ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ದೇಶದಾದ್ಯಂತ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ನಿರುದ್ಯೋಗ ಸಮಸ್ಯೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ತಾಲೂಕಿನ ಬೈಲುಕುಪ್ಪೆಯಲ್ಲಿ ಕಾಂಗ್ರೆಸ್ ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಮೋದಿಯವರು ಸರ್ಕಾರದ ಅವಧಿಯಲ್ಲಿ ಅಬಕಾರಿ, ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದಲ್ಲದೇ, ಹಣದುಬ್ಬರದ ಪರಿಣಾಮದಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದರೆ. ಸರ್ಕಾರ ಸಂವಿಧಾನ ಮತ್ತು ಜನರ ಆಶಯಗಳ ವಿರುದ್ಧ ಕೆಲಸ ಮಾಡುತ್ತಿದೆ. ಅಲ್ಲದೆ ಈ ದೇಶದ ಅನ್ನದಾತರ, ಕಾರ್ಮಿಕರ ಹಾಗೂ ಅಹಿಂದ ವರ್ಗದ ವಿರುದ್ಧ ಕಾಯಿದೆಗಳನ್ನು ಜಾರಿಗೆ ತಂದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಹುನ್ನಾರ ನಡೆಸುತ್ತಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಯುಡಿಯೂರಪ್ಪ ನೇತೃತ್ವದಲ್ಲಿ ಜನ ಬೆಂಬಲವಿಲ್ಲದ ಅಪವಿತ್ರ ಸರ್ಕಾರ ಜಾರಿಗೊಳಿಸಿ ಕೊರೋನಾ ಮತ್ತು ನೆರೆ ಸಂತ್ರಸ್ತರ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿದ್ದಾರೆ ಇಂತಹ ದುಷ್ಕೃತ್ಯಗಳ ವಿರುದ್ಧಬಡವರು, ಕೂಲಿ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ದ ದಂಗೆ ಎಳುವ ಮೋದಲೆ ಸರ್ಕಾರ ಎಚ್ಚೆತ್ತುಕೋಳ್ಳಬೇಕು. ಕರೋನಾ ಸಮಯದಲ್ಲಿ ಉದ್ಯೋಗ ಕಳೆದುಕೋಂಡು ಹಲವಾರು ಜನರು ನಿರುದ್ಯೋಗಿಗಳಾಗಿದ್ದಾರೆ. ಜನರಿಗೆ ಉದ್ಯೋಗ ನೀಡುವ ಬದಲು ಜನಸಾಮಾನ್ಯರ ಮೇಲೆ ಮತ್ತಷ್ಟು ತೆರಿಗೆ ವಿಧಿಸಿ ಬಡವರ ರಕ್ತ ಹಿರುತಿದ್ದಾರೆ ಎಂದರು.
ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಬಂಡವಾಳಶಾಹಿಗಳ ಸರ್ಕಾರವಾಗಿದ್ದು ಅನ್ನ ಕೊಡುವ ರೈತನನ್ನು ಬೀದಿಗೆ ತಳ್ಳಿದ್ದಾರೆ. ದಿನನಿತ್ಯ ಬಳಕೆ ವಸ್ತುಗಳು ಗಗನಕ್ಕೇರಿವೆ.
ಹೀಗಾಗಿ ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಲ್ಲಾ ವರ್ಗದ ಬಡವರು ಬದುಕಲು ಸಾಧ್ಯ ಎಂದ ಅವರು, ಮುಂಬರುವ ತಾಲೂಕು ಜಿಲ್ಲಾ ಪಂಚಾಯಿತಿ ಚುನಾವಣೆ ಬರಲಿದ್ದು ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಹಿತ ಕಾಯಬೇಕೆಂದು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷದ ಕಚೇರಿ ನಿರ್ಮಾಣಕ್ಕೆ ಕೆಪಿಸಿಸಿ ವತಿಯಿಂದ ರೂ.20 ಲಕ್ಷ ಅನುದಾನ ನೀಡಲಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಕೆ.ವೆಂಕಟೇಶಣ್ಣಾ ಜಾಗ ಕೊಟ್ಟರೆ ಪಟ್ಟಣದಲ್ಲಿ ಭವ್ಯ ಕಚೇರಿ ನಿರ್ಮಾಣಕ್ಕೆ ಅನುದಾನ ಕೊಡುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನಾ ಮಾತನಾಡಿದರು. ವಿವಿಧ ಪಕ್ಷಗಳ ಕಾರ್ಯಕರ್ತರು ಪಕ್ಷ ತೊರೆದು ಕೆ.ವೆಂಕಟೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಬೈಲುಕುಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸದಸ್ಯರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಹಿರಿಯ ಕಾರ್ಯದರ್ಶಿ ಸಮಿಹುಲ್ಲಾ ಖಾನ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಮುಖಂಡರಾದ ಬಿ.ಎಸ್.ರಾಮಚಂದ್ರು, ಕರಡಿಪುರ ಕುಮಾರ್, ಬಿ.ಜೆ.ಬಸವರಾಜು, ಮಂಜೇಶ್, ರಾಮಸ್ವಾಮಿ, ಪಿ.ಮಹದೇವ್, ಮುತ್ತಿನ ಮುಳುಸೋಗೆ ಶಿವಕುಮಾರ್, ತಾಲ್ಲೂಕು ಬೋವಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಬೈಲುಕುಪ್ಪೆ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.