NEWSನಮ್ಮಜಿಲ್ಲೆರಾಜಕೀಯ

ಹಾನಗಲ್ ಕ್ಷೇತ್ರ: ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಬಿಜೆಪಿ ಶಾಸಕ ಸಿ.ಎಂ. ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಟಿಕೆಟ್ ಫೈಟ್ ಶುರುವಾಗಿದೆ.

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನೇತೃತ್ವದಲ್ಲಿ ಕೆಲವು ಕಾಂಗ್ರೆಸ್ ಕಾರ್ಯರ್ತರು ಮತ್ತು ಮುಖಂಡರು ನಿನ್ನೆ ಸಭೆ ನಡೆಸಿದ್ದಾರೆ. ಹಾನಗಲ್ ತಾಲೂಕಿನವರಿಗೆ ಪಕ್ಷದ ಟಿಕೆಟ್ ನೀಡುವಂತೆ ಸಭೆಯಲ್ಲಿ ಒತ್ತಾಯ ಮಾಡಿದ್ದು, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆಗೆ ಪಕ್ಷದ ಟಿಕೆಟ್ ನೀಡದಂತೆ ಪರೋಕ್ಷವಾಗಿ ಒತ್ತಾಯ ಕೇಳಿಬಂದಿದೆ.

ಹಾನಗಲ್ ತಾಲೂಕಿನ ಯಾರಿಗಾದರೂ ಟಿಕೆಟ್ ನೀಡುವಂತೆ ಗ್ರಾಮ ಮಟ್ಟದಿಂದ ಹೋರಾಟ ಮಾಡಲು ನಿರ್ಧಾರ ಮಾಡಿದ್ದು, ಒಂದು ವೇಳೆ ತಾಲೂಕಿನವರನ್ನು ಬಿಟ್ಟು ಅನ್ಯರಿಗೆ ಟಿಕೆಟ್‌ ನೀಡಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ ರವಾನಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಮತ್ತು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಸೇರಿದಂತೆ ಪಕ್ಷದ ಹಲವು ಮುಖಂಡರು ಟಿಕೆಟ್ ಆಕಾಂಕ್ಷಿಗಳಾಗಿದ್ದು, ಈ ನಡುವೆ ಪಕ್ಷದ ಹೈ ಕಮಾಂಡ್‌ ತಾಲೂಕಿನವರು ಯಾರೇ ಆಗಲಿ ಅವರಿಗೆ ಟಿಕೆಟ್‌ ನೀಡಿದರೆ ಗೆಲುವಿಗೆ ಎಲ್ಲರೂ ಒಂದುಗೂಡಿ ಶ್ರಮಿಸೋಣ ಎಂಬ ಸಂದೇಶವನ್ನು ಕಾರ್ಯಕರ್ತರಿಗೆ ಸಭೆಯಲ್ಲಿ ನೀಡಿದ್ದಾರೆ ಎನ್ನಲಾಗಿದೆ.

Leave a Reply

error: Content is protected !!
LATEST
ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ