NEWSನಮ್ಮಜಿಲ್ಲೆನಮ್ಮರಾಜ್ಯ

ಬೆಂಗಳೂರು-ಮೈಸೂರು ಸೇರಿ ಆರು ಮಾರ್ಗಗಳಲ್ಲಿ ಶೀಘ್ರ ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಏರಿಕೆಯಾಗುತ್ತಿರುವ ಡೀಸೆಲ್ ದರಗಳಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಸಾರಿಗೆ ಸಂಸ್ಥೆ ಈ ಹೊತ್ತಿನಲ್ಲಿ ಮೈಸೂರು, ಮಡಿಕೇರಿ ಸೇರಿದಂತೆ ರಾಜ್ಯದ ಆರು ಪ್ರಮುಖ ನಗರಗಳ ನಡುವೆ ಶೀಘ್ರವೇ ಕೆಎಸ್‌ಆರ್‌ಟಿಸಿಯ 50 ಐಷಾರಾಮಿ ಎಲೆಕ್ಟ್ರಿಕ್ ಬಸ್‌ಗಳು (ಇ-ವಾಹನಗಳು) ಓಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರಿಂದ ಸಂಸ್ಥೆಗೆ ಕೊಂಚಮಟ್ಟಿಗೆ ಆರ್ಥಿಕ ಹೊರೆ ತಕ್ಕಲಿದೆ ಎಂದು ಭಾವಿಸಲಾಗುತ್ತಿದೆ.

ತಲಾ 43 ಆಸನಗಳಿರುವ 50 ಸಂಪೂರ್ಣ ಹವಾ ನಿಯಂತ್ರಿತ ಇ-ಬಸ್‌ಗಳು ರಸ್ತೆಗಿಳಿಯಲಿವೆ. ಆ ಬಸ್‌ಗಳು ಬೆಂಗಳೂರಿನಿಂದ ಮೈಸೂರು, ಮಡಿಕೇರಿ, ವಿರಾಜಪೇಟೆ, ಚಿಕ್ಕಮಗಳೂರು, ದಾವಣಗೆರೆ ಮತ್ತು ಶಿವಮೊಗ್ಗ ನಗರಗಳ ನಡುವೆ ಇಂಟರ್ ಸಿಟಿ ಮಾರ್ಗಗಳಲ್ಲಿ ಸಂಚರಿಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

ಹನ್ನೆರಡು ಮೀಟರ್ ಉದ್ದದ ಈ ಬಸ್‌ಗಳ ಎಲೆಕ್ಟ್ರಿಕ್ ಬ್ಯಾಟರಿಯನ್ನು ಒಮ್ಮೆ ಚಾರ್ಚ್ ಮಾಡಿದರೆ 250 ರಿಂದ 300 ಕಿ.ಮೀ.ವರೆಗೆ ಚಲಿಸುತ್ತವೆ. ಹೈದರಾಬಾದ್ ಮೂಲದ ಒಲೆಕ್ಟ್ರಾ ಗ್ರೀನ್‌ಟೆಕ್ ಲಿಮಿಟೆಡ್ (ಒಜಿಎಲ್) ಇದರ ನಿರ್ವಹಣೆಗಾಗಿ ಕೆಎಸ್‌ಆರ್‌ಟಿಸಿಯಿಂದ 12 ವರ್ಷಗಳ ಗುತ್ತಿಗೆ ಪಡೆದಿದೆ.

ರಾಜ್ಯ ಸಾರಿಗೆ ಸಂಸ್ಥೆಗೆ ಈಗ 88 ರೂ.ಗಳಿಗೆ ಡೀಸೆಲ್ ಲಭಿಸುತ್ತಿದೆ. ಹೈಟೆಕ್ ವೋಲ್ವೊ ಬಸ್‌ಗಳ ಕಾರ್ಯನಿರ್ವಹಣಾ ವೆಚ್ಚ ಪ್ರತಿ ಕಿ.ಮೀ.ಗೆ 52 ರೂ.ಗಳು. ಡಿಸೇಲ್ ದರ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೆಎಸ್‌ಆರ್‌ಟಿಸಿ ಸಂಕಷ್ಟಕ್ಕೆ ಸಿಲುಕಿದೆ.

ಹೀಗಾಗಿ ಪ್ರಸ್ತುತ ಸಂಸ್ಥೆಗೆ ವೆಚ್ಚ ಕಡಿವಾಣದ ತುರ್ತು ಅಗತ್ಯವಿದೆ. ಈ ಸಂದರ್ಭದಲ್ಲಿ ಎಲೆಕ್ಟ್ರಿಕ್ ಬಸ್‌ಗಳು ನೆರವಾಗುತ್ತವೆ. ದೀರ್ಘ ಅಂತರದ ಸಂಚಾರಕ್ಕೆ ವಿದ್ಯುತ್ ಬಸ್‌ಗಳನ್ನು ಓಡಿಸುವುದು ಲಾಭದಾಯಕ ಎಂದು ಸಂಸ್ಥೆಯ ಅಧಿಕಾರಿ ವಿವರಿಸಿದ್ದಾರೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ