CrimeNEWSನಮ್ಮಜಿಲ್ಲೆ

ಸಿಸಿಬಿ ಪೊಲೀಸರ ಬಲೆಗೆ ಬಿದ್ದ ವಿದೇಶಿ ನಕಲಿ ನೋಟ್ ದಂಧೆಕೋರರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿದೇಶಿ ನಕಲಿ ನೋಟ್ ದಂಧೆ ನಡೆಸುತ್ತಿದ್ದ ಗ್ಯಾಂಗ್ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದು, ಸಿಸಿಬಿ ಪೊಲೀಸರು ಗ್ಯಾಂಗ್‌ಅನ್ನು ಲಾಕ್ ಮಾಡಿದ್ದಾರೆ.

ವಿದೇಶಿ ಪ್ರಜೆಗಳಾದ ಕ್ಯಾಮರೂನ್‌ನ ಇಬ್ಬರನ್ನು ಬಂಧಿಸಿದ್ದಾರೆ. ಅರೆಸ್ಟ್ ಆದವರಲ್ಲಿ ಒಬ್ಬನ ಬಳಿ ಯಾವುದೇ ಪಾಸ್‌ಪೋರ್ಟ್ ಕೂಡ ಇಲ್ಲ. ಮತ್ತೊಬ್ಬ ಮೆಡಿಕಲ್ ಅಟೆಂಡರ್ ಹೆಸರಿನಲ್ಲಿ ಬಂದಿದ್ದಾನೆ. ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ಈ ಆರೋಪಿಗಳು ನೆಲೆಸಿದ್ದಾರೆ.

ಬಂಧಿತರಿಂದ 100 ಡಾಲರ್ ಮುಖಬೆಲೆಯ 9 ಬಂಡಲ್‌ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು 10 ಲಕ್ಷ ರೂ. ಕೊಟ್ಟರೆ ಡಾಲರ್ ರೂಪದಲ್ಲಿ 1 ಕೋಟಿ ರೂ. ಕೊಡುವುದಾಗಿ ಹೇಳಿ ವಂಚಿಸುತ್ತಿದ್ದರು. ಅದರಂತೆ ಹಣ ನೀಡುವವರಿಗೆ ನಕಲಿ ನೋಟುಗಳನ್ನು ಕೊಟ್ಟು ಆರೋಪಿಗಳು ವಂಚಿಸುತ್ತಿದ್ದರು.

ಈ ಸಂಬಂಧ ಸುಬ್ರಹ್ಮಣ್ಯನಗರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?