NEWSನಮ್ಮಜಿಲ್ಲೆ

ಮಂಡ್ಯದಲ್ಲೂ ಆಕ್ಸಿಜನ್ ಸಿಗದೆ ನರಳಾಡಿ ಅಸುನೀಗಿದ ಸೋಂಕಿತ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಂಡ್ಯ: ಚಾಮರಾಜನಗರದಲ್ಲಿ ಭಾನುವಾರ ತಡರಾತ್ರಿಯಿಂದ ಸೋಮವಾರ ಮುಂಜಾನೆ ವರೆಗೆ ಆಕ್ಸಿಜನ್ ಸಿಗದೆ 24 ಮಂದಿ ಕೊರೊನಾ ಸೋಂಕಿತರು ಮೃತಪಟ್ಟ ಬೆನ್ನಲ್ಲೇ ಇದೀಗ ಮಂಡ್ಯದಲ್ಲೂ ವ್ಯಕ್ತಿಯೊಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ.

ಮಂಡ್ಯದ ಹಾಲಹಳ್ಳಿಯ ನಿವಾಸಿ ಧನಂಜಯ್(45) ಮೃತರು. ಜಿಲ್ಲೆ ನಾಗಮಂಗಲ ತಾಲೂಕು ಆಸ್ಪತ್ರೆಯಲ್ಲಿ ಇವರು ಮೃತಪಟ್ಟಿದ್ದಾರೆ. ಧನಂಜಯ್ ಅವರಿಗೆ ಇತ್ತೀಚೆಗಷ್ಟೇ ಕೋವಿಡ್ 19 ದೃಢಪಟ್ಟಿತ್ತು. ಹೀಗಾಗಿ ವೈದ್ಯರ ಸೂಚನೆಯಂತೆ ಹೋಮ್ ಕ್ವಾರಂಟೈನ್‍ನಲ್ಲಿದ್ದರು. ಕಳೆದ ರಾತ್ರಿ ಉಸಿರಾಟದ ಸಮಸ್ಯೆ ಉಲ್ಬಣಗೊಂಡಿತು.

ಮಿಮ್ಸ್‌ ನಲ್ಲಿ ಬೆಡ್ ಸಿಗದ ಕಾರಣ ಧನಂಜಯ್ ಅವರನ್ನು ಕೀಲಾರ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಮತ್ತು ಚಿಕಿತ್ಸೆ ಸಿಗದಿದ್ದರಿಂದ ಮತ್ತೆ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ನಾಗಮಂಗಲ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅಲ್ಲಿಯೂ ಸಮಯಕ್ಕೆ ಆಕ್ಸಿಜನ್ ಹಾಗೂ ಬೆಡ್ ಸಿಗದಿದ್ದರಿಂದ ನರಳಿ ನರಳಿ ಮೃತಪಟ್ಟಿದ್ದಾರೆ.

ಧನಂಜಯ್ ಮೃತಪಟ್ಟಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ ಆತನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟುವಂತಿತ್ತು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ