Vijayapatha – ವಿಜಯಪಥ
Saturday, November 2, 2024
NEWSನಮ್ಮಜಿಲ್ಲೆ

ಆಧುನಿಕ ಅನುಭವ ಮಂಟಪಕ್ಕೆ ಮಾರುಕಟ್ಟೆ ದರ ನೀಡಿ ಭೂ ಸ್ವಾಧೀನಕ್ಕೆ ಈಶ್ವರ ಖಂಡ್ರೆ ಸಲಹೆ

ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಸವಕಲ್ಯಾಣದ ನೂತನ ಆಧುನಿಕ ಅನುಭವ ಮಂಟಪ ತ್ವರಿತವಾಗಿ ಸಾಕಾರವಾಗಬೇಕಾದರೆ ಅದಕ್ಕೆ ಅಗತ್ಯವಾದ 69 ಎಕರೆ ಭೂಮಿಯನ್ನು ಮಾರುಕಟ್ಟೆ ದರ ನೀಡಿ ಖರೀದಿಸಬೇಕು ಎಂದು ಬಾಲ್ಕಿ ಶಾಸಕ ಈಶ್ವರ ಖಂಡ್ರೆ ಸಲಹೆ ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಹಲವು ವರ್ಷಗಳ ಬಳಿಕ ನಡೆದ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ಭಾಗಿಯಾದ ಅವರು, ಪ್ರಸ್ತುತ ಸರ್ಕಾರದ ಬಳಿ 20 ಎಕರೆ ಮತ್ತು ದಾನವಾಗಿ ಬಂದಿರುವ 11 ಎಕರೆ ಸೇರಿ 31 ಎಕರೆ ಭೂಮಿ ಮಾತ್ರ ಇದ್ದು, ಉಳಿದ 69 ಎಕರೆ ಭೂ ಸ್ವಾಧೀನ ತುರ್ತಾಗಿ ಆಗಬೇಕಾಗಿದೆ.

ಪ್ರಸಕ್ತ ನಿಯಮಾವಳಿ ರೀತ್ಯ ಭೂಸ್ವಾಧೀನ ಪ್ರಕ್ರಿಯೆ ನಡೆದರೆ, ಅದು ಮುಗಿಯಲು ಕನಿಷ್ಠ 8-10 ತಿಂಗಳಾದರೂ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮತ್ತು ಸರ್ಕಾರದ ನೂತನ ಕಾಯಿದೆಯ ರೀತ್ಯ “ಕನ್ಸೆಂಟ್ ಅವಾರ್ಡ್’ನಂತೆ ಭೂಮಿ ಪಡೆಯಬೇಕಾಗುತ್ತದೆ. ಹೀಗಾಗಿ ಭೂ ಮಾಲೀಕರ ಮನವೊಲಿಸಿ ಮಾರುಕಟ್ಟೆ ದರ ನೀಡಿ ಖರೀದಿಸುವುದು ಸೂಕ್ತ ಎಂದು ಸಲಹೆ ಮಾಡಿದರು.

ಆಧುನಿಕ ಅನುಭವ ಮಂಟಪ ಕಟ್ಟಡ ನಿರ್ಮಾಣ ಸಂಬಂಧ ಈಗಾಗಲೇ ಟೆಂಡರ್ ಕರೆದಿರುವ ಕುರಿತಂತೆ ಮಾತನಾಡಿದ ಅವರು, ಭೂಸ್ವಾಧೀನ ಆಗದೆ ವಿಸ್ತೃತ ಯೋಜನಾ ವರದಿ-ಡಿಪಿಆರ್ ಅನುಮೋದನೆ ಅಪೂರ್ಣವಾಗುತ್ತದೆ. ಹೀಗಾಗಿ ಯಾವುದೇ ಅಡೆತಡೆ, ವಿಳಂಬ ಇಲ್ಲದೆ ಆಧುನಿಕ ಅನುಭವ ಮಂಟಪ ಸಾಕಾರವಾಗಲು ತಕ್ಷಣವೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ತಕ್ಷಣವೇ ಡಿಪಿಆರ್ ಅನುಮೋದನೆಗೆ ತಜ್ಞರ/ಪರಿಣತರ ಸಮಿತಿಯನ್ನು ರಚಿಸಬೇಕು ಎಂದರು.

ಬಸವಕಲ್ಯಾಣವಷ್ಟೇ ಅಲ್ಲದೆ ಬೀದರ್ ಜಿಲ್ಲೆಯ ಅನೇಕ ಕಡೆಗಳಲ್ಲಿ ಅಣ್ಣ ಬಸವಣ್ಣನರು ಮತ್ತು ಹಲವು ಶಿವಶರಣರ ಪವಿತ್ರ ತಾಣಗಳಿದ್ದು, ಇವುಗಳ ಅಭಿವೃದ್ಧಿಯೂ ಆಗಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಸಕರನ್ನೂ ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯ ಸದಸ್ಯರನ್ನಾಗಿ ನಾಮಾಂಕನ ಮಾಡಿ ಎಲ್ಲ ಸಭೆಗೂ ಆಹ್ವಾನಿಸುವಂತೆ ಒತ್ತಾಯಿಸಿದರು.

ಬಸವಕಲ್ಯಾಣ ಜಗತ್ತಿಗೇ ಸಂಸತ್ತಿನ ಪರಿಕಲ್ಪನೆ ಕಟ್ಟಿಕೊಟ್ಟ ಪವಿತ್ರ ತಾಣವಾಗಿದ್ದು, ಬಸವಕಲ್ಯಾಣವನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಧಾರ್ಮಿಕ, ಆಧ್ಯಾತ್ಮಿಕ ಮತ್ತು ಪ್ರವಾಸಿತಾಣದಂತೆ ಅಭಿವೃದ್ಧಿಪಡಿಸುವ ಅಗತ್ಯವನ್ನೂ ಪ್ರತಿಪಾದಿಸಿ, ಜಿಲ್ಲೆಯ ಪವಿತ್ರ ಶರಣ ತಾಣಗಳ ಅಭಿವೃದ್ಧಿಗೂ ಸಲಹೆ ಮಾಡಿದರು.

ಇದರ ಜತೆಗೆ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶರಣ ಹಿರೇಮಠ್ ಮತ್ತು ಶಿವಕುಮಾರ್ ಇವರಿಬ್ಬರೂ ಕೋವಿಡ್ ನಿಂದ ಮೃತಪಟ್ಟಿದ್ದು, ಇವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ನಾನು ಮನವಿ ಮಾಡಲಾಗಿದೆ. ಮುಖ್ಯಮಂತ್ರಿಗಳು ತಮ್ಮ ಎಲ್ಲ ಸಲಹೆಗಳಿಗೂ ಸಕಾರಾತ್ಮಕವಾಗಿ ಸ್ಪಂದಿಸಿ, ಪರಿಹಾರ ನೀಡಲೂ ತಾತ್ವಿಕ ಸಮ್ಮತಿ ನೀಡಿದರು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ