NEWSನಮ್ಮಜಿಲ್ಲೆಶಿಕ್ಷಣ-

ಬೆಂ.ಗ್ರಾಮಾಂತರ: ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾಮಾಂತರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ನೆಂವೆಂಬರ್‌ 30ರವರೆಗೆ ವಿಸ್ತರಣೆ ಮಾಡಲಾಗಿದೆ.

2021-22ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-l ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”.

“ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನವೆಂಬರ್‌30 ರವರೆಗೆ ಅವಕಾಧ ಕಲ್ಪಿಸಿಕೊಡಲಾಗಿದೆ.

ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‍ಸೈಟ್ www.bcwd.karnataka.gov.in ಅನ್ನು ಸಂಪರ್ಕಿಸಬಹುದು ಹಾಗೂ ವೆಬ್‍ಸೈಟ್ www.ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ನವೆಂಬರ್ 30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಇಲಾಖೆಯ ದೂರವಾಣಿ ಸಂಖ್ಯೆ.: 8050770005, 8050770004, ಇಮೇಲ್‌: [email protected]  ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ: 080-35254757, ಇಮೇಲ್: [email protected] ಹಾಗೂ ಸಹಾಯವಾಣಿ ಸಂಖ್ಯೆ: 080-29787440 ಅನ್ನು ಸಂಪರ್ಕಿಸಲು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ ತಿಳಿಸಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ