NEWSನಮ್ಮಜಿಲ್ಲೆರಾಜಕೀಯ

ಮೈಸೂರು ಡಿಸಿ ರೋಹಿಣಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದ ಮಾಜಿ ಸಚಿವ ಸಾರಾ ಮಹೇಶ್‌

ಕೋವಿಡ್‌ ಸಂಕಷ್ಟದಲ್ಲಿಲ್ಲೂ ನಿಮಗೆ ಜಿಮ್‌, ಸ್ವಿಮ್ಮಿಂಗ್‌ ಪೂಲ್‌ ಬೇಕಿತ್ತಾ ಮೇಡಂ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ನಡೆದ ದುರಂತದಲ್ಲಿ ನನ್ನ ವಿರುದ್ಧ ಮಾತನಾಡಿದವರು ಕ್ಷಮೆ ಕೇಳಲಿ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆಗೆ ಮಾಜಿ ಸಚಿವ ಸಾರಾ ಮಹೇಶ್‌ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ತಕ್ಕ ಉತ್ತರವನ್ನು ನೀಡುತ್ತೇವೆ ಎಂದು ಸವಾಲು ಎಸೆದಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೌದು! ಕೋವಿಡ್‌ ಸಂಕಷ್ಟದಲ್ಲಿಲ್ಲೂ ನಿಮಗೆ ಜಿಮ್‌, ಸ್ವಿಮ್ಮಿಂಗ್‌ ಪೂಲ್‌ ಬೇಕಿತ್ತಾ ಮೇಡಂ ಎಂದು ಜಿಲ್ಲಾಧಿಕಾರಿಯನ್ನು ಸಾರಾ ಪ್ರಶ್ನಿಸಿದ್ದಾರೆ.

ಹೀಗೆ ಪ್ರಶ್ನೆಯನ್ನು ಆರಂಭಿಸಿದ ಅವರು, ಮುಂದುವರಿದು ಒಬ್ಬ ಕನ್ನಡಿಗ ದಲಿತ ಡಿಸಿಯನ್ನು 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳಾ? ನಿಮ್ಮ ಹಾಸನದ ಪ್ರಕರಣದಲ್ಲಿ ತಕ್ಷಣ ನಿಮ್ಮ ಪರ ತೀರ್ಪು ಬಂತು. ಈಗ ಅದರ ತೀರ್ಪು ಬರದಂತೆ ಸಿಎಟಿ ಮ್ಯಾನೇಜ್ ಮಾಡಿದ್ದು ಸುಳ್ಳ? ವಾಲ್ಮೀಕಿ ಜಯಂತಿ ಆಚರಣೆಗೆ ಬರಲಿಲ್ಲ, ಬಂಡೀಪುರಕ್ಕೆ ಹೋಗಿದ್ದು ಸುಳ್ಳಾ ಎಂದು ಕೇಳಿದರು.

ಸೋಂಕಿತರಿಗೆ ಮಾತ್ರೆ ಕೊಡಲು ದುಡ್ಡಿಲ್ಲ. ಆದರೆ, ಕೊರೊನಾ ಸಂಕಷ್ಟದ ಈ ಸಮಯದಲ್ಲಿ ಜಿಮ್‌, ಸ್ವಿಮ್ಮಿಂಗ್‌ ಪೂಲ್‌ ಏಕೆ? ಅದೂ ಪಾರಂಪರಿಕ ಕಟ್ಟಡದಲ್ಲಿ ಈಜುಕೊಳಕ್ಕೆ ಅನುಮತಿ ಕೊಟ್ಟವರು ಯಾರು? ಇದಕ್ಕೆ ಹಣ ಎಲ್ಲಿಂದ ಬಂತು? ಅದು ಕಟ್ಟಿರೋದು ಸುಳ್ಳಾ? ರಾಜ್ಯದ ಸಿಎಂ, ರಾಷ್ಟ್ರದ ಪಿಎಂ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೆಯಲ್ಲಿ ಸ್ವಿಮ್ಮಿಂಗ್‌ ಪೂಲ್‌ ಇದೆಯಾ? ನಾವು, ನೀವು ಜನರಿಗೆ ಮಾದರಿಯಾಗಬೇಕು ಎಂದು ತಿರುಗೇಟು ನೀಡಿದರು.

ಇನ್ನು ಕರ್ನಾಟಕದ ಹಣವನ್ನು ತಿರುಪತಿಗೆ ಕೊಟ್ಟಿದ್ದು ಸುಳ್ಳ? ಐಎಎಸ್ ಅಧಿಕಾರಿಗಳ ಬೇಜವಾಬ್ದಾರಿಯಿಂದ ರಾಜ್ಯ ಹೊತ್ತಿ ಉರಿಯುತ್ತಿದೆ. ಈಜುಕೊಳದ ವೆಚ್ಚ 50 ಲಕ್ಷ ರೂ. ಅನ್ನು ಕೊರೊನಾ ನಿರ್ವಹಣೆಗೆ ಬಳಸಬಹುದಿತ್ತು. ನಿಮ್ಮನ್ನು ಯಾರು ಕೇಳಬೇಕು? ಇದಕ್ಕೆ ಸೂಕ್ತ ವೇದಿಕೆಯಲ್ಲಿ ತಕ್ಕ ಉತ್ತರ ನೀಡುವೆ. ಇದೆಲ್ಲಾ ಏನೇ ಇರಲಿ ನೊಂದವರ ನಿಟ್ಟುಸಿರ ಶಾಪ ನಿಮಗೆ ತಟ್ಟದೇ ಬಿಡುವುದಿಲ್ಲ ಎಂದು ಹೇಳಿದರು.

ಕೆ.ಆರ್.ನಗರದಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಅಲ್ಲಿನ ವೈದ್ಯರು ಹೆಚ್ಚಿನ ಪ್ರಮಾಣದಲ್ಲಿ ಸ್ಟೆರಾಯಿಡ್ ನೀಡುತ್ತಿದ್ದಾರೆ. ಇದು ಗೊತ್ತಿದ್ದರೆ ಕ್ರಮ ಏಕೆ ಕೈಗೊಂಡಿಲ್ಲ? ಇದಕ್ಕೆ ಜವಾಬ್ದಾರರು ಯಾರು? ಇದನ್ನು ಕೇಳುವುದೇ ತಪ್ಪಾಗಿದೆ ಅಲ್ಲವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಪಕ್ಷದವರು ಎಚ್ಚರಿಸುವ ಕೆಲಸ ಮಾಡುತ್ತೇವೆ. ಎಲ್ಲದಕ್ಕೂ ಕಾಲವೇ ಉತ್ತರ ನೀಡಲಿದೆ. ಇಲ್ಲಿ ಯಾರು ಶಾಶ್ವತ ಅಲ್ಲ, ಕಾಲ ಚಕ್ರ ಉರುಳುತ್ತದೆ. ಕೋವಿಡ್ ಮುಗಿಯಲಿ ಜಿಲ್ಲಾಧಿಕಾರಿಗಳ ವಿಚಾರವಾಗಿ ಕೆಲ ದಾಖಲೆ ಬಿಡುಗಡೆ ಮಾಡುವೆ ಎಂದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ