NEWSನಮ್ಮಜಿಲ್ಲೆನಮ್ಮರಾಜ್ಯ

ನವೆಂಬರ್ 1ರಿಂದ ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೇ ಪಡಿತರ ವಿತರಣೆ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನವೆಂಬರ್ 1ರಂದು ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಪಡಿತರ ತಲುಪಿಸುವ ಯೋಜನೆಗೆ ಪ್ರಾಯೋಗಿಕವಾಗಿ ಚಾಲನೆ ನೀಡುವ ಸಾಧ್ಯತೆ ಇದೆ.

ಹೌದು! ಆಂಧ್ರ ಪ್ರದೇಶದ ಮಾದರಿಯಲ್ಲಿ ಪಡಿತರ ಚೀಟಿದಾರರಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸುವ ಯೋಜನೆಯನ್ನು ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮುಂದಾಗಿದೆ.

ಈ ಕುರಿತು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿದ್ದು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಹೆಚ್ಚುವರಿಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಇದ್ದ ಸಭೆಯಲ್ಲಿ ಆಹಾರ ಸಚಿವ ಉಮೇಶ ಕತ್ತಿ , ‘ಮನೆ ಬಾಗಿಲಿಗೆ ಪಡಿತರ’ ಯೋಜನೆಯ ಪ್ರಾಯೋಗಿಕ ಅನುಷ್ಠಾನಕ್ಕೆ ಸಿದ್ಧತೆ ಆರಂಭಿಸುವಂತೆ ನಿರ್ದೇಶನ ನೀಡಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಮನೆ ಬಾಗಿಲಿಗೆ ಪಡಿತರ ವಿತರಿಸಲು ಆರಂಭಿಸಿರುವ ಯೋಜನೆಯ ವಿವರ, ರಾಜ್ಯದಲ್ಲಿ ಈಯೋಜನೆ ಜಾರಿಗೆ ಬೇಕಿರುವ ಸೌಲಭ್ಯಗಳು, ವೆಚ್ಚ ಮತ್ತಿತರ ವೆಚ್ಚದ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ವಿವರ ನೀಡಿದ್ದಾರೆ.

‘ಟಾಟಾ ಮತ್ತು ಮಾರುತಿ ಸುಜುಕಿ ಕಂಪನಿ ಅಧಿಕಾರಿಗಳು ತಾವು ಉತ್ಪಾದಿಸುವ ಸಣ್ಣ ಗಾತ್ರದ ಸರಕು ಸಾಗಣೆ ವಾಹನಗಳ ದರ, ಸಾಮರ್ಥ್ಯ, ಪ್ರತಿ ಕಿಲೋಮೀಟರ್ ಸಂಚಾರಕ್ಕೆ ತಗಲಬಹುದಾದ ವೆಚ್ಚ ಮತ್ತಿತರ ಮಾಹಿತಿಗಳನ್ನು ಒಳಗೊಂಡ ವರದಿಯನ್ನು ಸಭೆಯಲ್ಲಿ ಮಂಡಿಸಿದ್ದಾರೆ.

ಸಂಪೂರ್ಣಮಾಹಿತಿ ಪಡೆದುಕೊಂಡ ಸಚಿವರು, ನ.1ರಿಂದ ಪ್ರಾಯೋಗಿಕ ಅನುಷ್ಠಾನ ಆರಂಭಿಸುವ ಸಾಧ್ಯತೆ ಕುರಿತೂ ಸಭೆಯಲ್ಲಿ ಚರ್ಚೆ ನಡೆಸಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

700 ವಾಹನ: ಈಗ ಇರುವ ಪ್ರಸ್ತಾವದ ಪ್ರಕಾರ, ಮನೆ ಬಾಗಿಲಿಗೆ ಪಡಿತರ ಸಾಗಿಸುವುದಕ್ಕೆ ಪ್ರತಿ ನ್ಯಾಯಬೆಲೆ ಅಂಗಡಿಗೆ ಒಬ್ಬ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು. ಅವರು ಖರೀದಿಸುವ ವಾಹನಕ್ಕೆ ಸರಕು ಮತ್ತು ಸೇವಾ ತೆರಿಗೆ, ಸಹಾಯಧನ ಸೇರಿದಂತೆ ಶೇ.30ರಷ್ಟು ನೆರವನ್ನು ಇಲಾಖೆಯಿಂದ ನೀಡಲಾಗುವುದು.

ಶೇ.4ರ ಬಡ್ಡಿ ದರದಲ್ಲಿ ಆರು ವರ್ಷಗಳ ಅವಧಿಗೆ ಸಾಲವನ್ನೂ ಕೊಡಿಸುವ ವ್ಯವಸ್ಥೆ ಮಾಡಲಾಗುವುದು. ಈ ಮೂಲಕ ಆಂಧ್ರ ಪ್ರದೇಶದಲ್ಲಿ ಪಡಿತರ ಸಾಗಿಸುವ ವಾಹನದ ಮಾಲೀಕರಿಗೆ ಪ್ರತಿ ಕೆ.ಜಿ.ಗೆ 1 ರೂ.ನಷ್ಟು ಸಾಗಣೆ ವೆಚ್ಚ ನೀಡಲಾಗುತ್ತದೆ. ಅದೇ ದರವನ್ನು ರಾಜ್ಯದಲ್ಲೂ ನಿಗದಿಪಡಿಸುವ ಪ್ರಸ್ತಾವವಿದೆ ಎಂದು ತಿಳಿದು ಬಂದಿದೆ.

ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿರುವ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಪ್ರತಿ ನ್ಯಾಯಬೆಲೆ ಅಂಗಡಿ ಜತೆಗೆ ಒಂದು ವಾಹನವನ್ನು ಜೋಡಣೆಮಾಡುವ ಪ್ರಸ್ತಾವವಿದೆ. ಇದಕ್ಕಾಗಿ 700 ವಾಹನಗಳ ಅಗತ್ಯವಿದೆ ಎಂದು ಅಂದಾಜಿಸಲಾಗಿದ್ದು ಅದರಂತೆ ವಾಹನಗಳನ್ನು ಬಿಡುವ ಬಗ್ಗೆ ಚರ್ಚೆ ಸಹ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ