Vijayapatha – ವಿಜಯಪಥ
Saturday, November 2, 2024
CrimeNEWSನಮ್ಮಜಿಲ್ಲೆ

ದುಬೈನಿಂದ ಬ್ರಹ್ಮವಾರಕ್ಕೆ ಬಂದಿದ್ದ ಮಹಿಳೆ ಹತ್ಯೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬ್ರಹ್ಮಾವರ: ಬ್ರಹ್ಮಾವರದ  ಉಪ್ಪಿನಕೋಟೆಯ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ದುಬೈನಿಂದ ಭಾರತಕ್ಕೆ ಮರಳಿದ ಮಹಿಳೆಯೊಬ್ಬರ ಹತ್ಯೆಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಗಂಗೊಳ್ಳಿ ಮೂಲದ ವಿಶಾಲಾ ಗಾಣಿಗ (35) ಹತ್ಯೆಯಾದ ಮಹಿಳೆ. ಪ್ರಾಥಮಿಕ ಮೂಲಗಳ ಪ್ರಕಾರ, ಭಾನುವಾರ ಕೊಲೆ ನಡೆದಿದ್ದು ಸೋಮವಾರ ವಿಷಯ ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ದುಬೈನಿಂದ ಭಾರತಕ್ಕೆ ಮರಳಿದ ಮಹಿಳೆ ತನ್ನ ತಂದೆಯೊಡನೆ ಗಂಗೊಳ್ಳಿಗೆ ತೆರಳಬೇಕಾಗಿತ್ತು.

ಆದರೆ ಆಕೆ ಬ್ಯಾಂಕ್‌ನಲ್ಲಿ ಸ್ವಲ್ಪ ಕೆಲಸವಿದೆ ಎಂದು ತಂದೆಗೆ ಹೇಳಿ ತನ್ನ ಅಪಾರ್ಟ್ ಮೆಂಟ್ ಗೆ ಮರಳಿದ್ದಳು. ಇನ್ನು ನೀವು ಗಂಗೊಳ್ಳಿಗೆ ತೆರಳಿ ಎಂದು ವಿಶಾಲಾ ತನ್ನ ತಂದೆಗೆ ಹೇಳಿದ್ದಾರೆ. ಅಲ್ಲದೆ ತಾನು ಗಂಗೊಳ್ಳಿಗೆ ನಂತರ ಬಂದು ಭೇಟಿ ಆಗುವುದಾಗಿ ಹೇಳಿದ್ದರು.

ಆದರೆ ಗಂಗೊಳ್ಳಿಗೆ ತೆರಳಿದ ತಂದೆಗೆ ಮಗಳು ಫೋನ್‌ ಕೋಟ ಮಾಡಿಲ್ಲ, ಎಷ್ಟು ಸಮಯವಾದರೂ ವಿಶಾಲಾ ಬರಲಿಲ್ಲ. ಇದರಿಂದ ಗಾಬರಿಗೊಂಡ ಆಕೆಯ ತಂದೆ ಅವಳು ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ಗೆ ಬಂದಿದ್ದಾರೆ ಆ ವೇಳೆ ವಿಶಾಲಾ ಮೃತಪಟ್ಟಿರುವುದು ಗೊತ್ತಾಗಿದೆ.

ವಿಶಾಲಾಳ ಕುತ್ತಿಗೆಗೆ ವೈರ್‌ನಿಂದ ಬಿಗಿದು ಹತ್ಯ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇನ್ನುಂದು ಕೋನದಲ್ಲಿ ಆಕೆಯ ಕುತ್ತಿಗೆಗೆ ಆದ ಗಾಯಗಳ ಪ್ರಕಾರ, ಕೊಲೆಗಾರರು ಅವಳನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ವಿಷಯ ತಿಳಿದ ಉಡುಪಿ ಎಸ್ಪಿ ಎನ್.ವಿಷ್ಣುವರ್ಧನ್, ಡಿವೈಎಸ್ಪಿ ಕುಮಾರಚಂದ್ರ ಮತ್ತು ಇಲಾಖೆಯ ಇತರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ