NEWSನಮ್ಮಜಿಲ್ಲೆರಾಜಕೀಯ

ಜೆಡಿಎಸ್ ಹಿರಿಯ ಮುಖಂಡ ತಮ್ಮಣ್ಣೇಗೌಡ ಕಾಂಗ್ರೆಸ್ ಸೇರ್ಪಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ಕಿರಂಗೂರು ಗ್ರಾಮದ ಹಿರಿಯ ಮುಖಂಡ ತಮ್ಮಣ್ಣೇಗೌಡ (ಕಲ್ಲಹಳ್ಳಿ ಕರೀಗೌಡ)ರ ಕುಟುಂಬಸ್ಥರು ಹಾಗೂ ಅವರ ಬೆಂಬಲಿಗರು ಮಾಜಿ ಶಾಸಕ ಕೆ.ವೆಂಕಟೇಶ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್‍ ಸೇರ್ಪಡೆಯಾದರು.

ತಾಲೂಕಿನ ಕಿರಂಗೂರು ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಲ್ಲಹಳ್ಳಿ ಕರೀಗೌಡ, ಜೆಡಿಎಸ್ ಯುವ ಮುಖಂಡರಾದ ಕುಮಾರ್, ಗಿರೀಶ್, ರಾಮಚಂದ್ರ, ನವೀನ್ ಸೇರಿದಂತೆ ಅವರ ಕುಟುಂಬ ವರ್ಗದವರು ಕಾಂಗ್ರೆಸ್‍ ಸೇರ್ಪಡೆಗೊಂಡರು.

ಈ ವೇಳೆ ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರ ಇದ್ದು,‌ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದೆ. ಎಲ್ಲ ಸಮುದಾಯದವರನ್ನು ಒಗ್ಗೂಡಿಸಿ ದೇಶ ಕಟ್ಟಲು ಪಣತೂಟ್ಟಿದೆ.

ಜಾತ್ಯತೀತ ನಿಲುವು ಹೂಂದಿರುವ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ನಂಬಿ ಪಕ್ಷಕ್ಕೆ ಬಂದಿರುವುದು ಅತೀವ ಸಂತಸವಾಗಿದೆ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುತ್ತಿದ್ದು, ಎಲ್ಲರೂ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ಎಪಿಎಂಸಿ ಸದಸ್ಯ ಚಂದ್ರೇಗೌಡ, ಪಿರಿಯಾಪಟ್ಟಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಜೆ.ಬಸವರಾಜು, ರಾಹುಲ್ ಗಾಂಧಿ ವಿಚಾರ ಮಂಚ್ ತಾಲ್ಲೂಕು ಅಧ್ಯಕ್ಷ ಕಿರಂಗೂರು ಮಂಜು, ಮುಖಂಡರಾದ ಭೂತನಹಳ್ಳಿ ಕರಿಗೌಡ, ಪುನಾಡಹಳ್ಳಿ ಸ್ವಾಮಿಗೌಡ, ಬಿ.ಎಸ್.ರಾಮಚಂದ್ರು, ಸುರೇಶ್, ಜೆ.ಮೋಹನ್, ಮಹೇಂದ್ರಕುಮಾರ್, ಪರಶಿವ ಮೂರ್ತಿ, ಮುರುಳೀಧರ್, ಗಂಗಾಧರ್, ಮಂಜು, ಗಿರೀಶ್, ಸೇರಿದಂತೆ ಮತ್ತಿತರರು ಇದ್ದರು.

Leave a Reply

error: Content is protected !!
LATEST
"ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ