NEWSನಮ್ಮಜಿಲ್ಲೆಸಂಸ್ಕೃತಿ

ಶಾಂತಿಯುತ ಗಣೇಶೋತ್ಸವಕ್ಕೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮನವಿ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಶಾಂತಿಯುತವಾಗಿ ಗಣೇಶೋತ್ಸವ ಆಚರಿಸಲು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ನೇತೃತ್ವದಲ್ಲಿ ಜರುಗಿದ ಶಾಂತಿ ಸಭೆಯಲ್ಲಿ ನಿರ್ಧರಿಸಲಾಯಿತು.

ನಗರದ ಖಾಸಗಿ ಹೋಟೆಲವೊಂದರಲ್ಲಿ ಬುಧವಾರ ಪೊಲೀಸ್‌ ಇಲಾಖೆ ಆಯೋಜಿಸಿದ ಗಣೇಶ ಹಬ್ಬದ ಶಾಂತಿ ಸಭೆಯಲ್ಲಿ ಜಿಲ್ಲೆಯ ವಿವಿಧ ಸಮುದಾಯ, ಧರ್ಮಗಳ ಮುಖಂಡರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಸಾಮರಸ್ಯದಿಂದ ಆಚರಿಸಬೇಕು. ಮನುಷ್ಯನ ಆರೋಗ್ಯ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಪಿಒಪಿ ಮೂರ್ತಿಗಳು ಬಳಸಬಾರದು. ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಮಾತ್ರ ಪ್ರತಿಷ್ಠಾಪನೆ ಮಾಡಬೇಕು. ಪಿಒಪಿ ಮೂರ್ತಿಗಳ ಮಾರಾಟ ಕಂಡುಬಂದಲ್ಲಿ ಸೀಜ್ ಮಾಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯಲು ಅನುಕೂಲವಾಗುವಂತೆ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗುವುದು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಒಂದೆಡೆ ಅನುಮತಿಯನ್ನು ನೀಡುವರು.

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸುವ ಸಂಘ-ಸಂಸ್ಥೆಗಳು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಸರ್ಕಾರದ ನಿಯಮದಂತೆ ಐದು ದಿನಗಳ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶವಿದೆ ಎಂದು ತಿಳಿಸಿದರು.

ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಬಳಸಲು ಅವಕಾಶ ಇರುವುದಿಲ್ಲ. ಗಣೇಶೋತ್ಸವದಲ್ಲಿ ನೃತ್ಯ, ಸಂಗೀತ ಸೇರಿದಂತೆ ಸಾಂಸ್ಕøತಿಕ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ ಮಾಡುವಂತಿಲ್ಲ. ಈಗಾಗಲೇ ಸರ್ಕಾರದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸುವಂತೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರು ಮಾತನಾಡಿ, ದೇವಸ್ಥಾನ ಹಾಗೂ ತಮ್ಮ ತಮ್ಮ ಮನೆಗಳಲ್ಲಿ, ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಗಣೇಶ ಹಬ್ಬ ಆಚರಿಸಬೇಕು. ಗುಂಪುಗೂಡಲು ಅವಕಾಶವಿರುವುದಿಲ್ಲ. ನಿಯಮದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಅಡಿ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಸಂಜೀವ ಕುಮಾರ ನೀರಲಗಿ ಮಾತನಾಡಿ, ಕರೋನಾ ಎರಡನೇ ಅಲೆಯಲ್ಲಿ ಸಂಬಂಧಿಕರು ಹಾಗೂ ಸ್ನೇಹಿತರನ್ನು ಕಳೆದುಕೊಂಡಿದ್ದೇವೆ. ಅಲ್ಲದೆ ಮೂರನೇ ಅಲೆಯ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಗಣೇಶೊತ್ಸವ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಬೇಕು ಎಂದು ಮನವಿ ಮಾಡಿಕೊಂಡು.

ನಗರಸಭೆ ವತಿಯಿಂದ ಅಕ್ಕಮಹಾದೇವಿ ಹೊಂಡದಲ್ಲಿ ಸಾರ್ವಜನಿಕ ಗಣೇಶ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದೆ. ನಾಗೇಂದ್ರಮಟ್ಟಿಯಲ್ಲಿ ಹಾಗೂ ಹೊಸದಾಗಿ ಬಸವೇಶ್ವರ ನಗರ ಮತ್ತು ಅಶ್ವಿನಿ ನಗರಗಳಲ್ಲಿ ಕಿರುಹೊಂಡ ನಿರ್ಮಿಸಿ ಸಾರ್ವಜನಿಕ ಗಣೇಶ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರ ಬೇಡಿಕೆ ಅನುಸಾರ ಹೆಚ್ಚುವರಿ ಕಿರುಹೊಂಡ ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು.

ರಾಣೇಬೆನ್ನೂರು ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಚಿಕ್ಕಬಿದರಿ ಮಾತನಾಡಿ, ರಾಣೇಬೆನ್ನೂರು ನಗರದ ಏಳು ಕಡೆ ಸಾರ್ವಜನಿಕ ಗಣೇಶ ವಿಸರ್ಜನೆಗೆ ತೊಟ್ಟಿ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಮಹಮ್ಮದ್ ರೋಷನ್, ಡಿವೈಎಸ್‍ಪಿ ಶಂಕರ ಮಾರಿಹಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರು, ಶಿಗ್ಗಾಂವ ಪುರಸಭೆ ಅಧ್ಯಕ್ಷ ಶ್ರೀಕಾಂತ, ಪೊಲೀಸ್ ಅಧಿಕಾರಿಗಳು, ಗಣೇಶ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...