NEWSನಮ್ಮಜಿಲ್ಲೆರಾಜಕೀಯ

ತಾಕತ್ತಿದ್ದರೆ ಇಂಧನ ದರ ಇಳಿಸಲು ಹೇಳಿ : ಶ್ರೀನಿವಾಸ್‌ ಪ್ರಸಾದ್‌ಗೆ ಎಚ್‌ಸಿಎಂ ಗುದ್ದು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚುನಾವಣೆ ಬಂದಾಗ ಸ್ಪರ್ಧಿಸುವ ಕುರಿತು ಯೋಚಿಸೋಣ. ಈಗ ನಿಮಗೆ ತಾಕತ್ತಿದ್ದರೆ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಳೆಯನ್ನು ಕಡಿಮೆ ಮಾಡಿಸಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್‌ಗೆ ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಸವಾಲು ಹಾಕಿದ್ದಾರೆ.

ಜನ ಸಾಮಾನ್ಯರಿಗೆ ಉಪಯೋಗವಾಗುವ ಅಭಿವೃದ್ಧಿ ಕೆಲಸವನ್ನು ಮಾಡುವ ಬದ್ಧತೆಯಿಲ್ಲದಿದ್ದರೂ ಇಂತಹ ಮಾತುಗಳನ್ನಾಡಲು ಕಮ್ಮಿಯಿಲ್ಲ. ಸಂಸದರಾದ ಪ್ರಸಾದ್ ಅವರೇ ಚುನಾವಣೆ ಬಂದಾಗ ಸ್ಪರ್ಧಿಸುವ ಕುರಿತು ಯೋಚಿಸೋಣ. ಈಗ ನಿಮಗೆ ತಾಕತ್ತಿದ್ದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿಸಿ ತೋರಿಸಿ ಎಂದು ಕಿಡಿಕಾರಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ದನಿ ಎತ್ತಿ. ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲನ್ನು ಕೇಳಿ. ಅಧಿಕಾರದ ಅವಧಿಯಲ್ಲಿ ಸಾಧ್ಯವಾದರೆ ಜನ ಸಾಮಾನ್ಯರಿಗೆ ಅನುಕೂಲವಾಗುವಂತಹ ಒಂದಷ್ಟು ಉತ್ತಮ ಕೆಲಸವನ್ನು ಮಾಡಿ ಎಂದು ಸಲಹೆ ನೀಡಿದ್ದಾರೆ.

ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು ತಾಕತ್ತು, ಗತ್ತು ಗಮ್ಮತ್ತು, ಗೈರತ್ತು ಎಂದುಕೊಂಡು ಕಾಲಹರಣ ಮಾಡುತ್ತಾ ಅರ್ಥವಿಲ್ಲದಂತೆ ಮಾತನಾಡಬೇಡಿ. ಯಾರ ತಾಕತ್ತು ಅವರಿಗಿರುತ್ತದೆ.

ಹೀಗಾಗಿ ನಿಮಗೆ ನಿಜವಾಗಲೂ ತಾಕತ್ತಿದ್ದರೆ ಇರುವ ಅಧಿಕಾರವನ್ನು ಬಳಸಿಕೊಂಡು ಜನ ಸಾಮಾನ್ಯರ ಬದುಕಿಗೆ ನೆರವಾಗಿ, ಇಲ್ಲದೇ ಇದ್ದರೆ ನೀವು ಬರೀ ಮಾತಿನ ಶೂರ, ಪ್ರಚಾರಕ್ಕೆ ಮಾತನಾಡುವ ವ್ಯಕ್ತಿ ಎಂಬುದನ್ನು ಒಪ್ಪಿಕೊಳ್ಳಿ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ