Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಅಕ್ರಮ ಗಣಿಗಾರಿಕೆ: ಸಂಸದೆ ಸುಮಲತಾರಿಗೆ ರೈತ ಸಂಘ ಬೆಂಬಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧದ ಸಂಸದೆ ಸುಮಲತಾ ಅವರ ಹೋರಾಟಕ್ಕೆ ರೈತ ಸಂಘ ಸದಾ ಬೆಂಬಲ ನೀಡಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮೈಸೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲಾಶಯದ ಸುತ್ತಮುತ್ತಲಿನ 20 ಕಿ. ಮೀ. ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಅಥವಾ ಸಕ್ರಮ ಯಾವುದೇ ಗಣಿಗಾರಿಕೆಯಾಗಲೀ, ಅದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು, ಈ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ರೈತರ ಜೀವನಾಡಿ ಕೆಆರ್‌ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಜಲಾಶಯದ ಅಸ್ತಿತ್ವಕ್ಕೆ ಅಪಾಯವಿದೆ. ಇದರ ಮೇಲೆ ಅವಲಂಬಿತರಾಗಿರುವ ಸಾವಿರಾರು ಜನರ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನು ಮಂಡ್ಯ ಜಿಲ್ಲೆಯಲ್ಲಿ ಮಾತ್ರ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ ರಾಜ್ಯದ ವಿವಿಧೆಡೆ ಇದರ ಬೇರು ಹಬ್ಬಿದೆ. ಹೀಗಾಗಿ ಅದನ್ನು ಬೇರು ಸಮೇತ ಕಿತ್ತುಹಾಕಲು ಸರ್ಕಾರವೂ ದೃಢ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...