NEWSನಮ್ಮಜಿಲ್ಲೆರಾಜಕೀಯ

ವ್ಯಕ್ತಿಗತ ಟೀಕೆ ಸಲ್ಲ: ವಿಧಾನ ಪರಿಷತ್ ಸದಸ್ಯ ವಿಶ್ವನಾಥ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೆಲವು ರಾಜಕೀಯ ನಾಯಕರನ್ನು ವ್ಯಕ್ತಿಗತವಾಗಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಟೀಕಿಸಿರುವುದು ತಪ್ಪು. ಯಾರನ್ನೂ ಮಾನಸಿಕವಾಗಿನೋಯಿಸಬಾರದು ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಕ್ತಿಗತವಾಗಿ ಯಾರನ್ನೂ ಟೀಕಿಸಿದರೂ ಅದು ತಪ್ಪು. ಯಾರನ್ನೂ ಮಾನಸಿಕವಾಗಿ ನೋಯಿಸ ಬಾರದು ಎಂದರು.

ಇನ್ನು ಪ್ರಸ್ತುತ ನಡೆಯುತ್ತಿರುವ ವಿಧಾನಪರಿಷತ್ ಚುನಾವಣೆಯು ಮತ ಸಂತೆಯಾಗಿದೆ ಎಂದು ಆರೋಪಿಸಿದರು. ಮೊನ್ನೆ ಕೆಲವು ಗ್ರಾಮ ಪಂಚಾಯಿತಿ ಸದಸ್ಯರು ಮನೆಗೆ ಬಂದು ‘ಬಜಾರ್’ ಎಷ್ಟು ನಡೆಯುತ್ತಿದೆ ಎಂದು ಕೇಳಿದರು.

ಹಾಸನದಲ್ಲಿ 50 ಸಾವಿರ ರೂ.ಗಳಿಂದ 1 ಲಕ್ಷ ರೂ.ವರೆಗೆ ನಡೆಯುತ್ತಿದೆ. ಇಲ್ಲಿ ಎಷ್ಟು ಎಂದು ಕೇಳಿದರು. ಹೀಗಾಗಿ ಈ ಚುನಾವಣೆಯನ್ನು ಯಾವ ಸ್ಥಿತಿಗೆ ತಂದು ನಿಲ್ಲಿಸಿದ್ದೇವೆ ಎಂಬುದನ್ನು ಎಲ್ಲ ರಾಜಕೀಯ ನಾಯಕರು ಆತ್ಮಾಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.

ಚುನಾವಣೆಯಲ್ಲಿ ಸ್ಪರ್ಧಿಸುವವರು ಕನಿಷ್ಠ 40 ಕೋಟಿ ರೂ.ಗಳಿಂದ 1,700 ಕೋಟಿ ರೂ.ವರೆಗೆ ಆಸ್ತಿ ಘೋಷಿಸಿಕೊಂಡಿದ್ದಾರೆ. ಇಂತಹವರಿಗೆ ಟಿಕೆಟ್ ನೀಡಿದ ರಾಜಕೀಯ ಪಕ್ಷದ ಮುಖಂಡರಿಗೆ ಚುನಾವಣೆಯನ್ನು ದಿಕ್ಕೆಡಿಸುತ್ತಿದ್ದೇವೆ ಎಂದು ಅನ್ನಿಸುವುದಿಲ್ಲವೆ. ಈಮೂಲಕ ಸಿದ್ದರಾಮಯ್ಯ , ಯಡಿಯೂರಪ್ಪ , ಕುಮಾರಸ್ವಾಮಿ ರಾಜ್ಯದ ಜನರಿಗೆ ನೀಡುತ್ತಿರುವ ಸಂದೇಶವಾದರೂ ಏನು ಎಂದು ಪ್ರಶ್ನಿಸಿದರು.

ಈಗಾಗಲೇ ಚುನಾಯಿತರಾಗಿರುವ ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಚುನಾವಣಾ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಮನವಿಮಾಡಿದರು.

ಕೋವಿಡ್‌ ಹೊಸ ವೈರಸ್ ಈಗಾಗಲೇ ರಾಜ್ಯಕ್ಕೆ ಬಂದಿದೆ. ಶಾಲೆಗಳಲ್ಲಿ ದನ ಕುರಿಗಳನ್ನು ತುಂಬಿದಂತೆ ಮಕ್ಕಳನ್ನು ಕೊಠಡಿಗಳಲ್ಲಿ ಕೂರಿಸುತ್ತಿದ್ದಾರೆ. ಶಿಕ್ಷಣ ಸಚಿವರು ಎಚ್ಚರಿಕೆಯಿಂದ ತೀರ್ಮಾನ ಕೈಗೊಳ್ಳಬೇಕು. 7ನೇ ತರಗತಿವರೆಗೂ ಮನೆಪಾಠವೇ ಮಕ್ಕಳಿಗೆ ಸಾಕು. ತಜ್ಞರ ಸಮಿತಿಯ ಶಿಫಾರಸ್ಸುಗಳನ್ನು ಚಾಚೂತಪ್ಪದೇ ಪಾಲಿಸಬೇಕು ಎಂದು ಸಲಹೆ ನೀಡಿದರು.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ