CrimeNEWSನಮ್ಮಜಿಲ್ಲೆ

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ಗುಡ್ಡದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮಂಗಳವಾರ ನಡೆದ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಈ ನಡುವೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಮೈಸೂರಿನಲ್ಲಿ ನಡೆದಿರುವ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ರಾಜ್ಯದಲ್ಲಿ ಕುಸಿದುಬಿದ್ದಿರುವ ಕಾನೂನು-ಸುವ್ಯವಸ್ಥೆಗೆ ಸಾಕ್ಷಿ. ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ, ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮೈಸೂರು ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಪರಾಧಗಳ‌ ಸಂಖ್ಯೆ‌ ಹೆಚ್ಚಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. ಸಂಪುಟ ವಿಸ್ತರಣೆ ಸಂಕಟದಿಂದ ಪಾರಾಗಿ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧದ ಪ್ರಕರಣಗಳ ನಿಯಂತ್ರಣಕ್ಕೆ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲು ಮಾಡಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕೆಪಿಸಿಸಿ ವಕ್ತಾರೆ ಮಂಜುಳಾ ಮಾನಸ ಈ ಕುರಿತು ಮಾತನಾಡಿದ್ದು, ಮಂಗಳವಾರ ರಾತ್ರಿ 7.30ರ ಸುಮಾರಿಗೆ ಘಟನೆ ನಡೆದಿದೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಖಾಸಗಿ ಆಸ್ಪತ್ರೆಗೆ ಅವರೇ ಹೋಗಿ ದಾಖಲಾಗಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದರೂ ಎಫ್‌ಐಆರ್ ಬುಧವಾರ ದಾಖಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರು ನಗರದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣದ ತನಿಖೆಯ ಮೇಲುಸ್ತುವಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡವನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲು ಮಾಡಲಾಗಿದೆ. ತಕ್ಷಣ ಮೈಸೂರಿಗೆ ತೆರಳಿ ತನಿಖೆ ನೇತೃತ್ವ ವಹಿಸಿಕೊಳ್ಳುವಂತೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರತಾಪ್ ರೆಡ್ಡಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇನ್ನು ಹಿರಿಯ ಅಧಿಕಾರಿಗಳ ತಂಡ ಮೈಸೂರಿಗೆ ತೆರಳುತ್ತಿದೆ. ನುರಿತ ಅಧಿಕಾರಿಗಳ ತಂಡವನ್ನು ರಚನೆ ಮಾಡಿಕೊಂಡು ತನಿಖೆ ನಡೆಸುವಂತೆ ಪ್ರತಾಪ್ ರೆಡ್ಡಿ ಅವರಿಗೆ ಸೂಚಿಸಲಾಗಿದೆ. ಗುರುವಾರ ತಾವು ಮೈಸೂರಿಗೆ ಭೇಟಿ ನೀಡುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.

ಇನ್ನು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಮೈಸೂರು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಜನಪ್ರತಿನಿಧಿಗಳು ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು