CrimeNEWSನಮ್ಮಜಿಲ್ಲೆ

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಯ ಒಳಗಿದ್ದ ಎರಡು ಕಾರುಗಳಿಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕಳೆದ ಎರಡು ದಿನಗಳಿಂದ ಐದು ತಂಡಳಾಗಿ ತೀವ್ರ ಹುಡುಕಾಟ ನಡೆದಿದ್ದ ಪೊಲೀಸರು ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ನೇಪಾಳ ಮೂಲದ ಸಾಗರ್ ಮತ್ತು ಸ್ಥಳೀಯರಾದ ಶ್ರೀಧರ್ ಗೌಡ ಮತ್ತು ನವೀನ್‍ನನ್ನು ಪೊಲೀಸರು ಬಂಧಿಸಿದ್ದಾರೆ.

ಬಳಿಕ ವಿಚಾರಣೆ ನಡೆಸಿದ ವೇಳೆ ಲಾಕ್ ಡೌನ್ ನಂತರ ಈ ಮೂವರು ಕೆಲಸವಿಲ್ಲದೇ ತೀವ್ರ ಪರದಾಡಿದ್ದರು. ಆದರೆ ಎಲ್ಲೂ ಕೂಡ ಕೆಲಸ ಸಿಕ್ಕಿರಲಿಲ್ಲ. ಇದೇ ಕಾರಣಕ್ಕೆ ಶಾಸಕ ಸತೀಶ್ ರೆಡ್ಡಿ ಬಳಿ ಸಹಾಯ ಕೇಳೋಕೆ ಅಂತಾ ಬಂದಿದ್ರು. ಮೂರು ಬಾರಿ ಶಾಸಕರನ್ನು ಭೇಟಿ ಮಾಡೋಕೆ ಟ್ರೈ ಮಾಡಿದರು ಕೂಡ ಎಂಎಲ್‍ಎ ಮನೆ ಸೆಕ್ಯೂರಿಟಿ ಗಾರ್ಡ್ ಒಳಗೆ ಬಿಟ್ಟಿರಲಿಲ್ಲ.

ಇಡೀ ದಿನ ಕಾದರು ಕೂಡ ಒಮ್ಮೆ ಭೇಟಿಗೂ ಅವಕಾಶ ಕೊಟ್ಟಿರಲಿಲ್ವಂತೆ. ಹೊಟ್ಟೆಗೆ ಊಟವಿಲ್ಲದೇ ಇಡೀ ದಿನ ಕಾದರೂ ಒಮ್ಮೆಯೂ ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ. ಇದರಿಂದ ಬೇಸರಗೊಂಡ ಮೂವರು ಆರೋಪಿಗಳು, ಕಂಠಪೂರ್ತಿ ಕುಡಿದು ಶ್ರೀಮಂತರು ಶ್ರೀಮತಾಗೇ ಇರ್ತಾರೆ ನಮ್ಮಂಥ ಬಡವರು ಬಡರಾಗೇ ಸಾಯಬೇಕು ಅಂತಾ ಹತಾಶೆಗೊಂಡಿದ್ರು.

ಇದೇ ಮತ್ತಿನಲ್ಲಿ ಶಾಸಕರ ಮನೆ ಬಳಿ ಬಂದು ಬೈಕಿನಲ್ಲಿ ಪೆಟ್ರೋಲ್ ಕಳವು ಮಾಡಿ ಮನೆ ಬಳಿಯಿದ್ದ ಎರಡು ಕಾರುಗಳಿಗೆ ಬೆಂಕಿ ಹಾಕಿ ಎಸ್ಕೇಪ್ ಆಗಿದ್ದಾಗಿ ಪೊಲೀಸರ ಬಳಿ ಬಾಯ್ಬಿಟ್ಟಿದ್ದಾರೆ.

ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದು ಬೇರೆ ಏನಾದರೂ ಕಾರಣ ಇದೆಯಾ ಅನ್ನೋದನ್ನು ತನಿಖೆ ಮಾಡ್ತಿದ್ದಾರೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ