳು ಚುರುಕಾಗಬೇಕು, ಭ್ರಷ್ಟಾಚಾರಕ್ಕೆ ಆಸ್ಪದ ನೀಡದಂತೆ ಅಧಿಕಾರಿಗಳಿಗೆ ಸಿಎಂ ತಾಕೀತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವ ಮಟ್ಟದಲ್ಲಿ ಗುರುತಿಸಲ್ಪಡುವ ಬೆಂಗಳೂರು ನಗರದ ಅಭಿವೃದ್ಧಿಯ ಯೋಜನೆಗಳು ಇನ್ನಷ್ಟು ಚುರುಕಾಗಿ ಅನುಷ್ಠಾನಗೊಳ್ಳಬೇಕು. ಕಾಲಮಿತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಭ್ರಷ್ಟಾಚಾರಕ್ಕೆ ಆಸ್ಪದ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ಅಧ್ಯಕ್ಷತೆಯಲ್ಲಿ ಬೆಂಗಳೂರು ಅಭಿವೃದ್ಧಿ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರಿನ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಸುಮಾರು ಮೂರು ಗಂಟೆಗಳು ಮಹತ್ವದ ವಿಷಯಳ ಬಗ್ಗೆ ಚರ್ಚಿಸಲಾಯಿತು.

ಬೆಂಗಳೂರು ಅಭಿವೃದ್ಧಿಯ ವಿಚಾರದಲ್ಲಿ ಸಚಿವರೊಂದಿಗೆ ಒಂದು ತಂಡವಾಗಿ ಕಾರ್ಯನಿರ್ವಹಿಸಲಾಗುವುದು. ಒಟ್ಟಾಗಿ ಕುಳಿತು ಚರ್ಚಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು. ಶಾಸಕರ ಅಭಿಪ್ರಾಯಗಳನ್ನೂ ಪರಿಗಣಿಸಿ, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬೆಂಗಳೂರು ಅಭಿವೃದ್ಧಿಗಾಗಿ ಕೈಗೆತ್ತಿಕೊಂಡ ಕಾರ್ಯಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಸಿಎಂ ನೇತೃತ್ವದಲ್ಲಿ ನಡೆದ ಸಭೆಯ ಮುಖ್ಯಾಂಶಗಳು
* ಬಿಬಿಎಂಪಿ ತನ್ನ ವಾರ್ಷಿಕ ಆದಾಯ ಮಿತಿಯೊಳಗೇ ಯೋಜನೆ ರೂಪಿಸುವಂತೆ ಸಲಹೆ ನೀಡಲಾಯಿತು.

* ಬಿಡಬ್ಲ್ಯು.ಎಸ್.ಎಸ್.ಬಿ.ಯು ಬಿಬಿಎಂಪಿ ವ್ಯಾಪ್ತಿಗೆ 110 ಗ್ರಾಮಗಳಲ್ಲಿ ನಿರ್ವಹಿಸುತ್ತಿರುವ ಎಂಟು ಸಾವಿರ ಬೋರ್ ವೆಲ್ ಗಳಲ್ಲಿ ಸುಸ್ಥಿತಿಯಲ್ಲಿರುವ ಬೋರ್ ವೆಲ್ ಗಳನ್ನು ಗುರುತಿಸಿ, ಅವುಗಳ ದುರಸ್ತಿ, ಸಮರ್ಪಕ ನಿರ್ವಹಣೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

* ನಗರದಲ್ಲಿ ವರ್ಷಾಂತ್ಯದಲ್ಲಿ ಕನಿಷ್ಠ 3 ಲಕ್ಷ ಬೀದಿ ದೀಪಗಳನ್ನು ಎಲ್ ಇ ಡಿ ದೀಪಗಳಿಗೆ ಪರಿವರ್ತಿಸಲು ಸೂಚಿಸಲಾಯಿತು.* ಮಳೆನೀರು ಚರಂಡಿಗಳ ಕುರಿತಂತೆ ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು.

* ಕಳೆದ ಬಾರಿ ಮಳೆಯಿಂದ ಕೊಚ್ಚಿ ಹೋದ/ ಹಾಳಾದ ಪ್ರಮುಖ ರಸ್ತೆಗಳನ್ನು ಆದ್ಯತೆಯ ಮೇರೆಗೆ ದುರಸ್ತಿ ಮಾಡುವಂತೆ ಸೂಚಿಸಲಾಯಿತು.

* 860 ಕಿ.ಮೀ. ಆರ್ಟೀರಿಯಲ್ ಮತ್ತು ಸಬ್-ಆರ್ಟೀರಿಯಲ್ ರಸ್ತೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಯ ಬಗ್ಗೆ ಮತ್ತು ಸಂಚಾರ ನಿರ್ವಹಣೆ ಬಗ್ಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಕುರಿತು ಚಿಂತನೆ ನಡೆಸಲಾಗುವುದು.

* ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ಅಂತಿಮ ಹಂತದಲ್ಲಿದ್ದು ಶೀಘ್ರವೇ ಪೂರ್ಣಗೊಳಿಸಿ.

* ಮುಖ್ಯಮಂತ್ರಿಗಳ ನವನಗರೋತ್ಥಾನ ಯೋಜನೆಗಳನ್ನು ಚುರುಕುಗೊಳಿಸಿ.

* ಅಕ್ಟೋಬರ್ ಒಳಗೆ ಮೂರನೇ ಹಂತದ ನಗರೋತ್ಥಾನ ಯೋಜನೆಗೆ ಕಾಮಗಾರಿಗಳನ್ನು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಯಿತು.

* ನಿರ್ಮಾಣದ ವಿವಿಧ ಹಂತದಲ್ಲಿರುವ 8 ಫ್ಲೈ ಓವರ್ ಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಸಚಿವರಾದ ಡಾ. ಸಿ ಎನ್ ಅಶ್ವತ್ಥ್ ನಾರಾಯಣ್, ವಿ. ಸೋಮಣ್ಣ, ಆರ್. ಅಶೋಕ್, ಅರಗ ಜ್ಞಾನೇಂದ್ರ, ಎಸ್. ಟಿ. ಸೋಮಶೇಖರ್, ಬೈರತಿ ಬಸವರಾಜ, ಮುನಿರತ್ನ, ಕೆ. ಗೋಪಾಲಯ್ಯ, ಬಿ.ಡಿ.ಎ. ಅಧ್ಯಕ್ಷ ಎಸ್. ಆರ್. ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ