NEWSನಮ್ಮಜಿಲ್ಲೆನಮ್ಮರಾಜ್ಯ

ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ವಸತಿ ಸಚಿವ ಸೋಮಣ್ಣ ತಾಕೀತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೋವಿಂದರಾಜ ನಗರ ವಿಧಾನ‌ಸಭಾ ಕ್ಷೇತ್ರ ವ್ಯಾಪ್ತಿಯ ನಾಯಂಡಹಳ್ಳಿ ಕೆರೆ ಮತ್ತು ನಿರ್ಮಾಣ ಹಂತದಲ್ಲಿರುವ ಸರ್ಕಾರಿ ಆಸ್ಪತ್ರೆ ಕಟ್ಟಡದ ಕಾಮಗಾರಿ ಸ್ಥಳಗಳನ್ನು ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಭಾನುವಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

ನಾಯಂಡಹಳ್ಳಿ‌ ಕೆರೆಯು ಸುಮಾರು 15 ಎಕರೆ ಪ್ರದೇಶದಲ್ಲಿದ್ದು, ವೃಷಭಾವತಿ ಕಾಲುವೆಯಲ್ಲಿ ಹೋಗುವ ನೀರನ್ನು ಸಂಸ್ಕರಿಸಿ ಶುದ್ದ ನೀರನ್ನು ಕೆರೆಗೆ ಬಿಡುವ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ 3-4 ತಿಂಗಳಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಇದೇ ವೇಳೆ ಸಚಿವ ವಿ.ಸೋಮಣ್ಣ ತಾಕೀತು ಮಾಡಿದರು.

ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಂಡಹಳ್ಳಿ ಕೆರೆಯನ್ನು ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ನೀರು ಶುದ್ಧೀಕರಣ ಘಟಕ, ಯೋಗಾ ಕೇಂದ್ರ, ವಾಯು ವಿಹಾರ, ಬೋಟಿಂಗ್, ಮಕ್ಕಳ ಆಟಿಕೆ ಜಿಮ್, ವಯಸ್ಕರಿಗೆ ಹೊರಾಂಗಣ ವ್ಯಾಯಾಮ, ಜಿಮ್ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಕೈಗೊಂಡು ಕೆರೆಯ ಅಂಗಳದಲ್ಲಿ ಸುಂದರ ವಾತಾವರಣ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (200 ಬೆಡ್ ವ್ಯವಸ್ಥೆಯ) ಕಟ್ಟಡ ಕಾಮಗಾರಿ ತಪಾಸಣೆ: ಪಂಥರಪಾಳ್ಯ(ನಾಯಂಡಹಳ್ಳಿ ರೈಲ್ವೆ ನಿಲ್ದಾಣದ ದಾರಿ) ಕೋಳಗೇರಿ ಕಟ್ಟಡದ ಪಕ್ಕ ಖಾಲಿಯಿತುವ 4.16 ಎಕರೆ ಪ್ರದೇಶದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದ್ದು, ಮುಂದಿನ 7-8 ತಿಂಗಳಲ್ಲಿ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಆಸ್ಪತ್ರೆಯ ಆವರಣದ ಸುತ್ತ ನೀರು ನುಗ್ಗದಂತೆ ಡ್ರೈನ್ ಕಾಮಗಾರಿ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಆಸ್ಪತ್ರೆ ನಿರ್ಮಾಣದ ಮುಂಭಾಗ ರಸ್ತೆ ಬದಿ ಟ್ರಾನ್ಸ್ ಫಾರ್ಮರ್ ಇದ್ದು ಅದನ್ನು ಕೂಡಲೆ ಬೇರೆಡೆ ಪಕ್ಕದ ಸ್ಥಳಕ್ಕೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಈ ವೇಳೆ ಮುಖ್ಯ ಅಭಿಯಂತರರು, ಶ್ರೀ.ಮೃತ್ಯುಂಜಯ ಮುಖ್ಯ ಅಭಿಯಂತರರು, ಶ್ರೀ.ಗಂಗಾಧರ್, ಮುಖ್ಯ ಅಭಿಯಂತರರು(ಜಲಮಂಡಳಿ), ಮಯಖ್ತ ಆರೋಗ್ಯಾಧಿಕಾರಿ(ಕ್ಲಿನಿಕಲ್) ಡಾ. ನಿರ್ಮಲಾ ಬುಗ್ಗಿ, ವಲಯ ಆರೋಗ್ಯಾಧಿಕಾರಿ ಡಾ. ಮನೋರಂಜನ್ ಹೆಗ್ಡೆ , ಡಾ.ಮಂಜುಳ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ