NEWSನಮ್ಮಜಿಲ್ಲೆರಾಜಕೀಯ

ಅಕ್ರಮ ಕಲ್ಲು ಗಣಿಗಾರಿಕೆಗೆ ಎಚ್.ಡಿ.ಕುಮಾರಸ್ವಾಮಿಯೇ ಪ್ರಮುಖ ರೂವಾರಿ: ಎಎಪಿ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಹಳೇ ಮೈಸೂರು ಭಾಗದ ವಿವಿಧೆಡೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ಆಪ್ತರಿಂದ ಭಾರೀ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ರಾಜ್ಯ ಬಿಜೆಪಿ ಸರ್ಕಾರವು ಇದಕ್ಕೆ ಬೆಂಬಲವಾಗಿ ನಿಂತಿದೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆರೋಪಿಸಿದರು.

ಗುರುವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಆರ್‌ಎಸ್‌ ನಿರ್ಮಾಣದ ಹಿಂದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಸರ್‌ ಎಂ. ವಿಶ್ವೇಶ್ವರಯ್ಯ ಮುಂತಾದ ಮಹನೀಯರ ಶ್ರಮವಿದೆ. ಲಕ್ಷ ಎಕರೆಗೂ ಅಧಿಕ ಭೂಮಿಗೆ ಕೆಆರ್‌ಎಸ್‌ ನೀರುಣಿಸುತ್ತಿದೆ.

ಆದರೆ ಕೆಆರ್‌ಎಸ್‌ ಸಮೀಪ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದರಿಂದ ಅಣೆಕಟ್ಟೆ ಒಡೆದು ಹೋದರೆ ಭಾರೀ ಅನಾಹುತ ಸಂಭವಿಸಲಿದೆ. ಇದನ್ನು ಅರ್ಥ ಮಾಡಿಕೊಳ್ಳದ ಕುಮಾರಸ್ವಾಮಿಯವರು ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ಸುಮಲತಾ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ನಾಚಿಕೆಗೇಡು ಎಂದು ಹೇಳಿದರು.

ಕೆಆರ್‌ಎಸ್‌ನಿಂದ ಕೇವಲ ಹತ್ತು ಕಿಮೀ ದೂರದಲ್ಲಿರುವ ಬೇಬಿ ಬೆಟ್ಟದಲ್ಲಿ ಸದ್ಯ 80ಕ್ಕೂ ಹೆಚ್ಚು ಕ್ರಷರ್‌ಗಳಿದ್ದು, ಈ ಪೈಕಿ 50 ಕ್ರಷರ್ ಅನಧಿಕೃತ. ಹಂಗರಹಳ್ಳಿಯಿಂದ ಪ್ರತಿದಿನ 500ಕ್ಕೂ ಹೆಚ್ಚು ಲಾರಿಗಳಲ್ಲಿ ಕಲ್ಲುಗಳು ಹೋಗುತ್ತಿವೆ. ಅಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ನ ಅನೇಕ ಮುಖಂಡರು ಶಾಮೀಲಾಗಿದ್ದಾರೆ.

ದಂಧೆಯ ಪ್ರಮುಖ ರೂವಾರಿಯಾಗಿ ಕುಮಾರಸ್ವಾಮಿ ಇವೆಲ್ಲದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಅವರಿಗೆ ಸಹಾಯಕರಾಗಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಪುಟ್ಟರಾಜು ಇದ್ದಾರೆ ಎಂದು ಜಗದೀಶ್ ವಿ .ಸದಂ ದೂರಿದರು.

ಪಕ್ಷದ ಕಾನೂನು ವಿಭಾಗದ ರಾಜ್ಯಾಧ್ಯಕ್ಷ ನಂಜಪ್ಪ ಕಾಳೇಗೌಡ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ, ರಾಮನಗರ, ಚನ್ನಪಟ್ಟಣ, ಮಂಡ್ಯ, ಮೈಸೂರು, ಕನಕಪುರ ಭಾಗಗಳಲ್ಲಿ ರಾಜ್ಯದ ನೈಸರ್ಗಿಕ ಸಂಪತ್ತು ಅವ್ಯಾಹತವಾಗಿ ಲೂಟಿಯಾಗುತ್ತಿದ್ದು, ಸರ್ಕಾರದ ಬೊಕ್ಕಸ ಸೇರಬೇಕಾಗಿದ್ದ ಸಾವಿರಾರು ಕೋಟಿ ರೂಪಾಯಿ ರಾಜಸ್ವ ಧನವು ರಾಜಕಾರಣಿಗಳು ಹಾಗೂ ಉದ್ಯಮಿಗಳ ಪಾಲಾಗುತ್ತಿದೆ ಎಂದರು.

ಈ ಹಿಂದೆ ಎಎಪಿ ತಂಡವು ಸ್ವತಃ ಬೇಬಿ ಬೆಟ್ಟಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ನಮ್ಮ ಒತ್ತಡಕ್ಕೆ ಮಣಿದು ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಗೆ ಸರ್ಕಾರ ತಕ್ಷಣವೇ ಬ್ರೇಕ್‌ ಹಾಕಿತ್ತು. ಆದರೆ ಕೆಲ ದಿನಗಳ ನಂತರ ಮತ್ತೆ ಅಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದೆ. ನಾವು ಸರ್ಕಾರಕ್ಕೆ ಅನೇಕ ಪತ್ರಗಳನ್ನು ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರು ಅಕ್ರಮಕ್ಕೆ ಸಹಕಾರ ನೀಡುತ್ತಾ ಆಡಳಿತ ನಡೆಸುವ ಬದಲು ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ, ಇಲ್ಲವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಪಕ್ಷದ ಮುಖಂಡರಾದ ಪ್ರಕಾಶ್ ನಾಗರಾಜ್, ವಿಜಯ ಶಾಸ್ತ್ರಿಮಠ ಇನ್ನಿತರರು ಇದ್ದರು.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ