CrimeNEWSನಮ್ಮಜಿಲ್ಲೆ

ಚಾಮರಾಜನಗರ: ಕುಡಿದ ಮತ್ತಿನಲ್ಲಿ ಕಿತಾಪತಿ – ಮಹಿಳೆಯರ ಮುಂದೆ ಬೆತ್ತಲೆ ಪ್ರದರ್ಶನ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಪಾನಮತ್ತ ವ್ಯಕ್ತಿ ಬೆತ್ತಲಾಗಿ ಓಡಾಡುವುದಲ್ಲದೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿರುವ ವಿಡಿಯೊ ವೈರಲ್‌ ಆಗಿದೆ.

ತಾತಾಲೂಕಿನ ಪುಣಜನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನರೇಗಾ ಕಾಮಗಾರಿಯಲ್ಲಿ ನಿರತರಾಗಿದ್ದ ಮಹಿಳೆಯರ ಮುಂದೆ ಅಶ್ಲೀಲ ವರ್ತಿಸಿದ್ದಾನೆ. ಆ ವ್ಯಕ್ತಿಯನ್ನು ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂದು ಗುರುತಿಸಲಾಗಿದೆ.

ತಾಂಡವಮೂರ್ತಿ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ತಗಾದೆ ತೆಗೆದು ಜಗಳವಾಡಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಆತ ಜಗಳವಾಡಿ ಬಳಿಕ ಬೆತ್ತಲೆಯಾಗಿ ಮಹಿಳೆಯರಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದಾನೆ.

ತಾಂಡವಮೂರ್ತಿ ಬೆತ್ತಲೆಯಾಗಿ ಓಡಾಡುತ್ತಿದ್ದನ್ನು ನೋಡಿದ ಸ್ಥಳೀಯರು ವಿಡಿಯೋ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದ ಕುಪಿತಗೊಂಡ ತಾಂಡವಮೂರ್ತಿಯ ಮಕ್ಕಳಾದ ಮಹೇಂದ್ರ ಮತ್ತು ಸಂತೋಷ್ ಪೊಲೀಸರಿಗೆ ಒಪ್ಪಿಸಿದ ಗ್ರಾಮದ ಮೂವರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ.

ಬಳಿಕ ಗ್ರಾಮಸ್ಥರು ಹಲ್ಲೆಗೊಳದ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಶ್ಲೀಲವಾಗಿ ವರ್ತಿಸಿದ ತಾಂಡವಮೂರ್ತಿ ಮತ್ತು ಆತನ ಮಕ್ಕಳಾದ ಮಹೇಂದ್ರ, ಸಂತೋಷ್‍ನ್ನು ಪೊಲೀಸರು ಬಂಧಿಸಿದ್ದು, ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?