NEWSನಮ್ಮಜಿಲ್ಲೆ

ಪಪಂಆಗಿ ತ್ಯಾಮಗೊಂಡ್ಲನ್ನು ಮೇಲ್ದರ್ಜೆಗೇರಿಸಲು ಎಚ್.ವಿ.ದೊಡ್ಡೇರಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಸದಸ್ಯ ಎಚ್.ವೆಂಕಟೇಶ್ ದೊಡ್ಡೇರಿ ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ನೆಲಮಂಗಲ ತಾಲೂಕಿನ ದಾಬಸ್‌ಪೇಟೆ, ತ್ಯಾಮಗೊಂಡ್ಲು ಮತ್ತು ನೆಲಮಂಗಲ ನಗರಗಳಿಗೆ ಎತ್ತಿನಹೊಳೆ ಯೋಜನೆಯಿಂದ ಕುಡಿಯುವ ನೀರು ಮತ್ತು ಕೆರೆಗಳಿಗೆ “ಊರಿಗೊಂದು ಕೆರೆ, ಆ ಕೆರೆಗೆ ನದಿಯ ನೀರು” ಯೋಜನೆಯಡಿ ಶಾಶ್ವತ ನೀರು ಸರಬರಾಜು ಮಾಡುವಂತೆ ಕೋರಿಯೂ ಮನವಿ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವಲೋಚನ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?