NEWSನಮ್ಮಜಿಲ್ಲೆ

ಪ್ರತಿ ಮನೆ-ಮನೆಗೆ ಕೋವಿಡ್ “ಲಸಿಕೆ ವಾಹನ”ಗಳಿಗೆ ಚಾಲನೆ: ಮುಖ್ಯ ಆಯುಕ್ತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೇರ್ ಇಂಡಿಯಾ ಸಹಯೋಗದಲ್ಲಿ 80 ಲಸಿಕಾ ದ್ವಿಚಕ್ರ ವಾಹನ ಹಾಗೂ 16 ಮೊಬೈಲ್ (ನಾಲ್ಕು ಚಕ್ರ ವಾಹನ) “ಲಸಿಕೆ ವಾಹನ”ಗಳಿಗೆ ಬುಧವಾರ ಮುಖ್ಯ ಆಯುಕ್ತ ಗೌರವ್ ಗುಪ್ತ ಚಾಲನೆ ನೀಡಿದರು.

ಪ್ರತಿ ವಲಯಕ್ಕೆ 8 ದ್ವಿಚಕ್ರ ವಾಹನಗಳು ಹಾಗೂ 2 ಮೊಬೈಲ್ (ನಾಲ್ಕು ಚಕ್ರ ವಾಹನ) ಸೇರಿದಂತೆ ಒಟ್ಟು 80 ದ್ವಿಚಕ್ರ ವಾಹನ ಹಾಗೂ 16 ಮೊಬೈಲ್ (ನಾಲ್ಕು ಚಕ್ರ ವಾಹನ) ವಾಹನಗಳು ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಲಸಿಕೆ ನೀಡಲು ಹೋಗುವ ಆರೋಗ್ಯ ಸಿಬ್ಬಂದಿಯ ಜೊತೆ ಕಾರ್ಯನಿರ್ವಹಿಸಲಿದ್ದಾರೆ.

ನಗರದಲ್ಲಿ ಇದುವರೆಗೆ ಒಟ್ಟು 1,36,99,018 ಡೋಸ್ ಲಸಿಕೆ ನೀಡಲಾಗಿದ್ದು, 80,57,563 ಮೊದಲ ಡೋಸ್ (ಶೇ. 88 ರಷ್ಟು), 56,41,455 ಎರಡನೇ ಡೋಸ್ (ಶೇ. 62 ರಷ್ಟು) ಲಸಿಕೆಯನ್ನು ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ.

ಯಲಹಂಕದ ಡಾ. ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಮಲ್ಲೇಶ್ವರದ ಯಂಗ್‌ಸ್ಟರ್ಸ್ ಕಬ್ಬಡಿ ಆಟದ ಮೈದಾನದಲ್ಲಿ ಸ್ಥಾಪಿಸಿರುವ ಬೃಹತ್ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು, ವಾಕ್ ಇನ್ ಹಾಗೂ ಡ್ರೈವ್ ಇನ್ ಮೂಲಕ ವಾಹನಗಳಲ್ಲೇ ಲಸಿಕೆ ಪಡೆಯುವ ವ್ಯವಸ್ಥೆ ಮಾಡಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಲಸಿಕಾಕರಣ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತಿದೆ. ನಗರದಲ್ಲಿ ಮೊದಲನೇ ಡೋಸ್ ಲಸಿಕೆ ಪಡೆದು ಎರಡನೇ ಡೋಸ್ ಲಸಿಕೆ ಪಡೆಯದಿರುವವರ ಪಟ್ಟಿಯನ್ನು ಕೋವಿನ್ ಪೋರ್ಟಲ್ ನಿಂದ ಪಡೆದುಕೊಂಡಿದ್ದು, ಎರಡನೇ ಡೋಸ್ ಲಸಿಕೆ ಪಡೆಯದವರಿಗೆ ದೂರವಾಣಿ ಮೂಲಕ ಕರೆ ಮಾಡಿ ಎರಡನೇ ಡೋಸ್ ಲಸಿಕೆ ಪಡೆಯಲು ತಿಳಿಸಲಾಗುತ್ತಿದೆ.

ವಾರ್ಡ್ ವಾರು ಆರೋಗ್ಯ ತಂಡದಿಂದ ಲಸಿಕಾಕರಣ ಕಾರ್ಯ: ಲಸಿಕಾಕರಣ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕಳೆದ 10 ದಿನಗಳಿಂದ ಪಾಲಿಕೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ, ಆಯಾ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಯು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಒಂದು ವಾರ್ಡ್ ನಲ್ಲಿ ಬರುವ ಮನೆ-ಮನೆಗೆ ಭೇಟಿ ನೀಡಿ ಲಸಿಕೆ ಪಡೆದಿರುವ ಬಗ್ಗೆ ಖಾತರಿಪಡಿಸಿಕೊಂಡು ಲಸಿಕೆ ಪಡೆಯದವರಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ.

ಅದರಂತೆ ಇದುವರೆಗೆ ಸುಮಾರು 70 ವಾರ್ಡ್ ಗಳಲ್ಲಿ ಆರೋಗ್ಯ ತಂಡವು ಭೇಟಿ ನೀಡಿದ್ದು, ಮೊದಲ ಮತ್ತು ಎರಡನೇ ಡೋಸ್ ಸೇರಿ ಸುಮಾರು 35,000 ಮಂದಿಗೆ ಲಸಿಕೆ ನೀಡಲಾಗಿರುತ್ತದೆ. ಇದೇ ವೇಳೆ ಮತದಾರರ ಪಟ್ಟಿ ಅನುಸಾರ ಮನೆಯಲ್ಲಿ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆದಿದ್ದಾರೆಯೇ ಎಂಬುದನ್ನು ಖಾತರಿಪಡಿಸಿಕೊಂಡು ಲಸಿಕೆ ಪಡೆಯದವರಿಗೆ ಲಸಿಕೆ ನೀಡುವ ಕೆಲಸ ಮಾಡಲಾಗುತ್ತಿದೆ.

ಈ ವೇಳೆ ವಿಶೇಷ ಆಯುಕ್ತ (ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!? ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ