NEWSನಮ್ಮಜಿಲ್ಲೆ

ಮೈಮುಲ್‌ನಲ್ಲಿ ಜಿಟಿಡಿ ಬಣಕ್ಕೆ ಭರ್ಜರಿ ಗೆಲುವು: ಸಾರಾ ಮಹೇಶ್‌ಗೆ ಮುಖಭಂಗ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಜೆಡಿಎಸ್‌ನಲ್ಲೇ ಎರಡು ಬಣಗಳಾಗಿ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಒಕ್ಕೂಟದ (ಮೈಮುಲ್‌) ಚುನಾವಣೆಯಲ್ಲಿ ಸ್ಪರ್ಥಿಸಿದ್ದ ಶಾಸಕ ಜಿ.ಟಿ.ದೇವೇಗೌಡ ಅವರ ಬಣ ಭರ್ಜರಿ ಗೆಲುವು ಸಾಧಿಸುವ ಮೂಲಕ ಸಾರಾ ಮಹೇಶ್‌ ಮುಖಭಂಗ ಅನುಭವಿಸುವಂತಾಯಿತು.

ಮೈಮುಲ್‌ ಆಡಳಿತ ಮಂಡಳಿಯ 15 ನಿರ್ದೇಶಕ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಜಿಟಿಡಿ ಬಣ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಶಾಸಕ ಸಾ.ರಾ.ಮಹೇಶ್‌ ಬಣವು ಕೇವಲ 3 ಸ್ಥಾನಗಳನ್ನಷ್ಟೇ ಗಳಿಸಿದೆ. ಈ ಮೂಲಕ ಜಿ.ಟಿ.ದೇವೇಗೌಡ ಅವರ ಬಣ ಮುಂದಿನ 5 ವರ್ಷದವರೆಗೆ ಮೈಮುಲ್‌ ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತವಾಗಿದೆ.

ಎಚ್‌.ಡಿ‌.ರೇವಣ್ಣ ಸಂಬಂಧಿ ಮಧುಚಂದ್ರಗೆ ಸೋಲು
ಮೈಮುಲ್ ಚುನಾವಣೆಯಲ್ಲಿ ಎಚ್‌.ಡಿ‌.ರೇವಣ್ಣ ಸಂಬಂಧಿ ಎಸ್.ಕೆ.ಮಧುಚಂದ್ರ ಸೋಲು ಅನುಭವಿಸಿದ್ದಾರೆ. ಅವರು ಎಚ್‌ಡಿಕೆ -ಸಾ.ರಾ.ಮಹೇಶ್ ಬೆಂಬಲದೊಂದಿಗೆ ಕಣಕ್ಕಿಳಿದಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಧುಚಂದ್ರ, ‘ಮೈಸೂರು ಜಿಲ್ಲೆಯಲ್ಲಿ ಜಿ.ಟಿ.ದೇವೇಗೌಡರ ಪ್ರಾಬಲ್ಯ ಒಪ್ಪಿಕೊಂಡಿದ್ದೇವೆ. ಪೂರ್ವ ಸಿದ್ಧತೆ ಇಲ್ಲದೆ ಕಣಕ್ಕಿಳಿದಿದ್ದು ಸೋಲಿಗೆ ಕಾರಣವಾಯಿತು ಎಂದು ಹೇಳಿದರು.

ಇನ್ನು ಜಿಲ್ಲೆಯಲ್ಲಿ ಜಿಟಿಡಿ ಅವರನ್ನು ಪಕ್ಕಕ್ಕೆ ಸರಿಸಲು ಜೆಡಿಎಸ್‌ ಈಗಾಗಲೇ ನಿರ್ಧಿಸಿದ್ದು, ಜಿಟಿಡಿ ಕೂಡ ಬೇರೆ ಪಕ್ಷದವರೊಂದಿಗೆ ಈಗಾಗಲೇ ಗುರುತಿಸಿಕೊಂಡಿದ್ದಾರೆ. ಈ ನಡುವೆ ಮುಂದಿನ ಚುನಾವಣೆ ಜಿಟಿಡಿ ಅವರಿಗೆ ಕಾರೇ ಮುಳ್ಳಾಗುವ ಸಾಧ್ಯತೆಯೂ ಹೆಚ್ಚಿದೆ ಎಂದು ನಂಬಲಾರ್ಹ ಮೂಲಗಳು ತಿಳಿಸಿವೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ