NEWSನಮ್ಮಜಿಲ್ಲೆನಮ್ಮರಾಜ್ಯ

ವೇತನ ತಾರತಮ್ಯತೆ ನಿವಾರಿಸಿ ಎಂದು ಮನವಿ ಮಾಡಿದ್ದಕ್ಕೆ ಕೆಲಸದಿಂದಲೇ ವಜಾ!

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಪೆರಂಬಾಡಿ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮನ್ನು ವೇತನದಲ್ಲಿ ವ್ಯತ್ಯಾಸವಾಗಿರುವ ಬಗ್ಗೆ ದೂರು ಸಲ್ಲಿಸಿದ ಕಾರಣಕ್ಕಾಗಿ ವಿರಾಜಪೇಟೆ ಪಟ್ಟಣ ಪಂಚಾಯಿತಿ ಕೆಲಸದಿಂದ ವಜಾಗೊಳಿಸಿದೆ ಎಂದು ಕಾವಲುಗಾರರಾದ ಎಚ್.ಸಿ.ಗಣೇಶ್ ಹಾಗೂ ಎಚ್.ಟಿ.ಜಾನ್ ಆರೋಪಿಸಿದ್ದಾರೆ.

ಬಡವರಾಗಿರುವ ನಮ್ಮನ್ನು ದಿಢೀರ್ ಆಗಿ ಕೆಲಸದಿಂದ ವಜಾಗೊಳಿಸಿರುವುದರಿಂದ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ಮತ್ತೆ ನಮಗೆ ನೌಕರಿ ನೀಡಬೇಕು, ವೇತನ ಹೆಚ್ಚಳ ಮಾಡಬೇಕು ಮತ್ತು ಪಿ.ಎಫ್ ಸೇರಿದಂತೆ ನಿಯಮಾನುಸಾರ ಸಿಗಬೇಕಾದ ಸೌಲಭ್ಯಗಳನ್ನು ನೀಡಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ವಿರಾಜಪೇಟೆ ಪಟ್ಟಣ ಪಂಚಾಯಿತಿಯ ಪೆರಂಬಾಡಿಯ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿರುವ ನಮಗೆ ನೇಮಕವಾದ ದಿನದಿಂದ ಮಾಸಿಕ ತಲಾ 14,900 ರೂ. ಗಳಂತೆ ವೇತನ ನೀಡಲಾಗುತ್ತಿತ್ತು.

ಆದರೆ ಕಳೆದ 1 ವರ್ಷ 9 ತಿಂಗಳಿನಿಂದ ಇಬ್ಬರಿಗಾಗಿ ರೂ.14 ಸಾವಿರವನ್ನು ಮಾತ್ರ ನೀಡಲಾಗುತ್ತಿದ್ದು, ಎಚ್.ಟಿ.ಜಾನ್ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಈ ಹಣವನ್ನು ಇಬ್ಬರು ತಲಾ ಸಾವಿರ ರೂ.ಗಳಂತೆ ತೆಗೆದುಕೊಳ್ಳುತ್ತಿದ್ದೇವೆ. ಕಾವಲುಗಾರರಿಗೆ ನೀಡಬೇಕಾದ ಪಿ.ಎಫ್, ಗಂಬೂಟ್, ಮಳೆಕೋಟು ಇತ್ಯಾದಿ ಸೌಲಭ್ಯಗಳು ದೊರೆಯುತ್ತಿಲ್ಲ.

ಕಡಿಮೆ ಸಂಬಳದಿಂದ ಜೀವನ ಸಾಗಿಸಲು ಕಷ್ಟಕರವಾಗಿದ್ದು, ಈ ಬಗ್ಗೆ ವಿರಾಜಪೇಟೆ ಪ.ಪಂ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಇದೇ ಸೆ.೧ ರಂದು ಪಂಚಾಯಿತಿ ಅಧಿಕಾರಿಗಳು ನಮ್ಮಿಬ್ಬರನ್ನು ಬಲವಂತವಾಗಿ ಕೋಣೆಯಲ್ಲಿರಿಸಿಕೊಂಡು ಕಂಪ್ಯೂಟರ್‌ನಲ್ಲಿ ಟೈಪ್ ಮಾಡಿ ಸಹಿ ಮಾಡುವಂತೆ ಬೆದರಿಸಿದ್ದಾರೆ.

ನಮಗೆ ಬರಲು ಬಾಕಿ ಇದ್ದ ನಾಲ್ಕು ತಿಂಗಳ ವೇತನ ಒಟ್ಟು ರೂ. 65 ಸಾವಿರಗಳನ್ನು ಖಾತೆಗೆ ಹಾಕಲಾಗಿತ್ತು. ಸಹಿ ಹಾಕದಿದ್ದರೆ ಈ ಹಣವನ್ನು ವಾಪಸ್‌ ಪಡೆಯುವುದಾಗಿ ಹೇಳಿ ಸಹಿ ಮಾಡಿಸಿಕೊಂಡಿದ್ದಾರೆ.

ವೇತನ ಪಡೆದಿರುವುದಾಗಿ ತಿಳಿಸಿರುವ ಪತ್ರ ಇದಾಗಿದೆ, ಆದರೆ ಪಿ.ಎಫ್ ಅನ್ನು ನೀಡದೆ ವಂಚಿಸಲಾಗಿದೆ. ಅಲ್ಲದೆ ಇನ್ನು ಮುಂದೆ ನಿಮಗೆ ಕೆಲಸವಿಲ್ಲವೆಂದು ಹೇಳಿ ಮನೆಗೆ ಕಳುಹಿಸಿದ್ದಾರೆ ಎಂದು ಎಚ್.ಸಿ.ಗಣೇಶ್ ಹಾಗೂ ಎಚ್.ಟಿ.ಜಾನ್ ಆರೋಪಿಸಿದ್ದಾರೆ.

ಅಧಿಕಾರಿಗಳ ಈ ದಿಢೀರ್ ನಿರ್ಧಾರದಿಂದ ನಾವು ಅತಂತ್ರರಾಗಿದ್ದು, ಜೀವನ ನಡೆಸುವುದೇ ಕಷ್ಟವಾಗಿದೆ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನಮಗೆ ಮತ್ತೆ ನೌಕರಿ ನೀಡುವ ಮೂಲಕ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ