CrimeNEWSನಮ್ಮಜಿಲ್ಲೆ

ಅಕ್ಕನ ಶೀಲ ಶಂಕಿಸಿದ ಭಾವನ ಕೊಚ್ಚಿ ಕೊಂದ ಭಾಮೈದ, ಪೊಲೀಸರಿಗೆ ಶರಣಾದ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಅನೈತಿಕ ಸಂಬಂಧವಿದೆ ಎಂದು ಅಕ್ಕನಿಗೆ ಕಿರುಕುಳ ನೀಡುತ್ತಿದ್ದ ಭಾವನನ್ನು ಭಾಮೈದನೇ ಭೀಕರವಾಗಿ ಕೊಲೆ ಮಾಡಿದ ಬಳಕ ಆತನ ಕೈ ಕತ್ತರಿಸಿ ಅವುಗಳ ಸಮೇತ ಪೊಲೀಸರಿಗೆ ಶರಣಾಗಿರುವ ಘಟನೆ ಉದಯಗಿರಿಯಲ್ಲಿ ನಡೆದಿದೆ.

ಗೌಸಿಯಾ ನಗರದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಹಮದ್ ಸರಾನ್(27)ಎಂಬಾತ ಭೀಕರವಾಗಿ ಕೊಲೆಯಾದವ. ಈ  ಭಾಮೈದ ಕದೀರ್‌ ಪೊಲೀಸ್‌ ಠಾಣೆಗೆ ತಾನೆ ಹೋಗಿ ಶರಣಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಮಹಮದ್ ಸರಾನ್ ಮತ್ತು ರೂಬಿನಾ ಕಳೆದ ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಪತ್ನಿಗೆ ಬೇರೊಬ್ಬನ ಜೊತೆ ಅನೈತಿಕ ಸಂಬಂಧವಿದೆ ಎಂದು ಸರಾನ್ ಕಿರುಕುಳ ನೀಡುತ್ತಿದ್ದನು ಎಂದು ಹೇಳಲಾಗುತ್ತಿದೆ.

ಹೀಗಾಗಿ ಇವರಿಬ್ಬರ ನಡುವೆ ಪದೇಪದೆ ಜಗಳ ನಡೆಯುತ್ತಿತ್ತು. ಹಿರಿಯರು ಪಂಚಾಯಿತಿ ಮಾಡಿ ರಾಜಿ ಸಂಧಾನ ಮಾಡಿಸಿದ್ದರು. ಆದರೂ ತನ್ನ ಚಾಳಿಯನ್ನು ಸುರಾನ ಮುಂದುವರಿಸಿದ್ದ ಎಂದು ಹೇಳಲಾಗಿದೆ.

ಸರಾನ್ ಮತ್ತೆ ಮತ್ತೆ ಇದೇ ವಿಷಯವಾಗಿ ರೂಬಿನಾಳ ಜೊತೆ  ಗಲಾಟೆ ಮಾಡುತ್ತಿದ್ದ. ಇದೇ ಸಂದರ್ಭದಲ್ಲಿ ರೂಬಿನಾಳ ಸಹೋದರರಾದ ಖಲೀಂ ಪಾಷಾ, ಅಜ್ಮನ್ ಪಾಷಾ, ಹಲ್ಮತ್ ಪಾಷಾ ಮತ್ತು ಕದೀರ್ ಸರಾನ್ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ಬೀಸಿ ಕೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಹತ್ಯೆ ಮಾಡಿದ ನಂತರ ಕತ್ತರಿಸಿದ ಸರಾನ್ ಕೈಗಳನ್ನು ಚೀಲದಲ್ಲಿಟ್ಟುಕೊಂಡು ಕದೀರ್ ಉದಯಗಿರಿ ಪೊಲೀಸ್ ಠಾಣೆ ಬಂದು ಶರಣಾಗಿದ್ದಾನೆ. ಪೊಲೀಸರು ಈತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ