NEWSನಮ್ಮಜಿಲ್ಲೆನಮ್ಮರಾಜ್ಯ

ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ನಿಧನಕ್ಕೆ ಮಾಜಿ ಪ್ರಧಾನಿ, ಹಾಲಿ, ಮಾಜಿ ಸಿಎಂಗಳ ಸಂತಾಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ‘ಶಬ್ದಬ್ರಹ್ಮ’ನೆಂದೇ ಖ್ಯಾತಿ ಪಡೆದಿರುವ ಹಿರಿಯ ಸಾಹಿತಿ, ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ (108) ಅವರು ಬೆಂಗಳೂರಿನಲ್ಲಿ ಇಂದು ತಡರಾತ್ರಿ ನಿಧನರಾಗಿದ್ದು ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕನ್ನಡದ ನಿಘಂಟು ತಜ್ಞ, ಪದ್ಮಶ್ರೀ, ಶಬ್ದಬ್ರಹ್ಮ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ. ಕನ್ನಡ ಸಾಹಿತ್ಯ ಲೋಕಕ್ಕೆ ಜಿ.ವಿ. ಅವರ ಕೊಡುಗೆ ಅಪಾರವಾದದ್ದು. ನಮ್ಮ ನಾಡಿಗೆ ಇದು ತುಂಬಲಾರದ ನಷ್ಟ ಎಂದು ಮಾಜಿ ಪ್ರಧಾನ ಮಂತ್ರಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಭಗವಂತ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಹಿರಿಯ ವಿದ್ವಾಂಸರು, ನಿಘಂಟು ತಜ್ಞ, ಶತಾಯುಷಿ, ನಾಡೋಜ, ಪದ್ಮಶ್ರೀ ಪ್ರೊ ಜಿ.ವೆಂಕಟಸುಬ್ಬಯ್ಯರವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಭಾಷಾ ತಜ್ಞರಾಗಿ, ಸಂಶೋಧಕರಾಗಿ, ಬರಹಗಾರರಾಗಿ, ಶಿಕ್ಷಕರಾಗಿ ಕನ್ನಡಕ್ಕೆ ಅಪಾರ ಸೇವೆ ಸಲ್ಲಿಸಿರುವ ಆ ಅಕ್ಷರ ತಪಸ್ವಿಗಳ ನಿಧನದಿಂದ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿ ಅವರ ಅಪೂರ್ವ ಸಾಧನೆಗಳು ಕನ್ನಡಿಗರ ಪಾಲಿಗೆ ಚಿರಸ್ಥಾಯಿಯಾಗಿದೆ. ಪ್ರೊ ವೆಂಕಟಸುಬ್ಬಯ್ಯನವರ ಪಾದಗಳಿಗೆ ಅಂತಿಮ ನಮನಗಳನ್ನು ಸಲ್ಲಿಸುತ್ತಾ, ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಭಾಷಾ ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನ ಕನ್ನಡ ಸಾರಸ್ವರ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ‌ಕೋರುವೆ. ವೆಂಕಟುಸುಬ್ಬಯ್ಯ ಅವರ ಕುಟುಂಬ ಮತ್ತು‌‌ ಸಮಸ್ತ‌ ಕನ್ನಡಿಗರ ಶೋಕದಲ್ಲಿ‌ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಾಡಿನ ಖ್ಯಾತ ಸಂಶೋಧಕ, ನಿಘಂಟು ತಜ್ಞ ಫ್ರೊ. ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಂಬನಿಮಿಡಿದಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದು. ನಾಡು-ನುಡಿಗೆ ಸಲ್ಲಿಸಿದ ಸೇವೆ ಅನನ್ಯವಾದದ್ದು.

ನಾಡು-ನುಡಿಯ ಶ್ರೇಷ್ಠ ವಿದ್ವಾಂಸಕನನ್ನು ರಾಜ್ಯ ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...